< ಹೋಶೇಯನು 8 >

1 “ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.
Трубу к устам твоим! Как орел налетит на дом Господень за то, что они нарушили завет Мой и преступили закон Мой!
2 ಅವರು ನನ್ನನ್ನು, ‘ನಮ್ಮ ದೇವರೇ, ಇಸ್ರಾಯೇಲರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ’ ಎಂದು ಕೂಗಿಕೊಳ್ಳುವರು.
Ко Мне будут взывать: Боже мой! мы познали Тебя, мы - Израиль.
3 ಇಸ್ರಾಯೇಲರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.
Отверг Израиль доброе; враг будет преследовать его.
4 ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.
Поставляли царей сами, без Меня; ставили князей, но без Моего ведома; из серебра своего и золота своего сделали для себя идолов: оттуда гибель.
5 ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವುದಕ್ಕೆ ಇನ್ನೆಷ್ಟು ಕಾಲ ಹಿಡಿಯುವುದೋ?
Оставил тебя телец твой, Самария! воспылал гнев Мой на них; доколе не могут они очиститься?
6 ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.
Ибо и он дело Израиля: художник сделал его, и потому он не бог; в куски обратится телец Самарийский!
7 ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.
Так как они сеяли ветер, то и пожнут бурю: хлеба на корню не будет у него; зерно не даст муки; а если и даст, то чужие проглотят ее.
8 ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.
Поглощен Израиль; теперь они будут среди народов как негодный сосуд.
9 ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.
Они пошли к Ассуру, как дикий осел, одиноко бродящий; Ефрем приобретал подарками расположение к себе.
10 ೧೦ ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.
Хотя они и посылали дары к народам, но скоро Я соберу их, и они начнут страдать от бремени царя князей;
11 ೧೧ ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣಮಿಸಿವೆ.
ибо много жертвенников настроил Ефрем для греха, - ко греху послужили ему эти жертвенники.
12 ೧೨ ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ, ಅವುಗಳು ತನಗೆ ಸಂಬಂಧಪಟ್ಟವುಗಳಲ್ಲ ಎಂದು ಅದು ಭಾವಿಸುತ್ತದೆ.
Написал Я ему важные законы Мои, но они сочтены им как бы чужие.
13 ೧೩ ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.
В жертвоприношениях Мне они приносят мясо и едят его; Господу неугодны они; ныне Он вспомнит нечестие их и накажет их за грехи их: они возвратятся в Египет.
14 ೧೪ ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”
Забыл Израиль Создателя своего и устроил капища, и Иуда настроил много укрепленных городов; но Я пошлю огонь на города его, и пожрет чертоги его.

< ಹೋಶೇಯನು 8 >