< ಹೋಶೇಯನು 13 >
1 ೧ ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್ ದೇವತೆಯ ವಿಷಯದಲ್ಲಿ ದೋಷಿಯಾದಾಗ ನಾಶವಾಯಿತು.
Sa’ad da Efraim ya yi magana, mutane sun yi rawan jiki; an girmama shi a cikin Isra’ila. Amma sai ya zama mai laifi na yin wa Ba’al sujada, ya kuwa mutu.
2 ೨ ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.
Yanzu sai yin zunubi a kai a kai suke; suna yin gumaka wa kansu daga azurfansu, da wayo suna sarrafa siffofi, dukansu aikin masu aikin hannu ne. Ana magana waɗannan mutane cewa, “Suna miƙa hadayar mutum su kuma sumbaci gumakan maruƙa.”
3 ೩ ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.
Saboda haka za su zama kamar hazon safiya, kamar raɓar safen da yakan kakkaɓe, kamar ƙaiƙayin da ake tankaɗe daga masussuka, kamar hayaƙin da yake fita daga taga.
4 ೪ ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
“Amma ni ne Ubangiji Allahnku, wanda ya fitar da ku daga Masar. Ba za ku yarda da wani Allah ba sai ni, ba wani Mai Ceto in ban da ni.
5 ೫ ಅರಣ್ಯದಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಲಕ್ಷಿಸಿದವನು ನಾನೇ.
Na lura da ku a hamada, cikin ƙasar mai ƙunar zafi.
6 ೬ ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.
Sa’ad da na ciyar da su sun ƙoshi; sa’ad da suka ƙoshi, sai suka fara taƙama; sai suka manta da ni.
7 ೭ ಆದಕಾರಣ ನಾನು ಅವರ ಪಾಲಿಗೆ ಸಿಂಹ; ಚಿರತೆಯ ಹಾಗೆ ದಾರಿಯ ಮಗ್ಗುಲಲ್ಲಿ ಹೊಂಚುಹಾಕುವೆನು.
Saboda haka zan hau kansu kamar zaki, zan ɓuya a bakin hanya kamar damisa.
8 ೮ ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು.
Kamar beyar da aka ƙwace mata’ya’yanta, zan fāɗa musu in ɓarke su. Kamar zaki zan cinye su; kamar naman jeji zan yayyage su.
9 ೯ ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?
“An hallaka ku, ya Isra’ila, domin kun tayar mini, kun tayar wa mai taimakonku.
10 ೧೦ ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ನಿನ್ನನ್ನು ರಕ್ಷಿಸಬಲ್ಲ ನಗರಪಾಲಕರು ಎಲ್ಲಿ?
Ina sarkinku, da zai cece ku? Ina masu mulkinku cikin dukan garuruwanku, waɗanda kuka ce, ‘Ba mu sarki da shugabanni’?
11 ೧೧ ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ.
Saboda haka cikin fushina na ba ku sarki, kuma cikin hasalata na ɗauke shi.
12 ೧೨ ಎಫ್ರಾಯೀಮಿನ ಅಧರ್ಮವು ಗಂಟುಕಟ್ಟಿದೆ, ಅದರ ಪಾಪವು ಭದ್ರಪಡಿಸಿದೆ.
An yi ajiyar laifin Efraim, aka lissafta zunubansa.
13 ೧೩ ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; ಅದು ಮಂಕು ಮಗುವಿನಂತಿದೆ; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ.
Naƙuda ta zo masa kamar a mace mai haihuwa, amma shi yaro ne marar hikima; sa’ad da lokaci ya kai, ba ya zuwa inda mahaifa ta buɗe.
14 ೧೪ ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು. (Sheol )
“Zan fanshe su daga ikon kabari; zan cece su daga mutuwa. Ina annobanki, ya mutuwa? Ina hallakarka, ya kabari? “Ba zan ji tausayi ba, (Sheol )
15 ೧೫ ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.
ko da ma ya ci gaba cikin’yan’uwansa. Iskar gabas daga Ubangiji za tă zo, tana hurawa daga hamada; maɓulɓularsa za tă kafe rijiyarsa kuma ta bushe. Za a kwashi kaya masu daraja na ɗakin ajiyarsa ganima.
16 ೧೬ ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.
Dole mutanen Samariya su ɗauki laifinsu, domin sun tayar wa Allahnsu. Za a kashe su da takobi; za a fyaɗa ƙananansu da ƙasa, za a ɓarke matansu masu ciki.”