< ಹೋಶೇಯನು 9 >
1 ೧ ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.
以色列! 你不要高興,不要像異民一樣狂歡,因為你行了淫,離棄了你的天主,在所有的禾場上只是喜歡淫資。
2 ೨ ಕಣವೂ, ದ್ರಾಕ್ಷಿಯ ತೊಟ್ಟಿಯೂ ನಿನ್ನ ಜನರಿಗೆ ಜೀವನ ಆಧಾರವಾಗುವುದಿಲ್ಲ; ಹೊಸ ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವ್ಯರ್ಥವಾಗಿ ಹೋಗುವುದು.
禾場與榨酒也不再認識他們,新酒也要拒絕他們。
3 ೩ ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.
他們必不能在上主的地方居住;厄弗辣因必要回到埃及,且要在亞述吃不潔之物。
4 ೪ ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗುವುದಿಲ್ಲ. ಅವರ ಆಹಾರವು ಸತ್ತವರ ಮನೆಯ ಆಹಾರದಂತಿರುವುದು; ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಅವರ ಹೊಟ್ಟೆತುಂಬುವುದಕ್ಕೆ ಮಾತ್ರ ಅನುಕೂಲವಾಗುವುದು, ಅದು ಯೆಹೋವನ ಆಲಯಕ್ಕೆ ಬರಲು ಯೋಗ್ಯವಲ್ಲ.
他們不能向上主奠洒,也不能再向衪奉獻的祭品;他們的餅好似喪餅,凡吃這餅的,必受玷污;因為他們的餅只可為他們自用,不能帶進上主殿內。
5 ೫ ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿನದಲ್ಲಿ ಏನು ಮಾಡುವಿರಿ?
那麼你們在盛會之日,在上主火節日,可作什麼呢﹖
6 ೬ ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.
因為,看,他們由毀滅裏逃走,埃及要收集他們,摩夫要埋葬他們;他們的尊貴的銀器將為蒺藜所承受,他們的帳幕將被荊棘所佔有。
7 ೭ ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.
懲罰的日子來了,報復的日子到了,以色列要喊說:先知是愚人,受靈感的人是瘋子! 是,這是因為你的過犯繁多,因為你的罪惡重大。
8 ೮ ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚು ಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಗಾರನ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿನ ವಿರೋಧವು ಕಾದಿದೆ.
厄弗辣因窺伺先知的帳幕,在他的路上處處佈下了羅網,在自己天主的殿內只敵視。
9 ೯ ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.
他們窮凶已到了極點,就如在基貝亞的時日一樣;上主必不忘你們的罪孽,必要懲罰他們的邪惡。
10 ೧೦ ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.
我發現了以色列,就如曠野中發現葡萄;看見你們的祖先,就如在無花果樹上看見初熱的果實;但當他們來到了巴耳培敖爾時,便將自己獻給了可憎之物,使自己也成了可憎惡的,如他們所善愛的邪神一樣。
11 ೧೧ ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು.
至於厄弗辣因,因他們的光榮,就如飛鳥飛去,必不生產,不懷胎,不妊娠。
12 ೧೨ ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!
既使他們把自己的子女養大,我也必使他們喪亡,一個不留;幾時我捨棄他們,他們才是有禍的。
13 ೧೩ ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.
厄弗辣因,一如我所見的,必使自己的子女成為獵物;厄弗辣因必把自己的子女交出屠殺。
14 ೧೪ ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತೀಯೋ? ಅವರಿಗೆ ಗರ್ಭಸ್ರಾವವನ್ನು ಮಾಡು, ಮೊಲೆಯನ್ನು ಬತ್ತಿಸು.
上主,求你賜給他們....賜給他們什麼呢﹖要使他們胎荒,乳乾!
15 ೧೫ ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.
他們所行的一切惡事,全在基耳加耳開始,因此,在那裏我就恨了他們;為了他們的惡行,我必將他們從我父的家趕出去;我不再喜愛他們,他們的首領全是叛徒
16 ೧೬ ಎಫ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ. ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.
厄弗辣因受了打擊,根子也乾枯了,再不能結果實;既使他們生了孩子,我也必將他們的寧馨兒殺死。
17 ೧೭ ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವುದು.
我的天主必要拋棄他們,因為他們沒有聽從衪;他們必要在各民族中飄流。