< ಇಬ್ರಿಯರಿಗೆ ಬರೆದ ಪತ್ರಿಕೆ 9 >
1 ೧ ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು.
Nu hadde vel og den første pakt sine forskrifter for gudstjenesten og sin jordiske helligdom
2 ೨ ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.
For der blev laget et telt, det forreste, og i dette var både lysestaken og bordet og skuebrødene: dette kalles det Hellige.
3 ೩ ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು.
Og bak det annet forheng var det telt som kalles det Aller-helligste,
4 ೪ ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.
som hadde et røkoffer-alter av gull og paktens ark, som var klædd rundt om med gull, og i denne var en gullkrukke med manna og Arons stav, som hadde blomstret, og paktens tavler,
5 ೫ ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ.
og over den herlighetens kjeruber, som skygget over nådestolen; men om disse ting skal vi ikke nu tale stykke for stykke.
6 ೬ ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು.
Men da nu dette er laget således, går prestene alltid inn i det forreste telt når de utfører sin tjeneste;
7 ೭ ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.
men i det annet telt går bare ypperstepresten inn en gang om året, ikke uten blod, som han bærer frem for sig selv og for folkets forseelser,
8 ೮ ಈ ಗುಡಾರದ ಮೊದಲನೆಯ ಭಾಗವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲ ಎಂಬುದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
idet den Hellige Ånd herved gir dette til kjenne at veien til helligdommen ennu ikke er åpenbaret så lenge det forreste telt ennu står,
9 ೯ ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.
for dette er et billede inntil den nuværende tid, og svarende til dette bæres det da frem både gaver og slaktoffer,
10 ೧೦ ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
som dog ikke makter å gjøre den fullkommen efter samvittigheten som tjener Gud, men som bare, sammen med mat og drikke og alle slags tvetninger, er kjødelige forskrifter, pålagt inntil tiden kom til å sette alt i rette skikk.
11 ೧೧ ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,
Men da Kristus kom som yppersteprest for de kommende goder, gikk han gjennem det større og fullkomnere telt, som ikke er gjort med hender, det er: som ikke er av denne skapning,
12 ೧೨ ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು. (aiōnios )
og ikke med blod av bukker og kalver, men med sitt eget blod, en gang inn i helligdommen og fant en evig forløsning. (aiōnios )
13 ೧೩ ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,
For så sant blodet av bukker og okser og asken av en kvige, når den sprenges på de urene, helliger til kjødets renhet,
14 ೧೪ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ? (aiōnios )
hvor meget mere skal da Kristi blod, han som ved en evig ånd bar sig selv frem som et ulastelig offer for Gud, rense eders samvittighet fra døde gjerninger til å tjene den levende Gud! (aiōnios )
15 ೧೫ ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು. (aiōnios )
Og derfor er han mellemmann for en ny pakt, forat de kalte skal få den evige arv som var lovt, efterat en død har funnet sted til forløsning fra overtredelsene under den første pakt. (aiōnios )
16 ೧೬ ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ.
For hvor det er et testament, der er det nødvendig at dens død som har oprettet det, blir godtgjort;
17 ೧೭ ಮರಣ ಶಾಸನವು ವ್ಯಕ್ತಿಯ ಮರಣವಾದ ಮೇಲೆ ಕಾರ್ಯರೂಪಕ್ಕೆ ಬರುತ್ತದೆಯೇ ಹೊರತು ಬರೆದವನು ಜೀವದಿಂದಿರುವಾಗ ಎಂದಿಗೂ ಜಾರಿಗೆ ಬರುವುದಿಲ್ಲ.
for et testament kommer først til å gjelde efter døden, da det aldri har kraft så lenge den lever som oprettet det.
18 ೧೮ ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.
Derfor er heller ikke den første pakt blitt innvidd uten blod;
19 ೧೯ ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.
for da ethvert bud efter loven var blitt forkynt av Moses for alt folket, tok han blodet av kalvene og bukkene tillikemed vann og skarlagenrød ull og isop og sprengte det både på boken selv og på alt folket, idet han sa:
20 ೨೦ “ಇದು ದೇವರು ನಿಮಗೋಸ್ಕರ ಆಜ್ಞಾಪಿಸಿದ ಒಡಂಬಡಿಕೆಯ ರಕ್ತವಾಗಿದೆ” ಎಂದು ಹೇಳಿದನು.
Dette er den pakts blod som Gud har foreskrevet for eder.
21 ೨೧ ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಪಾತ್ರೆಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು.
Men også teltet og alle gudstjenestens redskaper oversprengte han i like måte med blod.
22 ೨೨ ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.
Og næsten alt blir efter loven renset med blod, og uten blod blir utgydt, skjer ikke forlatelse.
23 ೨೩ ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.
Det er altså nødvendig at avbilledene av de himmelske ting blir renset ved dette, men de himmelske ting selv ved bedre offer enn disse.
24 ೨೪ ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.
For Kristus gikk ikke inn i en helligdom som var gjort med hender og bare var et billede av den sanne, men inn i selve himmelen, for nu å åpenbares for Guds åsyn for vår skyld,
25 ೨೫ ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.
og heller ikke forat han flere ganger skulde ofre sig selv, således som ypperstepresten hvert år går inn i helligdommen med fremmed blod;
26 ೨೬ ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು. (aiōn )
ellers måtte han jo ha lidt flere ganger fra verden blev grunnlagt; men nu er han åpenbaret en gang ved tidenes ende for å bortta synden ved sitt offer. (aiōn )
27 ೨೭ ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,
Og likesom det er menneskenes lodd en gang å dø, og derefter dom,
28 ೨೮ ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
således skal og Kristus, efter å være ofret en gang for å bortta manges synder, annen gang åpenbare sig, uten synd, til frelse for dem som venter på ham.