< ಇಬ್ರಿಯರಿಗೆ ಬರೆದ ಪತ್ರಿಕೆ 6 >
1 ೧ ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ. (aiōnios )
Konsa, nan kite enstriksyon elemantè sou Kris la, annou pouse de lavan vè matirite. Nou p ap poze ankò yon fondasyon repantans ki soti nan zèv mò yo, ak lafwa anvè Bondye,
lenstriksyon sou lave ak poze men yo, rezirèksyon a mò yo ak jijman etènèl la. (aiōnios )
3 ೩ ದೇವರು ಅನುಮತಿಸುವುದಾದರೆ ನಾವು ಇವುಗಳನ್ನು ಮಾಡುವೆವು.
Tout sa nou va fè si Bondye kite l fèt.
4 ೪ ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,
Paske nan ka a sila ki, yon fwa, te eklere yo, ki te goute kado selès la, ki te vin patisipan nan Lespri Sen yo,
5 ೫ ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, (aiōn )
te goute bon pawòl Bondye a ak pouvwa a tan k ap vini an, (aiōn )
6 ೬ ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.
e ki answit, te vin tonbe, se enposib pou renouvle yo ankò a repantans, paske yo ankò krisifye pou kont yo Fis Bondye a e ekspoze Li a lawont piblik.
7 ೭ ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.
Paske tè ki bwè lapli ki tonbe souvan sou li a, e ki pote plant ki itil a sila k ap kiltive tè a, resevwa benediksyon a Bondye.
8 ೮ ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.
Men si li pote pikan ak zepeng, li san valè e prèt pou vin madichonnen, e fini pa brile.
9 ೯ ಪ್ರಿಯರೇ, ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮರಾಗಿದ್ದೀರೆಂದು ನಂಬಿದ್ದೇವೆ.
Men byeneme yo, nou konvenk de pi bon bagay konsènan nou menm yo, bagay ki akonpanye Sali yo, malgre se konsa n ap pale.
10 ೧೦ ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
Paske Bondye pa enjis pou Li ta bliye travay nou ak lanmou ke nou montre anvè non Li, ke nou te bay e kontinye ap bay a sen yo.
11 ೧೧ ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.
Nou dezire ke nou chak montre menm dilijans lan pou nou kapab gen yon espwa ranpli nan asirans konplè jiska lafen,
12 ೧೨ ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.
pou nou pa vin mou, men rete imitatè a sila ki, atravè lafwa ak tenasite, te vin eritye pwomès yo.
13 ೧೩ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,
Paske lè Bondye te fè pwomès la a Abraham, akoz ke Li pa t kapab sèmante pa okenn pi gran, Li te sèmante pa pwòp tèt Li.
14 ೧೪ “ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಅಭಿವೃದ್ಧಿಪಡಿಸುವೆನು” ಎಂದು ಹೇಳಿದನಷ್ಟೆ.
Li te di: “Byensi Mwen va beni ou, e byensi, Mwen va miltipliye nou.”
15 ೧೫ ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.
Konsa, nan tann li avèk anpil andirans, Abraham te resevwa pwomès la.
16 ೧೬ ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.
Paske moun toujou sèmante pa yon moun ki pi gran pase yo, e nan nenpòt malantandi yon sèman ki fèt avèk yon akò fèmen tout diskisyon.
17 ೧೭ ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.
Nan menm fason an, Bondye, ak volonte pou menm plis montre eritye pwomès yo ke bi Li a pa kab chanje, Li te pale avèk yon sèman.
18 ೧೮ ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.
Pouke pa de bagay ki pa kab chanje yo, pa sila ke li enposib pou Bondye bay manti, nou menm ki te pran refij nan Kris la, nou genyen yon gwo ankourajman pou kenbe esperans ki plase devan nou an.
19 ೧೯ ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.
Lesperans sa a ke nou gen kòm lank pou nanm nou an, yon esperans ki asire e solid, youn ki menm antre anndan vwal tanp lan,
20 ೨೦ ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ. (aiōn )
kote Jésus te deja antre kòm youn ki kouri devan pou nou, e te devni yon wo prèt pou tout tan nan lòd Melchisédek la. (aiōn )