< ಹೋಶೇಯನು 7 >
1 ೧ ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.
わたしがイスラエルをいやすとき、エフライムの不義と、サマリヤの悪しきわざとは現れる。彼らは偽りをおこない、内では盗びとが押し入り、外では山賊の群れが襲いきたる。
2 ೨ ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.
しかし、彼らはわたしが彼らのすべての悪を覚えていることを悟らない。今、そのわざは彼らを囲んで、わたしの顔の前にある。
3 ೩ ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ.
彼らはその悪をもって王を喜ばせ、その偽りをもって君たちを喜ばせる。
4 ೪ ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ, ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.
彼らはみな姦淫を行う者で、パンを焼く者が熱くする炉のようだ。パンを焼く者は、ねり粉をこねてから、それがふくれるまで、しばらく、火をおこす事をしないだけだ。
5 ೫ ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.
われわれの王の日に、つかさたちは酒の熱によって病みわずらい、王はあざける者と共に手を伸べた。
6 ೬ ಅವರು ಹೊಂಚಿಕೊಂಡಿರುವಾಗ ಆಹಾ, ತಮ್ಮ ಹೃದಯವನ್ನು ಒಲೆಯಂತೆ ಸಿದ್ಧಮಾಡಿ ಉರಿಯುತ್ತಿದ್ದಾರೆ; ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ; ಬೆಳಿಗ್ಗೆ ಧಗಧಗನೆ ಉರಿಯುತ್ತದೆ.
彼らは陰謀をもってその心を炉のように燃やす。その怒りは夜通しくすぶり、朝になると炎のように燃える。
7 ೭ ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.
彼らは皆、炉のように熱くなって、そのさばきびとを焼き滅ぼす。そのもろもろの王は皆たおれる。彼らの中にはわたしを呼ぶ者がひとりもない。
8 ೮ ಎಫ್ರಾಯೀಮು ಜನಾಂಗಗಳಲ್ಲಿ ಸೇರಿಕೊಳ್ಳುತ್ತದೆ; ಎಫ್ರಾಯೀಮು ತಿರುವಿಹಾಕದ ರೊಟ್ಟಿಯಂತಿದೆ.
エフライムはもろもろの民の中に入り混じる。エフライムは火にかけて、かえさない菓子である。
9 ೯ ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.
他国人らは彼の力を食い尽すが、彼はそれを知らない。しらがが混じってはえても、それを悟らない。
10 ೧೦ ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ; ಆತನನ್ನು ಆಶ್ರಯಿಸಲಿಲ್ಲ.
イスラエルの誇は自らに向かって証言している、彼らはこのもろもろの事があっても、なおその神、主に帰らず、また主を求めない。
11 ೧೧ ಎಫ್ರಾಯೀಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ.
エフライムは知恵のない愚かな、はとのようだ。彼らはエジプトに向かって呼び求め、またアッスリヤへ行く。
12 ೧೨ ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ, ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು. ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು.
彼らが行くとき、わたしは彼らの上に網を張って、空の鳥のように引き落し、その悪しきおこないのゆえに、彼らを懲らしめる。
13 ೧೩ ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!
わざわいなるかな、彼らはわたしを離れて迷い出た。滅びは彼らに臨む。彼らがわたしに向かって罪を犯したからだ。わたしは彼らをあがなおうと思うが、彼らはわたしに逆らって偽りを言う。
14 ೧೪ ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.
彼らは真心をもってわたしを呼ばず、ただ床の上で悲しみ叫ぶ。彼らは穀物と酒のためには集まるが、わたしに逆らう。
15 ೧೫ ಅವರಿಗೆ ಯುದ್ಧವನ್ನು ಕಲಿಸಿ, ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ.
わたしは彼らを教え、その腕を強くしたが、彼らはわたしに逆らって、悪しき事をはかる。
16 ೧೬ ಅತ್ತಿತ್ತ ತಿರುಗಿಕೊಳ್ಳುತ್ತಾರೆ, ದೇವರ ಕಡೆಗೆ ತಿರುಗಿಕೊಳ್ಳುವುದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ. ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿಮಿತ್ತ ಖಡ್ಗದಿಂದ ಹತರಾಗಿ ಬೀಳುವರು; ಅವರ ಸೋಲು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವುದು.
彼らはバアルに帰る。彼らはあざむく弓のようだ。彼らの君たちはその舌の高ぶりのために、つるぎに倒れる。これはエジプトの国で人々のあざけりとなる。