< ಇಬ್ರಿಯರಿಗೆ ಬರೆದ ಪತ್ರಿಕೆ 6 >

1 ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ. (aiōnios g166)
इस लिए आएँ, हम मसीह के बारे में बुनियादी तालीम को छोड़ कर बलूग़त की तरफ़ आगे बढ़ें। क्यूँकि ऐसी बातें दोहराने की ज़रूरत नहीं होनी चाहिए जिन से ईमान की बुनियाद रखी जाती है, मसलन मौत तक पहुँचाने वाले काम से तौबा,
2
बपतिस्मा क्या है, किसी पर हाथ रखने की तालीम, मुर्दों के जी उठने और हमेशा सज़ा पाने की तालीम। (aiōnios g166)
3 ದೇವರು ಅನುಮತಿಸುವುದಾದರೆ ನಾವು ಇವುಗಳನ್ನು ಮಾಡುವೆವು.
चुनाँचे ख़ुदा की मर्ज़ी हुई तो हम यह छोड़ कर आगे बढ़ेंगे।
4 ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,
नामुमकिन है कि उन्हें बहाल करके दुबारा तौबा तक पहुँचाया जाए जिन्हों ने अपना ईमान छोड़ दिया हो। उन्हें तो एक बार ख़ुदा के नूर में लाया गया था, उन्हों ने आसमान की ने'अमत का मज़ा चख लिया था, वह रूह — उल — क़ुद्दूस में शरीक हुए,
5 ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, (aiōn g165)
उन्हों ने ख़ुदा के कलाम की भलाई और आने वाले ज़माने की ताक़तों का तजुर्बा किया था। (aiōn g165)
6 ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.
और फिर उन्हों ने अपना ईमान छोड़ दिया! ऐसे लोगों को बहाल करके दुबारा तौबा तक पहुँचाना नामुमकिन है। क्यूँकि ऐसा करने से वह ख़ुदा के फ़र्ज़न्द को दुबारा मस्लूब करके उसे लान — तान का निशाना बना देते हैं।
7 ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.
ख़ुदा उस ज़मीन को बर्क़त देता है जो अपने पर बार बार पड़ने वाली बारिश को जज़्ब करके ऐसी फ़सल पैदा करती है जो खेतीबाड़ी करने वाले के लिए फ़ाइदामन्द हो।
8 ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.
लेकिन अगर वह सिर्फ़ कांटे दार पौदे और ऊँटकटारे पैदा करे तो वह बेकार है और इस ख़तरे में है कि उस पर ला'नत भेजी जाए। अन्जाम — ए — कार उस पर का सब कुछ जलाया जाएगा।
9 ಪ್ರಿಯರೇ, ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮರಾಗಿದ್ದೀರೆಂದು ನಂಬಿದ್ದೇವೆ.
लेकिन ऐ अज़ीज़ो! अगरचे हम इस तरह की बातें कर रहे हैं तो भी हमारा भरोसा यह है कि आप को वह बेहतरीन बर्क़तें हासिल हैं जो नजात से मिलती हैं।
10 ೧೦ ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
क्यूँकि ख़ुदा बेइन्साफ़ नहीं है। वह आप का काम और वह मुहब्बत नहीं भूलेगा जो आप ने उस का नाम ले कर ज़ाहिर की जब आप ने पाक लोगों की ख़िदमत की बल्कि आज तक कर रहे हैं।
11 ೧೧ ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.
लेकिन हमारी बड़ी ख़्वाहिश यह है कि आप में से हर एक इसी सरगर्मी का इज़हार आख़िर तक करता रहे ताकि जिन बातों की उम्मीद आप रखते हैं वह हक़ीक़त में पूरी हो जाएँ।
12 ೧೨ ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.
हम नहीं चाहते कि आप सुस्त हो जाएँ बल्कि यह कि आप उन के नमूने पर चलें जो ईमान और सब्र से वह कुछ मीरास में पा रहे हैं जिस का वादा ख़ुदा ने किया है।
13 ೧೩ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,
जब ख़ुदा ने क़सम खा कर अब्रहाम से वादा किया तो उस ने अपनी ही क़सम खा कर यह वादा किया। क्यूँकि कोई और नहीं था जो उस से बड़ा था जिस की क़सम वह खा सकता।
14 ೧೪ “ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಅಭಿವೃದ್ಧಿಪಡಿಸುವೆನು” ಎಂದು ಹೇಳಿದನಷ್ಟೆ.
उस वक़्त उस ने कहा, “मैं ज़रूर तुझे बहुत बर्क़त दूँगा, और मैं यक़ीनन तुझे ज़्यादा औलाद दूँगा।”
15 ೧೫ ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.
इस पर अब्रहाम ने सब्र से इन्तिज़ार करके वह कुछ पाया जिस का ख़ुदा ने वादा किया था।
16 ೧೬ ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.
क़सम खाते वक़्त लोग उस की क़सम खाते हैं जो उन से बड़ा होता है। इस तरह से क़सम में बयानकरदा बात की तस्दीक़ बह्स — मुबाहसा की हर गुन्जाइश को ख़त्म कर देती है।
17 ೧೭ ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.
ख़ुदा ने भी क़सम खा कर अपने वादे की तस्दीक़ की। क्यूँकि वह अपने वादे के वारिसों पर साफ़ ज़ाहिर करना चाहता था कि उस का इरादा कभी नहीं बदलेगा।
18 ೧೮ ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.
ग़रज़, यह दो बातें क़ाईम रही हैं, ख़ुदा का वादा और उस की क़सम। वह इन्हें न तो बदलेगा न इन के बारे में झूठ बोलेगा। यूँ हम जिन्हों ने उस के पास पनाह ली है बड़ी तसल्ली पा कर उस उम्मीद को मज़बूती से थामे रख सकते हैं जो हमें पेश की गई है।
19 ೧೯ ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.
क्यूँकि यह उम्मीद हमारी जान के लिए मज़बूत लंगर है। और यह आसमानी बैत — उल — मुक़द्दस के पाकतरीन कमरे के पर्दे में से गुज़र कर उस में दाख़िल होती है।
20 ೨೦ ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ. (aiōn g165)
वहीं ईसा हमारे आगे आगे जा कर हमारी ख़ातिर दाख़िल हुआ है। यूँ वह मलिक — ए — सिद्क़ की तरह हमेशा के लिए इमाम — ए — आज़म बन गया है। (aiōn g165)

< ಇಬ್ರಿಯರಿಗೆ ಬರೆದ ಪತ್ರಿಕೆ 6 >