< ಹೋಶೇಯನು 6 >
1 ೧ ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.
오라 우리가 여호와께로 돌아가자 여호와께서 우리를 찢으셨으나 도로 낫게 하실 것이요 우리를 치셨으나 싸매어 주실 것임이라
2 ೨ ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.
여호와께서 이틀 후에 우리를 살리시며 제삼일에 우리를 일으키시리니 우리가 그 앞에서 살리라
3 ೩ ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.
그러므로 우리가 여호와를 알자 힘써 여호와를 알자 그의 나오심은 새벽 빛 같이 일정하니 비와 같이, 땅을 적시는 늦은 비와 같이 우리에게 임하시리라 하리라
4 ೪ ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.
에브라임아 내가 네게 어떻게 하랴 유다야 내가 네게 어떻게 하랴 너희의 인애가 아침 구름이나 쉬 없어지는 이슬 같도다
5 ೫ ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು.
그러므로 내가 선지자들로 저희를 치고 내 입의 말로 저희를 죽였노니 내 심판은 발하는 빛과 같으니라
6 ೬ ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.
나는 인애를 원하고 제사를 원치 아니하며 번제보다 하나님을 아는 것을 원하노라
7 ೭ ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.
저희는 아담처럼 언약을 어기고 거기서 내게 패역을 행하였느니라
8 ೮ ಗಿಲ್ಯಾದು ಅಧರ್ಮಿಗಳು ತುಂಬಿದ ಪಟ್ಟಣ, ಅಲ್ಲಿನ ಹೆಜ್ಜೆಜಾಡುಗಳು ರಕ್ತಮಯವೇ.
길르앗은 행악자의 고을이라 피 발자취가 편만하도다
9 ೯ ಕಳ್ಳರ ಗುಂಪು ಒಬ್ಬನಿಗೆ ಹೊಂಚು ಹಾಕುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು, ಶೆಕೆಮಿಗೆ ಯಾತ್ರೆ ಹೋಗುವವರನ್ನು ದೋಚಿ ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡೆಸುತ್ತಾರೆ.
강도 떼가 사람을 기다림 같이 제사장의 무리가 세겜 길에서 살인하니 저희가 사악을 행하였느니라
10 ೧೦ ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀಮಿನೊಳಗೆ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ.
내가 이스라엘 집에서 가증한 일을 보았나니 거기서 에브라임은 행음하였고 이스라엘은 더럽혔느니라
11 ೧೧ ಯೆಹೂದವೇ, ನಿನಗೂ ಅಧರ್ಮಫಲದ ಸುಗ್ಗಿಯು ನೇಮಕವಾಗಿದೆ.
유다여 내가 내 백성의 사로잡힘을 돌이킬 때에 네게도 추수할 일을 정하였느니라