< ಹೋಶೇಯನು 1 >
1 ೧ ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು.
Слово Господнє, що було́ до Осі́ї, Беерового сина, за днів Уззійї, Йотама, Ахаза, Єзекії, Юдиних царів, та за днів Єровоа́ма, Йоашового сина, Ізра́їлевого царя.
2 ೨ ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.
Поча́ток того, що Господь говорив через Осі́ю. І сказав Господь до Осії: „Іди, візьми собі жінку блудли́ву, і вона породить дітей блу́ду, бо сильно блудоді́є цей Край, відступивши від Господа.“
3 ೩ ಅದರಂತೆ ಹೋಶೇಯನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ಕೊಟ್ಟಳು.
І він пішов, і взяв Ґо́мер, дочку́ Дівлаїма, і вона зачала, і породила йому сина.
4 ೪ ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು.
І сказав Господь до нього: „Назви ім'я́ йому Їзрее́л, бо ще трохи, і покараю кров Їзрее́лу на домі Єгу, і вчиню кінець царству Ізра́їлевого дому.
5 ೫ ಆ ದಿನದಲ್ಲಿ ನಾನು ಇಜ್ರೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು” ಎಂದನು.
І станеться того дня, і Я зламаю Ізраїлевого лука в долині Їзреел“.
6 ೬ ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದಾಗ ಯೆಹೋವನು ಹೋಶೇಯನಿಗೆ, “ಈ ಮಗುವಿಗೆ ‘ಲೋ ರುಹಾಮ’ ಎಂಬ ಹೆಸರಿಡು; ಏಕೆಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವುದಿಲ್ಲ, ಅವರನ್ನು ಕ್ಷಮಿಸುವುದಿಲ್ಲ.
І зачала вона ще, і породила дочку́. І сказав Він йому: „Назви ім'я́ їй Ло-Рухама, бо більше Я вже не змилуюся над Ізраїлевим домом, бо вже більше не прощу́ Я їм.
7 ೭ ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.
А над Юдиним домом Я змилуюся, і допоможу́ їм через Господа, їхнього Бога, але не допоможу́ їм ані луком, ані мечем, ані війною, кі́ньми чи верхівця́ми“.
8 ೮ ಆ ಕೂಸು ಮೊಲೆ ಬಿಟ್ಟ ಮೇಲೆ ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದಳು.
І відлучи́ла вона Ло-Рухаму, і зачала зно́ву, і породила сина.
9 ೯ ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು.
А Він сказав: „Назви ім'я́ йому Ло-Аммі, бо ви не наро́д Мій, і Я не буду ваш!
10 ೧೦ ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.
І бу́де число Ізраїлевих синів, як мо́рський пісок, що його не можна ані змі́ряти, ані злічи́ти. І станеться, замість того, що говориться їм: „Ви не наро́д Мій“, буде їм сказано: „ Ви сини Бога Живого“.
11 ೧೧ ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.
І будуть зібрані ра́зом сини Юдині та сини Ізраїлеві, і настановлять собі одно́го голову, і повихо́дять з землі, бо великий день Їзрее́лу.