< ಯೆಶಾಯನು 10 >

1 ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.
הֹ֥וי הַחֹֽקְקִ֖ים חִקְקֵי־אָ֑וֶן וּֽמְכַתְּבִ֥ים עָמָ֖ל כִּתֵּֽבוּ׃
2 ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.
לְהַטֹּ֤ות מִדִּין֙ דַּלִּ֔ים וְלִגְזֹ֕ל מִשְׁפַּ֖ט עֲנִיֵּ֣י עַמִּ֑י לִהְיֹ֤ות אַלְמָנֹות֙ שְׁלָלָ֔ם וְאֶת־יְתֹומִ֖ים יָבֹֽזּוּ׃
3 ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?
וּמַֽה־תַּעֲשׂוּ֙ לְיֹ֣ום פְּקֻדָּ֔ה וּלְשֹׁואָ֖ה מִמֶּרְחָ֣ק תָּבֹ֑וא עַל־מִי֙ תָּנ֣וּסוּ לְעֶזְרָ֔ה וְאָ֥נָה תַעַזְב֖וּ כְּבֹודְכֶֽם׃
4 ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
בִּלְתִּ֤י כָרַע֙ תַּ֣חַת אַסִּ֔יר וְתַ֥חַת הֲרוּגִ֖ים יִפֹּ֑לוּ בְּכָל־זֹאת֙ לֹא־שָׁ֣ב אַפֹּ֔ו וְעֹ֖וד יָדֹ֥ו נְטוּיָֽה׃ ס
5 ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
הֹ֥וי אַשּׁ֖וּר שֵׁ֣בֶט אַפִּ֑י וּמַטֶּה־ה֥וּא בְיָדָ֖ם זַעְמִֽי׃
6 ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
בְּגֹ֤וי חָנֵף֙ אֲשַׁלְּחֶ֔נּוּ וְעַל־עַ֥ם עֶבְרָתִ֖י אֲצַוֶּ֑נּוּ לִשְׁלֹ֤ל שָׁלָל֙ וְלָבֹ֣ז בַּ֔ז וּלְשִׂימֹו (וּלְשׂוּמֹ֥ו) מִרְמָ֖ס כְּחֹ֥מֶר חוּצֹֽות׃
7 ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.
וְהוּא֙ לֹא־כֵ֣ן יְדַמֶּ֔ה וּלְבָבֹ֖ו לֹא־כֵ֣ן יַחְשֹׁ֑ב כִּ֚י לְהַשְׁמִ֣יד בִּלְבָבֹ֔ו וּלְהַכְרִ֥ית גֹּויִ֖ם לֹ֥א מְעָֽט׃
8 ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?
כִּ֖י יֹאמַ֑ר הֲלֹ֥א שָׂרַ֛י יַחְדָּ֖ו מְלָכִֽים׃
9 ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?
הֲלֹ֥א כְּכַרְכְּמִ֖ישׁ כַּלְנֹ֑ו אִם־לֹ֤א כְאַרְפַּד֙ חֲמָ֔ת אִם־לֹ֥א כְדַמֶּ֖שֶׂק שֹׁמְרֹֽון׃
10 ೧೦ ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,
כַּאֲשֶׁר֙ מָצְאָ֣ה יָדִ֔י לְמַמְלְכֹ֖ת הָאֱלִ֑יל וּפְסִ֣ילֵיהֶ֔ם מִירֽוּשָׁלַ֖͏ִם וּמִשֹּׁמְרֹֽון׃
11 ೧೧ ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ, ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕೆಡವಲಾರೆನೋ?” ಎಂಬುದೇ.
הֲלֹ֗א כַּאֲשֶׁ֥ר עָשִׂ֛יתִי לְשֹׁמְרֹ֖ון וְלֶאֱלִילֶ֑יהָ כֵּ֛ן אֶעֱשֶׂ֥ה לִירוּשָׁלַ֖͏ִם וְלַעֲצַבֶּֽיהָ׃ ס
12 ೧೨ ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”
וְהָיָ֗ה כִּֽי־יְבַצַּ֤ע אֲדֹנָי֙ אֶת־כָּל־מֽ͏ַעֲשֵׂ֔הוּ בְּהַ֥ר צִיֹּ֖ון וּבִירוּשָׁלָ֑͏ִם אֶפְקֹ֗ד עַל־פְּרִי־גֹ֙דֶל֙ לְבַ֣ב מֶֽלֶךְ־אַשּׁ֔וּר וְעַל־תִּפְאֶ֖רֶת ר֥וּם עֵינָֽיו׃
13 ೧೩ ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
כִּ֣י אָמַ֗ר בְּכֹ֤חַ יָדִי֙ עָשִׂ֔יתִי וּבְחָכְמָתִ֖י כִּ֣י נְבֻנֹ֑ותִי וְאָסִ֣יר ׀ גְּבוּלֹ֣ת עַמִּ֗ים וַעֲתִידֹתֵיהֶם (וַעֲתוּדֹֽותֵיהֶם֙) שֹׁושֵׂ֔תִי וְאֹורִ֥יד כַּאבִּ֖יר יֹושְׁבִֽים׃
14 ೧೪ ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ” ಎಂದು ಅಂದುಕೊಂಡನು.
וַתִּמְצָ֨א כַקֵּ֤ן ׀ יָדִי֙ לְחֵ֣יל הָֽעַמִּ֔ים וְכֶאֱסֹף֙ בֵּיצִ֣ים עֲזֻבֹ֔ות כָּל־הָאָ֖רֶץ אֲנִ֣י אָסָ֑פְתִּי וְלֹ֤א הָיָה֙ נֹדֵ֣ד כָּנָ֔ף וּפֹצֶ֥ה פֶ֖ה וּמְצַפְצֵֽף׃
15 ೧೫ ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.
הֲיִתְפָּאֵר֙ הַגַּרְזֶ֔ן עַ֖ל הַחֹצֵ֣ב בֹּ֑ו אִם־יִתְגַּדֵּ֤ל הַמַּשֹּׂור֙ עַל־מְנִיפֹ֔ו כְּהָנִ֥יף שֵׁ֙בֶט֙ וְאֶת־מְרִימָ֔יו כְּהָרִ֥ים מַטֶּ֖ה לֹא־עֵֽץ׃
16 ೧೬ ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.
לָ֠כֵן יְשַׁלַּ֨ח הָאָדֹ֜ון יְהוָ֧ה צְבָאֹ֛ות בְּמִשְׁמַנָּ֖יו רָזֹ֑ון וְתַ֧חַת כְּבֹדֹ֛ו יֵקַ֥ד יְקֹ֖ד כִּיקֹ֥וד אֵֽשׁ׃
17 ೧೭ ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.
וְהָיָ֤ה אֹֽור־יִשְׂרָאֵל֙ לְאֵ֔שׁ וּקְדֹושֹׁ֖ו לְלֶהָבָ֑ה וּבָעֲרָ֗ה וְאָֽכְלָ֛ה שִׁיתֹ֥ו וּשְׁמִירֹ֖ו בְּיֹ֥ום אֶחָֽד׃
18 ೧೮ ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.
וּכְבֹ֤וד יַעְרֹו֙ וְכַרְמִלֹּ֔ו מִנֶּ֥פֶשׁ וְעַד־בָּשָׂ֖ר יְכַלֶּ֑ה וְהָיָ֖ה כִּמְסֹ֥ס נֹסֵֽס׃
19 ೧೯ ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು.
וּשְׁאָ֥ר עֵ֛ץ יַעְרֹ֖ו מִסְפָּ֣ר יִֽהְי֑וּ וְנַ֖עַר יִכְתְּבֵֽם׃ פ
20 ೨೦ ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.
וְהָיָ֣ה ׀ בַּיֹּ֣ום הַה֗וּא לֹֽא־יֹוסִ֨יף עֹ֜וד שְׁאָ֤ר יִשְׂרָאֵל֙ וּפְלֵיטַ֣ת בֵּֽית־יַעֲקֹ֔ב לְהִשָּׁעֵ֖ן עַל־מַכֵּ֑הוּ וְנִשְׁעַ֗ן עַל־יְהוָ֛ה קְדֹ֥ושׁ יִשְׂרָאֵ֖ל בֶּאֱמֶֽת׃
21 ೨೧ ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.
שְׁאָ֥ר יָשׁ֖וּב שְׁאָ֣ר יַעֲקֹ֑ב אֶל־אֵ֖ל גִּבֹּֽור׃
22 ೨೨ ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.
כִּ֣י אִם־יִהְיֶ֞ה עַמְּךָ֤ יִשְׂרָאֵל֙ כְּחֹ֣ול הַיָּ֔ם שְׁאָ֖ר יָשׁ֣וּב בֹּ֑ו כִּלָּיֹ֥ון חָר֖וּץ שֹׁוטֵ֥ף צְדָקָֽה׃
23 ೨೩ ಏಕೆಂದರೆ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶನವನ್ನು ಉಂಟುಮಾಡುವನು.
כִּ֥י כָלָ֖ה וְנֶחֱרָצָ֑ה אֲדֹנָ֤י יְהוִה֙ צְבָאֹ֔ות עֹשֶׂ֖ה בְּקֶ֥רֶב כָּל־הָאָֽרֶץ׃ ס
24 ೨೪ ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
לָכֵ֗ן כֹּֽה־אָמַ֞ר אֲדֹנָ֤י יְהוִה֙ צְבָאֹ֔ות אַל־תִּירָ֥א עַמִּ֛י יֹשֵׁ֥ב צִיֹּ֖ון מֵֽאַשּׁ֑וּר בַּשֵּׁ֣בֶט יַכֶּ֔כָּה וּמַטֵּ֥הוּ יִשָּֽׂא־עָלֶ֖יךָ בְּדֶ֥רֶךְ מִצְרָֽיִם׃
25 ೨೫ ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”
כִּי־עֹ֖וד מְעַ֣ט מִזְעָ֑ר וְכָ֣לָה זַ֔עַם וְאַפִּ֖י עַל־תַּבְלִיתָֽם׃
26 ೨೬ ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.
וְעֹורֵ֨ר עָלָ֜יו יְהוָ֤ה צְבָאֹות֙ שֹׁ֔וט כְּמַכַּ֥ת מִדְיָ֖ן בְּצ֣וּר עֹורֵ֑ב וּמַטֵּ֙הוּ֙ עַל־הַיָּ֔ם וּנְשָׂאֹ֖ו בְּדֶ֥רֶךְ מִצְרָֽיִם׃
27 ೨೭ ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.
וְהָיָ֣ה ׀ בַּיֹּ֣ום הַה֗וּא יָס֤וּר סֻבֳּלֹו֙ מֵעַ֣ל שִׁכְמֶ֔ךָ וְעֻלֹּ֖ו מֵעַ֣ל צַוָּארֶ֑ךָ וְחֻבַּ֥ל עֹ֖ל מִפְּנֵי־שָֽׁמֶן׃
28 ೨೮ ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.
בָּ֥א עַל־עַיַּ֖ת עָבַ֣ר בְּמִגְרֹ֑ון לְמִכְמָ֖שׂ יַפְקִ֥יד כֵּלָֽיו׃
29 ೨೯ ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ. ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.
עָֽבְרוּ֙ מַעְבָּרָ֔ה גֶּ֖בַע מָלֹ֣ון לָ֑נוּ חָֽרְדָה֙ הָֽרָמָ֔ה גִּבְעַ֥ת שָׁא֖וּל נָֽסָה׃
30 ೩೦ ಗಲ್ಲೀಮ್ ಗ್ರಾಮವೇ, ಕೂಗಿ ಅರಚಿಕೋ! ಲಯೆಷವೇ, ಕಿವಿಗೊಡು! ಅನಾತೋತೇ, ಪ್ರತಿಧ್ವನಿ ಕೊಡು!
צַהֲלִ֥י קֹולֵ֖ךְ בַּת־גַּלִּ֑ים הַקְשִׁ֥יבִי לַ֖יְשָׁה עֲנִיָּ֥ה עֲנָתֹֽות׃
31 ೩೧ ಮದ್ಮೇನ ದಿಕ್ಕಾಪಾಲಾಯಿತು. ಗೇಬೀಮಿನ ನಿವಾಸಿಗಳು ವಲಸೆ ಹೋದರು.
נָדְדָ֖ה מַדְמֵנָ֑ה יֹשְׁבֵ֥י הַגֵּבִ֖ים הֵעִֽיזוּ׃
32 ೩೨ ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.
עֹ֥וד הַיֹּ֖ום בְּנֹ֣ב לַֽעֲמֹ֑ד יְנֹפֵ֤ף יָדֹו֙ הַ֣ר בֵּית־ (בַּת)־צִיֹּ֔ון גִּבְעַ֖ת יְרוּשָׁלָֽ͏ִם׃ ס
33 ೩೩ ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.
הִנֵּ֤ה הָאָדֹון֙ יְהוָ֣ה צְבָאֹ֔ות מְסָעֵ֥ף פֻּארָ֖ה בְּמַעֲרָצָ֑ה וְרָמֵ֤י הַקֹּומָה֙ גְּדוּעִ֔ים וְהַגְּבֹהִ֖ים יִשְׁפָּֽלוּ׃
34 ೩೪ ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.
וְנִקַּ֛ף סִֽבְכֵ֥י הַיַּ֖עַר בַּבַּרְזֶ֑ל וְהַלְּבָנֹ֖ון בְּאַדִּ֥יר יִפֹּֽול׃ ס

< ಯೆಶಾಯನು 10 >