< ಹೋಶೇಯನು 2 >
1 ೧ ನಿಮ್ಮ ಸಹೋದರರನ್ನು “ಅಮ್ಮಿ” ಎಂದು, ನಿಮ್ಮ ಸಹೋದರಿಯರನ್ನು “ರುಹಾಮ” ಎಂದು ಕರೆಯಿರಿ.
“Waambie ndugu zako, ‘Watu wangu,’ na pia waambie dada zako, ‘Wapendwa wangu.’
2 ೨ “ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ. ಅವಳು ವ್ಯಭಿಚಾರವನ್ನು ತನ್ನ ಮುಖಸೌಂದರ್ಯದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ.
“Mkemeeni mama yenu, mkemeeni, kwa maana yeye si mke wangu, nami si mume wake. Aondoe sura ya uzinzi katika uso wake na uzinzi kati ya matiti yake.
3 ೩ ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.
Kama sivyo nitamvua nguo zake awe uchi na kumwacha uchi kama siku ile aliyozaliwa. Nitamfanya kama jangwa, nitamgeuza awe nchi ya kiu, nami nitamuua kwa kiu.
4 ೪ ಅವಳ ಮಕ್ಕಳನ್ನೂ ಕರುಣಿಸುವುದಿಲ್ಲ, ಅವರು ವ್ಯಭಿಚಾರದಿಂದ ಹುಟ್ಟಿದ ಮಕ್ಕಳಲ್ಲವೇ.
Sitaonyesha upendo wangu kwa watoto wake, kwa sababu ni watoto wa uzinzi.
5 ೫ ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”
Mama yao amekosa uaminifu na amewachukua mimba katika aibu. Gomeri alisema, ‘Nitawaendea wapenzi wangu, ambao hunipa chakula changu na maji yangu, sufu yangu na kitani yangu, mafuta yangu na kinywaji changu.’
6 ೬ ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ತನಗೆ ಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.
Kwa hiyo mimi Mungu nitaizuia njia yake kwa vichaka vya miiba, nitamjengea ukuta ili kwamba asiweze kutoka.
7 ೭ ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು.
Gomeri atawafuatia wapenzi wake lakini hatawapata; atawatafuta lakini hatawapata. Kisha atasema, ‘Nitarudi kwa mume wangu kama kwanza, kwa maana nilikuwa na hali njema zaidi kuliko sasa.’
8 ೮ ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.
Gomeri hajakubali kuwa mimi ndiye niliyempa nafaka, divai mpya na mafuta, niliyemwongezea fedha na dhahabu waliyoitumia kwa kumtumikia Baali.
9 ೯ ಆದಕಾರಣ ನಾನು ನನ್ನ ಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವುದಕ್ಕೆ ನಾನು ಕೊಟ್ಟ ಉಣ್ಣೆ, ನಾರುಗಳನ್ನು ಹಿಂತೆಗೆದುಕೊಳ್ಳುವೆನು.
“Kwa hiyo nitachukua nafaka yangu wakati itakapokomaa na divai yangu mpya wakati itakapokuwa tayari. Nitamnyangʼanya sufu yangu na kitani yangu iliyokusudiwa kufunika uchi wake.
10 ೧೦ ಈಗ ಅವಳೊಂದಿಗೆ ವ್ಯಭಿಚಾರ ಮಾಡಿದವರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.
Basi sasa nitaufunua ufisadi wake mbele ya wapenzi wake; hakuna yeyote atakayemtoa mikononi mwangu.
11 ೧೧ ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
Nitakomesha furaha na macheko yake yote: sikukuu zake za mwaka, sikukuu za Miandamo ya Mwezi, siku zake za Sabato, sikukuu zake zote zilizoamriwa.
12 ೧೨ ಅವಳು ಯಾವ ಅಂಜೂರ ಮತ್ತು ದ್ರಾಕ್ಷಿಗಳನ್ನು ‘ಇವು ನನ್ನೊಂದಿಗೆ ವ್ಯಭಿಚಾರ ಮಾಡಿದವರಿಂದಾದ ಪ್ರತಿಫಲ’ ಅಂದುಕೊಂಡಳೋ, ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.
Nitaiharibu mizabibu yake na mitini yake, ambayo alisema yalikuwa malipo yake kutoka kwa wapenzi wake; nitaifanya kuwa kichaka, nao wanyama pori wataila.
13 ೧೩ ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”
Nitamwadhibu kwa ajili ya siku alizowafukizia uvumba Mabaali; alipojipamba kwa pete na kwa vito vya thamani, na kuwaendea wapenzi wake, lakini mimi alinisahau,” asema Bwana.
14 ೧೪ “ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು.
“Kwa hiyo sasa nitamshawishi; nitamwongoza hadi jangwani na kuzungumza naye kwa upole.
15 ೧೫ ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.”
Huko nitamrudishia mashamba yake ya mizabibu, nami nitalifanya Bonde la Akori mlango wa matumaini. Huko ataimba kama alivyofanya katika siku za ujana wake, kama siku zile alizotoka Misri.
16 ೧೬ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ನೀನು ನನ್ನನ್ನು ಇನ್ನು ‘ಬಾಳೀ’ ಅನ್ನದೆ ‘ಈಶೀ’ ಅನ್ನುವಿ.
“Katika siku ile,” asema Bwana, “utaniita mimi ‘Mume wangu’; hutaniita tena mimi ‘Bwana wangu.’
17 ೧೭ ನಾನು ಬಾಳ್ ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಹೆಸರಿಸದಿರುವಿ.
Nitaondoa majina ya Mabaali kutoka midomoni mwake, wala hataomba tena kwa majina yao.
18 ೧೮ ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
Katika siku ile nitafanya Agano kwa ajili yao na wanyama wa kondeni, na ndege wa angani, na viumbe vile vitambaavyo ardhini. Upinde, upanga na vita, nitaondolea mbali katika nchi, ili kwamba wote waweze kukaa salama.
19 ೧೯ ನಾನು ನಿನ್ನನ್ನು ಶಾಶ್ವತವಾಗಿ ವರಿಸುವೆನು; ಹೌದು, ನೀತಿ, ನ್ಯಾಯ, ಪ್ರೀತಿ ಮತ್ತು ದಯೆಗಳಿಂದ ನಿನ್ನನ್ನು ವರಿಸುವೆನು.
Nitakuposa uwe wangu milele; nitakuposa kwa uadilifu na haki, kwa upendo na huruma.
20 ೨೦ ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.”
Nitakuposa kwa uaminifu, nawe utamkubali Bwana.
21 ೨೧ ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು.
“Katika siku ile nitajibu,” asema Bwana, “nitajibu kwa anga, nazo anga zitajibu kwa nchi;
22 ೨೨ ಬೇಡುವ ಧಾನ್ಯ, ದ್ರಾಕ್ಷಾರಸ, ತೈಲಗಳಿಗೆ ಭೂಮಿಯು ಒಲಿಯುವುದು, ಬೇಡುವ ಇಜ್ರೇಲಿಗೆ ಅವು ಒಲಿಯುವವು.
nayo nchi itajibu kwa nafaka, divai mpya na mafuta, navyo vitajibu kwa Yezreeli.
23 ೨೩ ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು, ಲೋ ರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅಮ್ಮಿಗೆ ‘ನೀನು ನನ್ನ ಪ್ರಜೆಯೇ’ ಎಂದು ಹೇಳುವೆನು. ಅವರು ನನ್ನನ್ನು ‘ನನ್ನ ದೇವರೇ’ ಎಂದು ಭಜಿಸುವರು” ಎಂದು ನುಡಿಯುತ್ತಾನೆ.
Nitampanda katika nchi kwa ajili yangu mwenyewe; nami nitaonyesha pendo langu kwake yule ambaye nilimwita, ‘Si mpenzi wangu.’ Nitawaambia wale walioitwa, ‘Sio watu wangu,’ ‘Ninyi ni watu wangu’; nao watasema, ‘Wewe ndiwe Mungu wangu.’”