< ಯೆಶಾಯನು 10 >
1 ೧ ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.
ধিক্ তাদের, যারা অন্যায় সব বিধান তৈরি করে, যারা অত্যাচার করার জন্য রায় ঘোষণা করে,
2 ೨ ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.
যেন নিজস্ব অধিকার থেকে দরিদ্রদের বঞ্চিত করে এবং আমার জাতির অত্যাচারিত লোকদের থেকে ন্যায়বিচার হরণ করে, যারা বিধবাদের তাদের শিকার বানায় এবং পিতৃহীনদের সর্বস্ব লুট করে।
3 ೩ ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?
হিসেব নেওয়ার দিনে তোমরা কী করবে, যখন দূর থেকে তোমাদের উপরে বিপর্যয় নেমে আসবে? সাহায্যের জন্য কার কাছে তোমরা দৌড়ে যাবে? তোমাদের ধনসম্পদ সব কোথায় রাখবে?
4 ೪ ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
বন্দিদের মধ্যে ভয়ে কুঁকড়ে থাকা অথবা নিহতদের পতিত হওয়া ছাড়া আর কিছু থাকবে না। তবুও, এ সকলের জন্য তাঁর ক্রোধ প্রশমিত হয়নি, তাঁর হাত এখনও উপরে উঠে আছে।
5 ೫ ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
“আসিরিয়াকে ধিক্, সে আমার ক্রোধের লাঠি, যার হাতে আছে আমার রোষের মুগুর!
6 ೬ ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
আমি তাকে এক ভক্তিহীন জাতির বিরুদ্ধে পাঠাব, আমি তাকে এক জাতির বিরুদ্ধে প্রেরণ করব, যারা আমাকে ক্রুদ্ধ করেছে, যেন সে লুট করে ও লুণ্ঠনের দ্রব্য কেড়ে নেয়, আর পথের কর্দমের মতো তাদের পদদলিত করে।
7 ೭ ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.
কিন্তু এরকম তিনি করতে চান না, এরকম কিছু তাঁর মনে আসেনি; তাঁর অভিপ্রায় হল ধ্বংস করা, অনেক জাতির পরিসমাপ্তি ঘটানো।
8 ೮ ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?
তিনি বলেন, ‘আমার সেনাপতিরা কি সবাই রাজা নয়?
9 ೯ ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?
আমার হাতে কল্নো কি কর্কমীশের মতো, হমাৎ কি অর্পদের মতো এবং শমরিয়া কি দামাস্কাসের মতো মন্দ বরাত হয়নি?
10 ೧೦ ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,
আমার হাত যেমন প্রতিমায় পূর্ণ রাজ্যগুলিকে অবরুদ্ধ করেছে, সেইসব রাজ্য, যাদের মূর্তিগুলি জেরুশালেম ও শমরিয়াকেও ছাড়িয়ে গেছে,
11 ೧೧ ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ, ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕೆಡವಲಾರೆನೋ?” ಎಂಬುದೇ.
আমি কি জেরুশালেম ও তার মূর্তিগুলির তেমনই অবস্থা করব না, যেমন আমি করেছি শমরিয়া ও তার প্রতিমাদের?’”
12 ೧೨ ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”
প্রভু যখন সিয়োন পর্বত ও জেরুশালেমের বিরুদ্ধে তাঁর সব কর্ম সমাপ্ত করবেন, তিনি বলবেন, “অহংকারে পূর্ণ হৃদয় ও উদ্ধত দৃষ্টির জন্য আমি আসিরীয় রাজাকে শাস্তি দেব।
13 ೧೩ ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
কারণ সে বলে: “‘আমার হাতের শক্তিতে ও আমার প্রজ্ঞার দ্বারা আমি এই কাজ করেছি, কারণ আমার বুদ্ধি আছে। আমি জাতিসমূহের সীমানাগুলি অপসারিত করেছি, আমি তাদের ধনসম্পদ লুট করেছি; এক পরাক্রমী ব্যক্তির মতো তাদের রাজাদের আমি পদানত করেছি।
14 ೧೪ ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ” ಎಂದು ಅಂದುಕೊಂಡನು.
যেমন কেউ পাখির বাসায় হাত দেয়, তেমনই জাতিসমূহের ঐশ্বর্যে আমার হাত পৌঁছেছে; লোকে যেমন পরিত্যক্ত ডিম সংগ্রহ করে, তেমনই আমি সব দেশকে একত্র করেছি; কেউ তার একটিও ডানা ঝাপটায়নি, বা মুখে চিঁ চিঁ শব্দ করেনি।’”
15 ೧೫ ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.
কুড়াল কি কাষ্ঠচ্ছেদকের উপরে আস্ফালন করতে পারে? অথবা করাত কি কাঠমিস্ত্রীর বিরুদ্ধে নিজেকে বড়ো মনে করতে পারে? কেউ না চালালে লাঠি কি কাউকে যন্ত্রণা দিতে পারে? কোনো কাঠের মুগুর কি নিজে নিজেই চালিত হয়?
16 ೧೬ ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.
সেই কারণে, প্রভু, সর্বশক্তিমান সদাপ্রভু, তাঁর বলবান যোদ্ধাদের মধ্যে একটি ক্ষয়ে যাওয়া রোগ পাঠিয়ে দেবেন; তার সমারোহের মধ্যে একটি আগুন, একটি প্রজ্বলিত আগুনের শিখা জ্বালিয়ে দেওয়া হবে।
17 ೧೭ ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.
ইস্রায়েলের জ্যোতি আগুনের মতো হবেন, তাদের সেই পবিত্রতম জন এক আগুনের শিখা হবেন; একদিনের মধ্যে তার শিয়ালকাঁটা ও কাঁটাঝোপ দগ্ধ হয়ে গ্রাসিত হবে।
18 ೧೮ ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.
তার অরণ্যগুলির শোভা ও উর্বরা মাঠগুলি তা সম্পূর্ণরূপে ধ্বংস করবে, যেভাবে কোনো অসুস্থ মানুষ ক্ষয় পায়।
19 ೧೯ ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು.
আর অরণ্যের অবশিষ্ট গাছগুলি সংখ্যায় এত অল্প হবে যে একজন শিশু তাদের গণনা করে লিখে ফেলবে।
20 ೨೦ ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.
সেদিন, ইস্রায়েলের অবশিষ্ট লোকেরা, যাকোবের কুলে যারা বেঁচে থাকবে তারা, তারা আর তার উপরে নির্ভর করবে না যে তাদের আঘাত করে পতিত করেছিল, কিন্তু তারা প্রকৃতই সদাপ্রভুর উপর নির্ভর করবে, যিনি ইস্রায়েলের সেই পবিত্রতম জন।
21 ೨೧ ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.
এক অবশিষ্ট অংশ ফিরে আসবে; যাকোব কুলের এক অবশিষ্ট অংশ, পরাক্রমী ঈশ্বরের কাছে ফিরে আসবে।
22 ೨೨ ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.
যদিও তোমার লোকেরা ও ইস্রায়েল সমুদ্রতীরের বালির মতো হয়, তবুও, এক অবশিষ্টাংশই ফিরে আসবে। ধ্বংসের রায় ঘোষিত হয়েছে, তা হবে প্রবল এবং ন্যায়বিচার অনুযায়ী।
23 ೨೩ ಏಕೆಂದರೆ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶನವನ್ನು ಉಂಟುಮಾಡುವನು.
প্রভু, সর্বশক্তিমান সদাপ্রভু, সমস্ত দেশের উপরে ঘোষিত ধ্বংসের রায় কার্যকর করবেন।
24 ೨೪ ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
সেই কারণে, প্রভু, সর্বশক্তিমান সদাপ্রভু এই কথা বলেন: “সিয়োনে বসবাসকারী, ও আমার প্রজারা, তোমরা আসিরীয়দের থেকে ভীত হোয়ো না, যারা মিশরের মতোই তোমাদের লাঠি দিয়ে প্রহার করেছিল ও তোমাদের বিরুদ্ধে মুগুর তুলেছিল।
25 ೨೫ ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”
খুব শীঘ্রই তোমাদের বিরুদ্ধে আমার ক্রোধের পরিসমাপ্তি হবে, আর আমার রোষ তাদের ধ্বংসের প্রতি চালিত হবে।”
26 ೨೬ ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.
সর্বশক্তিমান সদাপ্রভু তাদের এক চাবুক দিয়ে প্রহার করবেন, যেভাবে তিনি ওরেব-শৈলে মিদিয়নকে যন্ত্রণা দিয়েছিলেন; তিনি তাঁর লাঠি জলরাশির উপরে তুলবেন, যেমন তিনি মিশরে করেছিলেন।
27 ೨೭ ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.
সেদিন, তোমাদের কাঁধে দেওয়া তাদের বোঝা ও তোমাদের ঘাড় থেকে তাদের জোয়াল তুলে নেওয়া হবে; সেই জোয়াল ভেঙে ফেলা হবে, কারণ তোমরা ভীষণ হৃষ্টপুষ্ট হয়েছ।
28 ೨೮ ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.
তারা অয়াতে প্রবেশ করেছে; তারা মিগ্রোণের মধ্য দিয়ে অতিক্রম করেছে; তারা মিক্মসে তাদের দ্রব্যসামগ্রী সঞ্চয় করেছে।
29 ೨೯ ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ. ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.
তারা গিরিপথ অতিক্রম করে ও বলে, “আমরা রাত্রির মধ্যে গেবাতে শিবির স্থাপন করব।” রামা ভয়ে কম্পিত হয়; শৌলের গিবিয়া পলায়ন করে।
30 ೩೦ ಗಲ್ಲೀಮ್ ಗ್ರಾಮವೇ, ಕೂಗಿ ಅರಚಿಕೋ! ಲಯೆಷವೇ, ಕಿವಿಗೊಡು! ಅನಾತೋತೇ, ಪ್ರತಿಧ್ವನಿ ಕೊಡು!
গল্লীমের কন্যারা, তোমরা ক্রন্দন করো! ও লয়িশার লোকেরা, তোমরা শ্রবণ করো! হায়! দুঃখী অনাথোৎ!
31 ೩೧ ಮದ್ಮೇನ ದಿಕ್ಕಾಪಾಲಾಯಿತು. ಗೇಬೀಮಿನ ನಿವಾಸಿಗಳು ವಲಸೆ ಹೋದರು.
মদ্মেনার লোকেরা পালিয়ে যাচ্ছে; গেবীমের লোকেরা নিজেদের লুকাচ্ছে।
32 ೩೨ ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.
আজকের দিনে তারা নোবে গিয়ে স্থগিত হবে; সে সিয়োন-কন্যার পর্বতের দিকে, জেরুশালেমের পাহাড়ের দিকে তার মুষ্টি আন্দোলিত করছে।
33 ೩೩ ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.
দেখো, প্রভু, সর্বশক্তিমান সদাপ্রভু, মহাপরাক্রমে বৃক্ষশাখাগুলি কেটে ফেলবেন। উঁচু সব গাছ পতিত হবে, লম্বা গাছগুলিকে মাটিতে ফেলা হবে।
34 ೩೪ ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.
বনের ঘন জঙ্গলকে তিনি কুড়াল দিয়ে কেটে ফেলবেন সেই পরাক্রমী জনের সামনে লেবানন পতিত হবে।