< ಇಬ್ರಿಯರಿಗೆ ಬರೆದ ಪತ್ರಿಕೆ 1 >
1 ೧ ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.
Minekutána az Isten sok rendben és sokféleképen szólott hajdan az atyáknak a próféták által,
2 ೨ ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. (aiōn )
ez utolsó időkben szólott nékünk Fia által, a kit tett mindennek örökösévé, a ki által a világot is teremtette, (aiōn )
3 ೩ ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
A ki az ő dicsőségének visszatükröződése, és az ő valóságának képmása, a ki hatalma szavával fentartja a mindenséget, a ki minket bűneinktől megtisztítván, üle a Felségnek jobbjára a magasságban,
4 ೪ ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು.
Annyival kiválóbb lévén az angyaloknál, a mennyivel különb nevet örökölt azoknál.
5 ೫ ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.”
Mert kinek mondotta valaha az angyalok közül: Én Fiam vagy te, én ma szűltelek téged? és ismét: Én leszek néki Atyja és ő lesz nékem Fiam?
6 ೬ ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.
Viszont mikor behozza az ő elsőszülöttét a világba, így szól: És imádják őt az Istennek minden angyalai.
7 ೭ ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.
És bár az angyalokról így szól: Ki az ő angyalait szelekké teszi és az ő szolgáit tűz lángjává,
8 ೮ ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ. (aiōn )
Ámde a Fiúról így: A te királyi széked óh Isten örökkön örökké. Igazságnak pálczája a te országodnak pálczája. (aiōn )
9 ೯ ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.
Szeretted az igazságot és gyűlölted a hamisságot: annakokáért felkent téged az Isten, a te Istened, örömnek olajával a te társaid felett.
10 ೧೦ “ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ,
És: Te Uram kezdetben alapítottad a földet és a te kezeidnek művei az egek;
11 ೧೧ ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.
Azok elvesznek, de te megmaradsz, és mindazok, mint a ruha megavulnak.
12 ೧೨ ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.
És palástként összehajtod azokat és elváltoznak, te pedig ugyanaz vagy és a te esztendeid el nem fogynak.
13 ೧೩ ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?
Melyik angyalnak mondotta pedig valaha: Ülj az én jobbkezem felől, míglen ellenségeidet lábaidnak zsámolyává teszem?
14 ೧೪ ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?
Avagy nem szolgáló lelkek-é mindazok, elküldve szolgálatra azokért, a kik örökölni fogják az idvességet?