< ಇಬ್ರಿಯರಿಗೆ ಬರೆದ ಪತ್ರಿಕೆ 7 >

1 ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.
Porque este Melquisedeque, rei de Salém, sacerdote do Deus Altíssimo, o qual se encontrou com Abraão, que estava retornando da matança dos reis, e o abençoou;
2 ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.
a quem também Abraão deu o dízimo de tudo; primeiramente significa Rei de justiça, e depois também rei de Salém, que é, rei de paz;
3 ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, ನಿರಂತರವಾಗಿ ಯಾಜಕನಾಗಿರುವನು.
sem pai, sem mãe, sem genealogia, sem ter princípio de dias, nem fim de vida; porém, sendo feito semelhante ao Filho de Deus, permanece sacerdote para sempre.
4 ಈತನು ಎಷ್ಟು ಮಹಾನ್ ಆಗಿದ್ದನೆಂದು ಯೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಯುದ್ಧದಲ್ಲಿ ಗೆದ್ದು ತಂದ ಶ್ರೇಷ್ಠ ವಸ್ತುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ.
Considerai, pois, como ele era grande, a quem até o patriarca Abraão deu o dízimo dos despojos.
5 ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.
E, realmente, os que dentre os filhos de Levi recebem o sacerdócio têm ordem, segundo a Lei, de receberem os dízimos do povo, isto é, dos seus irmãos, mesmo sendo eles também descendentes de Abraão.
6 ಆದರೆ ಮೆಲ್ಕಿಜೆದೇಕನು ಲೇವಿಯ ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಆಶೀರ್ವದಿಸಿದನು.
Mas aquele que não é contado na genealogia deles recebeu dízimos de Abraão, e abençoou ao que tinha as promessas.
7 ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ಹೆಚ್ಚಿನವನು ಎಂಬುದನ್ನು ನಿರಾಕರಿಸುವಂತಿಲ್ಲ.
Ora, sem contradição alguma, o menor é abençoado pelo maior.
8 ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು.
Em um caso, homens mortais recebem dízimos; mas no outro, aquele de quem se dá testemunho de que vive.
9 ಮತ್ತು ದಶಮ ಭಾಗಗಳನ್ನು ತೆಗೆದುಕೊಳ್ಳುವ ಲೇವಿಯು ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿತು.
E, por assim dizer, até Levi, que recebe os dízimos, pagou dízimos através de Abraão;
10 ೧೦ ಹೇಗೆಂದರೆ, ಮೆಲ್ಕಿಜೆದೇಕನು ಲೇವಿಯ ಮೂಲಪುರುಷನಾದ ಅಬ್ರಹಾಮನನ್ನು ಸಂಧಿಸಿದಾಗ ಲೇವಿಯು ತತ್ವರೂಪವಾಗಿ ಅಬ್ರಹಾಮನ ದೇಹದಲ್ಲಿದ್ದನು.
pois ele ainda estava no corpo de [seu] ancestral quando Melquisedeque se encontrou com ele.
11 ೧೧ ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?
Portanto, se a perfeição tivesse sido de fato pelo sacerdócio Levítico (pois com base nele o povo recebeu a Lei), que mais necessidade havia de se levantar outro Sacerdote segundo a ordem de Melquisedeque, e não ser chamado segundo a ordem de Arão?
12 ೧೨ ಯಾಜಕತ್ವವು ಬದಲಾಗುವುದಾದರೆ ಧರ್ಮಶಾಸ್ತ್ರವೂ ಸಹ ಬದಲಾಗುವುದು ಅಗತ್ಯವಾಗಿದೆ.
Pois, ao se mudar o sacerdócio, necessariamente também se faz mudança de Lei.
13 ೧೩ ಆದರೆ ಇವು ಯಾರ ಕುರಿತಾಗಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಒಬ್ಬನೂ ಯಜ್ಞವೇದಿಯ ಬಳಿ ಸೇವೆಮಾಡಿದ್ದಿಲ್ಲ.
Porque aquele de quem estas coisas são ditas pertence a outra tribo, da qual ninguém serviu ao altar;
14 ೧೪ ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.
visto ser evidente que o nosso Senhor é procedente de Judá, tribo da qual Moisés nada falou a respeito de sacerdotes.
15 ೧೫ ಈ ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತದಲ್ಲಾ.
E [isso] ainda é muito mais evidente se, à semelhança de Melquisedeque, levanta-se outro sacerdote,
16 ೧೬
que foi constituído, não conforme a Lei de um mandamento carnal, mas sim, conforme o poder de uma vida indestrutível.
17 ೧೭ ಆತನ ವಿಷಯದಲ್ಲಿ “ನೀನು ಸದಾಕಾಲಕ್ಕೂ ಮೆಲ್ಕಿಜೆದೇಕನ ತರಹದ ಯಾಜಕನೇ” ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಕರಿಸುತ್ತದೆ. (aiōn g165)
Pois [assim] dá-se testemunho: Tu és Sacerdote para sempre, segundo a ordem de Melquisedeque. (aiōn g165)
18 ೧೮ ಯಾಕೆಂದರೆ ಮೊದಲಿದ್ದ ಆಜ್ಞೆಯು ದುರ್ಬಲವೂ, ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.
Porque há uma revogação do mandamento anterior, por causa da sua fraqueza e inutilidade,
19 ೧೯ ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.
pois a Lei não tornou perfeito nada. Porém, uma esperança melhor é introduzida, e por meio dela nos aproximamos de Deus.
20 ೨೦ ಇದು ಪ್ರತಿಜ್ಞೆ ರಹಿತವಾದ್ದದು ಅಲ್ಲ. ಇದಲ್ಲದೆ ಲೇವಿಯರು ಪ್ರತಿಜ್ಞೆಯಿಲ್ಲದೆ ಯಾಜಕರಾದರು.
E isso não foi [feito] sem juramento (pois os outros se tornaram sacerdotes sem juramento,
21 ೨೧ ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ. (aiōn g165)
mas ele [foi estabelecido] com um juramento daquele que lhe disse: O Senhor jurou, e não se arrependerá: Tu és Sacerdote para sempre ). (aiōn g165)
22 ೨೨ ಯೇಸು ಪ್ರತಿಜ್ಞೆಯೊಡನೆಯೇ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.
Assim, Jesus foi feito fiador de um pacto ainda melhor.
23 ೨೩ ಲೇವಿಯರು ಶಾಶ್ವತವಾಗಿ ಉದ್ಯೋಗನಡಿಸುವುದಕ್ಕೆ ಮರಣವು ಅಡ್ಡಿಯಾಗಿರುವುದರಿಂದ ಅವರಲ್ಲಿ ಅನೇಕರು ಯಾಜಕರಾದರು.
Dos outros, são muitos os que se tornaram sacerdotes, pois pela morte foram impedidos de continuar;
24 ೨೪ ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು. (aiōn g165)
mas ele, porque permanece para sempre, tem um sacerdócio definitivo. (aiōn g165)
25 ೨೫ ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.
Portanto, ele também pode salvar de maneira completa os que se aproximam de Deus por meio dele, visto que ele vive para sempre para interceder por eles.
26 ೨೬ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.
Pois nos era conveniente tal Sumo Sacerdote: santo, inocente, incontaminado, separado dos pecadores, e feito mais elevado que os céus;
27 ೨೭ ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
que não precisasse, como os sumos sacerdotes, de oferecer sacrifícios diariamente, primeiramente pelos seus próprios pecados, e depois pelos do povo. Pois ele fez isto de uma vez por todas quando ofereceu a si mesmo.
28 ೨೮ ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ. (aiōn g165)
Porque a Lei constitui por sumos sacerdotes homens que têm fraqueza; mas a palavra do juramento, que [veio] depois da Lei, [constitui] o Filho, que se tornou perfeito para sempre. (aiōn g165)

< ಇಬ್ರಿಯರಿಗೆ ಬರೆದ ಪತ್ರಿಕೆ 7 >