< ಇಬ್ರಿಯರಿಗೆ ಬರೆದ ಪತ್ರಿಕೆ 8 >

1 ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.
Тепер головне, про що ми говоримо: ми маємо Первосвященника, Який сів праворуч від престолу Величності на небі.
2 ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.
Він є Служителем Святилища та справжньої Оселі, встановленої Господом, а не людиною.
3 ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.
Бо кожен первосвященник призначений приносити дари і жертви, тому й потрібно було, щоб і Цей мав що принести.
4 ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.
Якби Він був на землі, то не був би священником, бо вже є священники, які приносять дари за Законом.
5 ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.
Вони служать подобою і тінню небесних [речей]. Ось чому Мойсей, коли збирався будувати Оселю, був попереджений: «Дивись, – сказав [Бог], – зроби все за тим зразком, який тобі показано на горі».
6 ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.
Але тепер [Ісусові] було доручено краще служіння, оскільки Він є посередником кращого Завіту, заснованого на кращих обітницях.
7 ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ.
Бо якби перший [Завіт] був бездоганним, то не було б потреби в другому.
8 ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, “‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ.
Але [Бог], докоряючи їм, каже: «Ось надходять дні, – говорить Господь, – коли Я укладу з домом Ізраїля і з домом Юди Новий Завіт.
9 ‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.
[Однак] не такий Завіт, який Я уклав з їхніми предками, коли Я взяв їх за руку, щоб вивести з Єгипту, бо вони не залишилися [вірними] Моєму Завіту, і Я відвернувся від них, – каже Господь. –
10 ೧೦ ‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.
Ось Завіт, який Я укладу з домом Ізраїлю після цих днів, – говорить Господь. – Я вкладу Мої закони в їхній розум і напишу їх на їхніх серцях. Я буду їхнім Богом, і вони будуть Моїм народом.
11 ೧೧ ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು.
Вони більше не навчатимуть свого ближнього й свого брата, кажучи: „Пізнай Господа“, тому що вони всі будуть Мене знати, від малого до великого.
12 ೧೨ ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’” ಎಂದು ಕರ್ತನು ನುಡಿಯುತ್ತಾನೆ.
Бо Я буду милосердний до їхньої неправедності і їхніх гріхів більше не згадуватиму».
13 ೧೩ ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.
Називаючи цей [Завіт] «новим», Він тим самим оголосив перший [завіт] застарілим, а те, що застаріло, незабаром зникне.

< ಇಬ್ರಿಯರಿಗೆ ಬರೆದ ಪತ್ರಿಕೆ 8 >