< ಇಬ್ರಿಯರಿಗೆ ಬರೆದ ಪತ್ರಿಕೆ 1 >

1 ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.
У минулому Бог багато разів і по-різному говорив до наших батьків через пророків,
2 ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. (aiōn g165)
а в ці останні дні Він промовив до нас через Свого Сина, Якого призначив Спадкоємцем усього й через Якого створив віки. (aiōn g165)
3 ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
Син – сяйво Божої слави й повне відображення Його сутності, Що утримує все силою Свого Слова. Очистивши нас від гріхів, Він сів праворуч від Величності на небесах.
4 ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು.
Він перевершив ангелів, оскільки ім’я, яке Він успадкував, перевершує їхнє ім’я.
5 ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.”
Бо кому з ангелів Бог коли-небудь сказав: «Ти Мій Син, Я сьогодні породив Тебе?» Або: «Я буду Йому Отцем, а Він буде Мені Сином?»
6 ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.
І знову, коли Бог приводить Свого Первістка у всесвіт, Він каже: «Нехай усі Божі ангели вклоняться Йому».
7 ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.
А про ангелів говорить: «Він робить ангелів Своїх духами, Своїх слуг – полум’ям вогню».
8 ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ. (aiōn g165)
А про Сина каже: «Престол Твій, Боже, – повік-віків, жезл справедливості – жезл Твого Царства. (aiōn g165)
9 ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.
Ти полюбив правду й зненавидів беззаконня; тому помазав Тебе Бог, Твій Бог, олією радощів більше, ніж Твоїх друзів».
10 ೧೦ “ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ,
І ще: «На початку Ти, Господи, заклав основи землі, і небеса – діяння рук Твоїх.
11 ೧೧ ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.
Вони згинуть, а Ти існуватимеш завжди; усі вони, як одяг, зносяться.
12 ೧೨ ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.
Ти поміняєш їх, немов старі шати, і вони зміняться. Але Ти – Той самий, і роки Твої нескінченні».
13 ೧೩ ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?
Кому з ангелів Бог сказав коли-небудь: «Сядь праворуч від Мене, доки Я не покладу ворогів Твоїх, як підніжок для Твоїх ніг».
14 ೧೪ ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?
Чи не всі [ангели] є духами служіння, посланими служити тим, хто має успадкувати спасіння?

< ಇಬ್ರಿಯರಿಗೆ ಬರೆದ ಪತ್ರಿಕೆ 1 >