< ಹೋಶೇಯನು 2 >

1 ನಿಮ್ಮ ಸಹೋದರರನ್ನು “ಅಮ್ಮಿ” ಎಂದು, ನಿಮ್ಮ ಸಹೋದರಿಯರನ್ನು “ರುಹಾಮ” ಎಂದು ಕರೆಯಿರಿ.
אִמְר֥וּ לַאֲחֵיכֶ֖ם עַמִּ֑י וְלַאֲחֽוֹתֵיכֶ֖ם רֻחָֽמָה׃
2 “ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ. ಅವಳು ವ್ಯಭಿಚಾರವನ್ನು ತನ್ನ ಮುಖಸೌಂದರ್ಯದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ.
רִ֤יבוּ בְאִמְּכֶם֙ רִ֔יבוּ כִּֽי־הִיא֙ לֹ֣א אִשְׁתִּ֔י וְאָנֹכִ֖י לֹ֣א אִישָׁ֑הּ וְתָסֵ֤ר זְנוּנֶ֙יהָ֙ מִפָּנֶ֔יה וְנַאֲפוּפֶ֖יהָ מִבֵּ֥ין שָׁדֶֽיהָ׃
3 ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.
פֶּן־אַפְשִׁיטֶ֣נָּה עֲרֻמָּ֔ה וְהִ֨צַּגְתִּ֔יהָ כְּי֖וֹם הִוָּֽלְדָ֑הּ וְשַׂמְתִּ֣יהָ כַמִּדְבָּ֗ר וְשַׁתִּ֙הָ֙ כְּאֶ֣רֶץ צִיָּ֔ה וַהֲמִתִּ֖יהָ בַּצָּמָֽא׃
4 ಅವಳ ಮಕ್ಕಳನ್ನೂ ಕರುಣಿಸುವುದಿಲ್ಲ, ಅವರು ವ್ಯಭಿಚಾರದಿಂದ ಹುಟ್ಟಿದ ಮಕ್ಕಳಲ್ಲವೇ.
וְאֶת־בָּנֶ֖יהָ לֹ֣א אֲרַחֵ֑ם כִּֽי־בְנֵ֥י זְנוּנִ֖ים הֵֽמָּה׃
5 ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”
כִּ֤י זָֽנְתָה֙ אִמָּ֔ם הֹבִ֖ישָׁה הֽוֹרָתָ֑ם כִּ֣י אָמְרָ֗ה אֵלְכָ֞ה אַחֲרֵ֤י מְאַהֲבַי֙ נֹתְנֵ֤י לַחְמִי֙ וּמֵימַ֔י צַמְרִ֣י וּפִשְׁתִּ֔י שַׁמְנִ֖י וְשִׁקּוּיָֽי׃
6 ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ತನಗೆ ಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.
לָכֵ֛ן הִנְנִי־שָׂ֥ךְ אֶת־דַּרְכֵּ֖ךְ בַּסִּירִ֑ים וְגָֽדַרְתִּי֙ אֶת־גְּדֵרָ֔הּ וּנְתִיבוֹתֶ֖יהָ לֹ֥א תִמְצָֽא׃
7 ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು.
וְרִדְּפָ֤ה אֶת־מְאַהֲבֶ֙יהָ֙ וְלֹֽא־תַשִּׂ֣יג אֹתָ֔ם וּבִקְשָׁ֖תַם וְלֹ֣א תִמְצָ֑א וְאָמְרָ֗ה אֵלְכָ֤ה וְאָשׁ֙וּבָה֙ אֶל־אִישִׁ֣י הָֽרִאשׁ֔וֹן כִּ֣י ט֥וֹב לִ֛י אָ֖ז מֵעָֽתָּה׃
8 ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.
וְהִיא֙ לֹ֣א יָֽדְעָ֔ה כִּ֤י אָֽנֹכִי֙ נָתַ֣תִּי לָ֔הּ הַדָּגָ֖ן וְהַתִּיר֣וֹשׁ וְהַיִּצְהָ֑ר וְכֶ֨סֶף הִרְבֵּ֥יתִי לָ֛הּ וְזָהָ֖ב עָשׂ֥וּ לַבָּֽעַל׃
9 ಆದಕಾರಣ ನಾನು ನನ್ನ ಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವುದಕ್ಕೆ ನಾನು ಕೊಟ್ಟ ಉಣ್ಣೆ, ನಾರುಗಳನ್ನು ಹಿಂತೆಗೆದುಕೊಳ್ಳುವೆನು.
לָכֵ֣ן אָשׁ֔וּב וְלָקַחְתִּ֤י דְגָנִי֙ בְּעִתּ֔וֹ וְתִירוֹשִׁ֖י בְּמֽוֹעֲד֑וֹ וְהִצַּלְתִּי֙ צַמְרִ֣י וּפִשְׁתִּ֔י לְכַסּ֖וֹת אֶת־עֶרְוָתָֽהּ׃
10 ೧೦ ಈಗ ಅವಳೊಂದಿಗೆ ವ್ಯಭಿಚಾರ ಮಾಡಿದವರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.
וְעַתָּ֛ה אֲגַלֶּ֥ה אֶת־נַבְלֻתָ֖הּ לְעֵינֵ֣י מְאַהֲבֶ֑יהָ וְאִ֖ישׁ לֹֽא־יַצִּילֶ֥נָּה מִיָּדִֽי׃
11 ೧೧ ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
וְהִשְׁבַּתִּי֙ כָּל־מְשׂוֹשָׂ֔הּ חַגָּ֖הּ חָדְשָׁ֣הּ וְשַׁבַּתָּ֑הּ וְכֹ֖ל מוֹעֲדָֽהּ׃
12 ೧೨ ಅವಳು ಯಾವ ಅಂಜೂರ ಮತ್ತು ದ್ರಾಕ್ಷಿಗಳನ್ನು ‘ಇವು ನನ್ನೊಂದಿಗೆ ವ್ಯಭಿಚಾರ ಮಾಡಿದವರಿಂದಾದ ಪ್ರತಿಫಲ’ ಅಂದುಕೊಂಡಳೋ, ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.
וַהֲשִׁמֹּתִ֗י גַּפְנָהּ֙ וּתְאֵ֣נָתָ֔הּ אֲשֶׁ֣ר אָמְרָ֗ה אֶתְנָ֥ה הֵ֙מָּה֙ לִ֔י אֲשֶׁ֥ר נָֽתְנוּ־לִ֖י מְאַֽהֲבָ֑י וְשַׂמְתִּ֣ים לְיַ֔עַר וַאֲכָלָ֖תַם חַיַּ֥ת הַשָּׂדֶֽה׃
13 ೧೩ ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”
וּפָקַדְתִּ֣י עָלֶ֗יהָ אֶת־יְמֵ֤י הַבְּעָלִים֙ אֲשֶׁ֣ר תַּקְטִ֣יר לָהֶ֔ם וַתַּ֤עַד נִזְמָהּ֙ וְחֶלְיָתָ֔הּ וַתֵּ֖לֶךְ אַחֲרֵ֣י מְאַהֲבֶ֑יהָ וְאֹתִ֥י שָׁכְחָ֖ה נְאֻם־יְהוָֽה׃ פ
14 ೧೪ “ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು.
לָכֵ֗ן הִנֵּ֤ה אָֽנֹכִי֙ מְפַתֶּ֔יהָ וְהֹֽלַכְתִּ֖יהָ הַמִּדְבָּ֑ר וְדִבַּרְתִּ֖י עַל לִבָּֽהּ׃
15 ೧೫ ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.”
וְנָתַ֨תִּי לָ֤הּ אֶת־כְּרָמֶ֙יהָ֙ מִשָּׁ֔ם וְאֶת־עֵ֥מֶק עָכ֖וֹר לְפֶ֣תַח תִּקְוָ֑ה וְעָ֤נְתָה שָּׁ֙מָּה֙ כִּימֵ֣י נְעוּרֶ֔יהָ וִּכְי֖וֹם עֲלֹתָ֥הּ מֵאֶֽרֶץ־מִצְרָֽיִם׃ ס
16 ೧೬ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ನೀನು ನನ್ನನ್ನು ಇನ್ನು ‘ಬಾಳೀ’ ಅನ್ನದೆ ‘ಈಶೀ’ ಅನ್ನುವಿ.
וְהָיָ֤ה בַיּוֹם־הַהוּא֙ נְאֻם־יְהוָ֔ה תִּקְרְאִ֖י אִישִׁ֑י וְלֹֽא־תִקְרְאִי־לִ֥י ע֖וֹד בַּעְלִֽי׃
17 ೧೭ ನಾನು ಬಾಳ್ ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಹೆಸರಿಸದಿರುವಿ.
וַהֲסִרֹתִ֛י אֶת־שְׁמ֥וֹת הַבְּעָלִ֖ים מִפִּ֑יהָ וְלֹֽא־יִזָּכְר֥וּ ע֖וֹד בִּשְׁמָֽם׃
18 ೧೮ ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
וְכָרַתִּ֨י לָהֶ֤ם בְּרִית֙ בַּיּ֣וֹם הַה֔וּא עִם־חַיַּ֤ת הַשָּׂדֶה֙ וְעִם־ע֣וֹף הַשָּׁמַ֔יִם וְרֶ֖מֶשׂ הָֽאֲדָמָ֑ה וְקֶ֨שֶׁת וְחֶ֤רֶב וּמִלְחָמָה֙ אֶשְׁבּ֣וֹר מִן־הָאָ֔רֶץ וְהִשְׁכַּבְתִּ֖ים לָבֶֽטַח׃
19 ೧೯ ನಾನು ನಿನ್ನನ್ನು ಶಾಶ್ವತವಾಗಿ ವರಿಸುವೆನು; ಹೌದು, ನೀತಿ, ನ್ಯಾಯ, ಪ್ರೀತಿ ಮತ್ತು ದಯೆಗಳಿಂದ ನಿನ್ನನ್ನು ವರಿಸುವೆನು.
וְאֵרַשְׂתִּ֥יךְ לִ֖י לְעוֹלָ֑ם וְאֵרַשְׂתִּ֥יךְ לִי֙ בְּצֶ֣דֶק וּבְמִשְׁפָּ֔ט וּבְחֶ֖סֶד וּֽבְרַחֲמִֽים׃
20 ೨೦ ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.”
וְאֵרַשְׂתִּ֥יךְ לִ֖י בֶּאֱמוּנָ֑ה וְיָדַ֖עַתְּ אֶת־יְהוָֽה׃ ס
21 ೨೧ ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು.
וְהָיָ֣ה ׀ בַּיּ֣וֹם הַה֗וּא אֶֽעֱנֶה֙ נְאֻם־יְהוָ֔ה אֶעֱנֶ֖ה אֶת־הַשָּׁמָ֑יִם וְהֵ֖ם יַעֲנ֥וּ אֶת־הָאָֽרֶץ׃
22 ೨೨ ಬೇಡುವ ಧಾನ್ಯ, ದ್ರಾಕ್ಷಾರಸ, ತೈಲಗಳಿಗೆ ಭೂಮಿಯು ಒಲಿಯುವುದು, ಬೇಡುವ ಇಜ್ರೇಲಿಗೆ ಅವು ಒಲಿಯುವವು.
וְהָאָ֣רֶץ תַּעֲנֶ֔ה אֶת־הַדָּגָ֖ן וְאֶת־הַתִּיר֣וֹשׁ וְאֶת־הַיִּצְהָ֑ר וְהֵ֖ם יַעֲנ֥וּ אֶֽת־יִזְרְעֶֽאל׃
23 ೨೩ ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು, ಲೋ ರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅಮ್ಮಿಗೆ ‘ನೀನು ನನ್ನ ಪ್ರಜೆಯೇ’ ಎಂದು ಹೇಳುವೆನು. ಅವರು ನನ್ನನ್ನು ‘ನನ್ನ ದೇವರೇ’ ಎಂದು ಭಜಿಸುವರು” ಎಂದು ನುಡಿಯುತ್ತಾನೆ.
וּזְרַעְתִּ֤יהָ לִּי֙ בָּאָ֔רֶץ וְרִֽחַמְתִּ֖י אֶת־לֹ֣א רֻחָ֑מָה וְאָמַרְתִּ֤י לְלֹֽא־עַמִּי֙ עַמִּי־אַ֔תָּה וְה֖וּא יֹאמַ֥ר אֱלֹהָֽי׃ פ

< ಹೋಶೇಯನು 2 >