< ಹೋಶೇಯನು 13 >

1 ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್ ದೇವತೆಯ ವಿಷಯದಲ್ಲಿ ದೋಷಿಯಾದಾಗ ನಾಶವಾಯಿತು.
從前以法蓮說話,人都戰兢, 他在以色列中居處高位; 但他在事奉巴力的事上犯罪就死了。
2 ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.
現今他們罪上加罪, 用銀子為自己鑄造偶像, 就是照自己的聰明製造, 都是匠人的工作。 有人論說, 獻祭的人可以向牛犢親嘴。
3 ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.
因此,他們必如早晨的雲霧, 又如速散的甘露, 像場上的糠詷被狂風吹去, 又像煙氣騰於窗外。
4 ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
自從你出埃及地以來, 我就是耶和華-你的上帝。 在我以外,你不可認識別神; 除我以外並沒有救主。
5 ಅರಣ್ಯದಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಲಕ್ಷಿಸಿದವನು ನಾನೇ.
我曾在曠野乾旱之地認識你。
6 ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.
這些民照我所賜的食物得了飽足; 既得飽足,心就高傲, 忘記了我。
7 ಆದಕಾರಣ ನಾನು ಅವರ ಪಾಲಿಗೆ ಸಿಂಹ; ಚಿರತೆಯ ಹಾಗೆ ದಾರಿಯ ಮಗ್ಗುಲಲ್ಲಿ ಹೊಂಚುಹಾಕುವೆನು.
因此,我向他們如獅子, 又如豹伏在道旁。
8 ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು.
我遇見他們必像丟崽子的母熊, 撕裂他們的胸膛。 在那裏,我必像母獅吞吃他們; 野獸必撕裂他們。
9 ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?
以色列啊,你與我反對, 就是反對幫助你的,自取敗壞。
10 ೧೦ ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ನಿನ್ನನ್ನು ರಕ್ಷಿಸಬಲ್ಲ ನಗರಪಾಲಕರು ಎಲ್ಲಿ?
你曾求我說: 給我立王和首領。 現在你的王在哪裏呢? 治理你的在哪裏呢? 讓他在你所有的城中拯救你吧!
11 ೧೧ ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ.
我在怒氣中將王賜你, 又在烈怒中將王廢去。
12 ೧೨ ಎಫ್ರಾಯೀಮಿನ ಅಧರ್ಮವು ಗಂಟುಕಟ್ಟಿದೆ, ಅದರ ಪಾಪವು ಭದ್ರಪಡಿಸಿದೆ.
以法蓮的罪孽包裹; 他的罪惡收藏。
13 ೧೩ ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; ಅದು ಮಂಕು ಮಗುವಿನಂತಿದೆ; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ.
產婦的疼痛必臨到他身上; 他是無智慧之子, 到了產期不當遲延。
14 ೧೪ ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು. (Sheol h7585)
我必救贖他們脫離陰間, 救贖他們脫離死亡。 死亡啊,你的災害在哪裏呢? 陰間哪,你的毀滅在哪裏呢? 在我眼前絕無後悔之事。 (Sheol h7585)
15 ೧೫ ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.
他在弟兄中雖然茂盛, 必有東風颳來, 就是耶和華的風從曠野上來。 他的泉源必乾; 他的源頭必竭; 仇敵必擄掠他所積蓄的一切寶器。
16 ೧೬ ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.
撒馬利亞必擔當自己的罪, 因為悖逆她的上帝。 她必倒在刀下; 嬰孩必被摔死; 孕婦必被剖開。

< ಹೋಶೇಯನು 13 >