< ಹೋಶೇಯನು 5 >

1 ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
Слушайте это, священники, и внимайте, дом Израилев, и приклоните ухо, дом царя; ибо вам будет суд, потому что вы были западнею в Массифе и сетью, раскинутою на Фаворе.
2 ನನಗೆ ತಿರುಗಿಬಿದ್ದವರು ಅಗಾಧವಾದ ಕೊಲೆಯಲ್ಲಿ ಮಗ್ನರಾಗಿದ್ದಾರೆ; ನಾನೇ ಅವರೆಲ್ಲರನ್ನೂ ಶಿಕ್ಷಿಸುವೆನು.
Глубоко погрязли они в распутстве; но Я накажу всех их.
3 ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲ್ ನನಗೆ ಮರೆಯಾಗಿಲ್ಲ; ಎಫ್ರಾಯೀಮೇ, ನೀನೀಗ ವ್ಯಭಿಚಾರ ಮಾಡಿದ್ದಿ, ಇಸ್ರಾಯೇಲ್ ಹೊಲೆಯಾಗಿದೆ.
Ефрема Я знаю, и Израиль не сокрыт от Меня; ибо ты блудодействуешь, Ефрем, и Израиль осквернился.
4 ಅವರು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಅವರನ್ನು ಬಿಡುವುದಿಲ್ಲ; ವ್ಯಭಿಚಾರದ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ತಿಳಿದುಕೊಂಡಿಲ್ಲ.
Дела их не допускают их обратиться к Богу своему, ибо дух блуда внутри них, и Господа они не познали.
5 ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇಸ್ರಾಯೇಲೂ ಮತ್ತು ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವುದು.
И гордость Израиля унижена в глазах их; и Израиль и Ефрем падут от нечестия своего; падет и Иуда с ними.
6 ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು; ಆತನು ಸಿಕ್ಕುವುದಿಲ್ಲ, ಅವುಗಳಿಂದ ಮರೆಯಾಗಿದ್ದಾನೆ.
С овцами своими и волами своими пойдут искать Господа и не найдут Его: Он удалился от них.
7 ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ, ಅವುಗಳ ಭೂಸ್ವಾಸ್ತ್ಯಗಳನ್ನೂ ಈ ಅಮಾವಾಸ್ಯೆಯು ನುಂಗಿಬಿಡುವುದು.
Господу они изменили, потому что родили чужих детей; ныне новый месяц поест их с их имуществом.
8 ಗಿಬ್ಯದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತ್ ಅವೆನಿನಲ್ಲಿ ಆರ್ಭಟಿಸಿರಿ, ಬೆನ್ಯಾಮೀನೇ, ಹಿಂದೆ ನೋಡು!
Вострубите рогом в Гиве, трубою в Раме; возглашайте в Беф-Авене: за тобою, Вениамин!
9 ದಂಡನೆಯ ದಿನದಲ್ಲಿ ಎಫ್ರಾಯೀಮು ಹಾಳಾಗುವುದು; ಇಸ್ರಾಯೇಲ್ ಕುಲಗಳ ಭವಿಷ್ಯತ್ತಿನ ನಿಶ್ಚಯವನ್ನು ತಿಳಿಯಪಡಿಸಿದ್ದೇನೆ.
Ефрем сделается пустынею в день наказания; между коленами Израилевыми Я возвестил это.
10 ೧೦ ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು.
Вожди Иудины стали подобны передвигающим межи: изолью на них гнев Мой, как воду.
11 ೧೧ ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.
Угнетен Ефрем, поражен судом; ибо захотел ходить вслед суетных.
12 ೧೨ ನಾನು ಎಫ್ರಾಯೀಮಿಗೆ ನುಸಿ, ಯೆಹೂದ ಕುಲಕ್ಕೆ ಒಣ ಕುಂಟೆಯಂತಿರುವೆನು.
И буду как моль для Ефрема и как червь для дома Иудина.
13 ೧೩ ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.
И увидел Ефрем болезнь свою, и Иуда - свою рану, и пошел Ефрем к Ассуру, и послал к царю Иареву; но он не может исцелить вас и не излечит вас от раны.
14 ೧೪ ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.
Ибо Я как лев для Ефрема и как скимен для дома Иудина; Я, Я растерзаю и уйду; унесу, и никто не спасет.
15 ೧೫ ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.
Пойду, возвращусь в Мое место, доколе они не признают себя виновными и не взыщут лица Моего.

< ಹೋಶೇಯನು 5 >