< ಹೋಶೇಯನು 10 >
1 ೧ ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.
Israel ne en mzabibu malandore; ne onyago olembene owuon. Ka olembene ne medore, nomedo gero kende mag misango; kendo ka pinye ne medo mewo, to nomedo loso kido milamo.
2 ೨ ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು.
Chunygi opongʼ gi miriambo kendo koro nyaka gitingʼ mana kum marom kodgi. Jehova Nyasaye nomuk kendegi mag misango kendo kitegi ma gilamo bende nokethi.
3 ೩ “ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ. ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.
Eka giniwachi, “Waonge ruoth nikech watamore miyo Jehova Nyasaye luor. To kata kane wan gi ruoth, to dotimonwa angʼo?”
4 ೪ ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.
Githoro wacho weche manono ka gikwongʼore gi miriambo, kendo giloso winjruok ma ok nyal konyogi; emomiyo buche mag larruok medore mana ka buya malandore e puothe mosepur.
5 ೫ ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು.
Ji modak Samaria luoro osemako nikech nyaroya molos gi dhahabu mar Beth Aven. Joge noywage, kamano bende e kaka jodologe malamo nyiseche manono noywage, mago mosebedo gi mor kuom berne nikech osegole kuomgi kitere e twech.
6 ೬ ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು.
Enotingʼe kitere Asuria kaka mich ne ruoth maduongʼ. Efraim noma duongʼne to Israel nokuod wiye nikech nyisechene molos gi bao.
7 ೭ ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ.
Samaria kod ruodhige nolew gi malo mana ka bad yien malewo gi malo ewi pi.
8 ೮ ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.
Kuonde motingʼore malo mag anjawo nokethi, en emomiyo jo-Israel timo richo. Kuthe kod buya ema biro dongo maim kendegi mag misango. Eka giniwach ne gode madongo niya, “Umwauru!” Kendo ne gode matindo niya, “Rwombreuru kuomwa!”
9 ೯ ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?
“Nyaka aa ndalo mar Gibea, isebedo ka itimo richo, yaye Israel, to kanyo ema isesike. Donge lweny notieko jotim richo man Gibea?
10 ೧೦ ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು; ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು.
Ka ahero to abiro kumogi; ogendini nonywaknegi, maketgi e twech kuom richogi duto.
11 ೧೧ ಎಫ್ರಾಯೀಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿಯುತ್ತಿರುವುದರಲ್ಲಿಯೇ ಇಷ್ಟಪಡುವ ಕಡಸಾಗಿದೆ; ಈಗಲಾದರೋ ಅದರ ಅಂದವಾದ ಹೆಗಲಿನ ಮೇಲೆ ಕೈಹಾಕಿದ್ದೇನೆ, ಎಫ್ರಾಯೀಮನ್ನು ನೊಗಕ್ಕೆ ಹೂಡುವೆನು, ಯೆಹೂದವು ಉಳಬೇಕು, ಯಾಕೋಬು ಕುಂಟೆ ಎಳೆಯಬೇಕು.
Efraim en nyaroya mobo mohero dino cham; omiyo anatwe jok e ngʼute maberno. Anariemb Efraim, to Juda nyaka pur, kendo Jakobo biro baro lowo.
12 ೧೨ ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.
Chwouru adiera ne un uwegi, kaa-uru olemo mar hera ma ok rum, kendo baruru lopu mapok opur, nimar en kinde mar manyo Jehova Nyasaye, nyaka chop ool tim makare kuomu.
13 ೧೩ ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ, ನಿಮ್ಮ ಶೂರರ ರಥಗಳಲ್ಲಿಯೂ ಭರವಸವಿಟ್ಟಿದ್ದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ.
To nikech usechwoyo anjawo, usekayo timbe maricho, kendo usechamo olemb miriambo. Nikech usegeno kuom tekou uwegi kendo kuom jolwenju mangʼeny,
14 ೧೪ ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.
kuom mano koko mar lweny biro monjo jou, ma mi kuondeu mochiel motegno nomuki, mana kaka Shalman nomuko Beth Arbel e odiechieng lweny, kama mine kod nyithindgi nodhir mopodho.
15 ೧೫ ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವುದು; ಬೆಳಗಾಗುವುದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.
Ma e kaka notimre ne un bende, yaye Bethel, nikech anjawo maru duongʼ. Ka odiechiengno ochopo, ruodh Israel notiek chuth.”