< ಹೋಶೇಯನು 12 >
1 ೧ ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.
Ефрем се храни с вятър, и гони източния вятър; Непрестанно умножава лъжите и насилието; Правят завет с Асирийците, И занасят дървено масло в Египет!
2 ೨ ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.
Още, Господ има спор с Юда, И ще накаже Якова според постъпките му, Според делата му ще му въздаде.
3 ೩ ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;
В утробата той хвана петата на брата си, и като мъж се бори с Бога;
4 ೪ ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.
Да! бори се с ангел, и преодоля С плач и молба към него. Бог го намери във Ветил, и там говори с нас,
5 ೫ ಯೆಹೋವನೆಂಬುದೇ ಆತನನ್ನು ಸ್ಮರಿಸುವ ನಾಮಧೇಯ.
Да! Иеова Бог на Силите, Чието паметно име е Иеова.
6 ೬ ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.
За това, обърни се към твоя Бог, Пази милост и правосъдие, И винаги се надявай на твоя Бог.
7 ೭ ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.
Ефрем е търговец; Неверни къпони има в ръката му; Той обича да мами.
8 ೮ ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?
И Ефрем си рече: Наистина аз се обогатих, Придобих си имот; Досежно всичките ми трудове няма да се намери в мене беззаконие, Което да се счита за грях.
9 ೯ ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.
А аз съм Господ твой Бог от времето, когато беше ти в Египетската земя; Пак ще те заселя в шатри Като в празнични дни.
10 ೧೦ ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ.
Говорих още и чрез пророците, И явих им много видения; И чрез думите на пророците служих си с уподобления.
11 ೧೧ ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.
Ето, в Галаад има беззаконие; Станаха съвсем суетни; В Глагал жертват юнци; И жертвениците им са многобройни като куповете тор В браздите на нивите.
12 ೧೨ ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು.
А Яков побягна в Сирийското поле; Израил е работил за жена, И за жена е пазил овци,
13 ೧೩ ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.
Чрез пророк Господ възведе Израиля от Египет; И чрез пророк той биде опазен.
14 ೧೪ ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.
Ефрем разгневи Бога много горчиво; За това, ще оставя върху него проляната от него кръв, И неговият Господ ще възвърне укора му върху самия него.