< ಹೋಶೇಯನು 11 >
1 ೧ ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು.
Když dítětem byl Izrael, miloval jsem jej, a z Egypta povolal jsem syna svého.
2 ೨ ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.
Volali jich, oni tím více ucházeli před nimi, Bálům obětovali, a rytinám kadili,
3 ೩ ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.
Ješto jsem já na nohy stavěl Efraima, on pak bral je na lokty své; aniž znáti chtěli, že jsem já je uzdravoval.
4 ೪ ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು.
Potahoval jsem jich provázky lidskými, provazy milování, a činil jsem jim tak jako ti, kteříž pozdvihují jha na čelistech hovádka, podávaje potravy jemu.
5 ೫ ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.
Nenavrátíť se do země Egyptské, ale Assur bude králem jeho, proto že se nechtěli obrátiti.
6 ೬ ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು.
Nadto bude trvati meč v městech jeho, a zkazí závory jeho, a sžíře je pro rady jejich.
7 ೭ ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.
Nebo lid můj ustrnul na odvrácení se ode mne, a ač ho k Nejvyššímu volají, však žádný ho neoslavuje.
8 ೮ ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.
Jakž bych tě vydal, ó Efraime? Jakž bych tě vydal, ó Izraeli? Kterak bych tě položil jako Adamu, podvrátil jako Seboim? Zkormouceno jest ve mně srdce mé, ano i střeva slitování mých pohnula se.
9 ೯ ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.
Nevykonámť prchlivosti hněvu svého, nezkazím více Efraima; nebo jsem já Bůh silný, a ne člověk, u prostřed tebe svatý, aniž přitáhnu na město.
10 ೧೦ ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;
I půjdou za Hospodinem řvoucím jako lev; on zajisté řváti bude, tak že s strachem přiběhnou synové od moře.
11 ೧೧ ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.
S strachem poběhnou jako ptactvo z Egypta, a jako holubice z země Assyrské, i osadím je v domích jejich, dí Hospodin.
12 ೧೨ ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.
Obklíčili mne Efraimští lží, a dům Izraelský lstí, když ještě Juda panoval s Bohem silným, a s svatými věrný byl.