< ಹೋಶೇಯನು 12 >

1 ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.
以法蓮吃風,且追趕東風, 時常增添虛謊和強暴, 與亞述立約,把油送到埃及。
2 ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.
耶和華與猶大爭辯, 必照雅各所行的懲罰他, 按他所做的報應他。
3 ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;
他在腹中抓住哥哥的腳跟, 壯年的時候與上帝較力,
4 ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.
與天使較力,並且得勝, 哭泣懇求, 在伯特利遇見耶和華。 耶和華-萬軍之上帝在那裏曉諭我們以色列人; 耶和華是他可記念的名。
5 ಯೆಹೋವನೆಂಬುದೇ ಆತನನ್ನು ಸ್ಮರಿಸುವ ನಾಮಧೇಯ.
6 ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.
所以你當歸向你的上帝, 謹守仁愛、公平,常常等候你的上帝。
7 ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.
以法蓮是商人, 手裏有詭詐的天平,愛行欺騙。
8 ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?
以法蓮說: 我果然成了富足,得了財寶; 我所勞碌得來的, 人必不見有甚麼不義,可算為罪的。
9 ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.
自從你出埃及地以來, 我就是耶和華-你的上帝; 我必使你再住帳棚,如在大會的日子一樣。
10 ೧೦ ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ.
我已曉諭眾先知, 並且加增默示, 藉先知設立比喻。
11 ೧೧ ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.
基列人沒有罪孽嗎? 他們全然是虛假的。 人在吉甲獻牛犢為祭, 他們的祭壇好像田間犂溝中的亂堆。
12 ೧೨ ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು.
從前雅各逃到亞蘭地, 以色列為得妻服事人, 為得妻與人放羊。
13 ೧೩ ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.
耶和華藉先知領以色列從埃及上來; 以色列也藉先知而得保存。
14 ೧೪ ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.
以法蓮大大惹動主怒, 所以他流血的罪必歸在他身上。 主必將那因以法蓮所受的羞辱歸還他。

< ಹೋಶೇಯನು 12 >