< ಹೋಶೇಯನು 8 >
1 ೧ “ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.
१“मुखाला तुतारी लाव, परमेश्वराच्या, घरावर गरुड येत आहे, हे यासाठी घडत आहे कारण लोकांनी माझा करार मोडून माझ्या नियम शास्त्राच्या विरोधात बंड केले आहे.
2 ೨ ಅವರು ನನ್ನನ್ನು, ‘ನಮ್ಮ ದೇವರೇ, ಇಸ್ರಾಯೇಲರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ’ ಎಂದು ಕೂಗಿಕೊಳ್ಳುವರು.
२ते माझा धावा करतात, माझ्या देवा, आम्ही इस्राएली तुला जाणतो”
3 ೩ ಇಸ್ರಾಯೇಲರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.
३पण इस्राएलाने जे चांगले ते नाकारले आहे, आणि शत्रू त्याचा पाठलाग करेल.
4 ೪ ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.
४त्यांनी राजे नेमले, पण माझ्या द्वारे नाही; त्यांनी राजपुत्र स्थापले आहे, पण माझे ज्ञान न घेता त्यांनी, आपले सोने व चांदी घेऊन, स्वत: साठी मूर्ती बनविल्या आहेत. त्यानेच ते नाश पावतील.
5 ೫ ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವುದಕ್ಕೆ ಇನ್ನೆಷ್ಟು ಕಾಲ ಹಿಡಿಯುವುದೋ?
५संदेष्टा म्हणतो, हे शोमरोना तुझे वासरू त्याने नाकारले आहे, परमेश्वर म्हणतो, या लोकांविरुध्द माझा राग पेटेल, किती वेळ ते अशुद्ध राहणार?
6 ೬ ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.
६कारण ही मूर्ती इस्राएलातून आली, कारागिराने बनवली, ती देव नाही शोमरोनाच्या वासराचे तुकडे होतील.
7 ೭ ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.
७कारण लोक वारा पेरतात आणि वावटळीची कापणी करतात, उभ्या पिकाला कणीस नाही, ते धान्याचे पिठ उत्पन्न करणार नाही, आणि जर त्याची पूर्ण वाढ झाली तरी परके त्यास गिळून टाकतील.
8 ೮ ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.
८इस्राएलास गिळले आहे, आता ते देशामध्ये बिन कामाची लबाडी करतात.
9 ೯ ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.
९कारण ते अश्शूरास रानगाढवासारखे गेले, एफ्राईमाने आपल्यासाठी प्रियकर नेमले आहेत.
10 ೧೦ ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.
१०जरी त्यांनी देशात प्रियकर नेमले, तरी मी त्यांना आता एकत्र करीन. राजे आणि पुढारी यांच्या दबावामुळे ते कमी होतील.
11 ೧೧ ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣಮಿಸಿವೆ.
११कारण एफ्राईमाने पापबलींसाठी आपल्या वेद्या वाढवल्या आहेत, पण त्या वेद्या पाप करण्याचे कारण ठरल्या आहेत.
12 ೧೨ ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ, ಅವುಗಳು ತನಗೆ ಸಂಬಂಧಪಟ್ಟವುಗಳಲ್ಲ ಎಂದು ಅದು ಭಾವಿಸುತ್ತದೆ.
१२मी असंख्य वेळा माझे नियमशास्त्र त्यांच्यासाठी लिहीले, पण ते त्याकडे अनोळख्या सारखे पाहतात.
13 ೧೩ ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.
१३मला अर्पणे करावी म्हणून ते मांस देतात व खातात, पण मी परमेश्वर, ते स्वीकारत नाही. आता मी त्यांचे पाप स्मरण करून त्यांना शासन करणार, ते मिसर देशात परत जातील.
14 ೧೪ ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”
१४इस्राएलाला आपल्या निर्माणकर्त्या परमेश्वराचा विसर पडला आहे आणि त्याने महाल बांधले आहेत, यहूदाने तटबंदीची नगरे वसवली आहेत, पण मी त्याच्या शहरावर अग्नी पाठवीन, तो त्याची तटबंदी नष्ट करून टाकेल.