< ಯೆಶಾಯನು 11 >
1 ೧ ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.
Takin sou fulat lal David oana sak soko ma pakpuki nu infohk uh; na, oana ke lah sasu ac srunak ke sruen sak uh, ouinge sie tokosra sasu fah tuyak liki inmasrlon fwilin tulik natul David.
2 ೨ ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.
Ngunin LEUM GOD ac fah oan facl — Ngunin lalmwetmet ac etauk in leumi mwet lal. El ac fah etu ma lungse lun LEUM GOD ac arulana akfulatyal,
3 ೩ ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ.
Ac El ac fah insewowo in aksol. Nununku lal fah tia wiwimwet ku wiwikas;
4 ೪ ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.
El ac fah oru nununku suwohs nu sin mwet sukasrup Ac loango suwohs lun mwet ma kofla sifacna. Ke sap lal, mwet uh fah kalyeiyuk, Ac mwet koluk fah misa.
5 ೫ ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.
El fah leumi mwet lal ke pwaye ac suwoswoslana.
6 ೬ ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು. ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು.
Kosro wolf ac sheep fusr fah tukeni muta in misla, Ac leopard sulallal fah wi na nani fusr uh oan. Cow fusr ac lion fusr fah tukeni mongo Ac tulik srisrik fah ku in karingnalos.
7 ೭ ಹಸುವು ಕರಡಿಯ ಸಂಗಡ ಮೇಯುವುದು; ಅವುಗಳ ಮರಿಗಳು ಜೊತೆಯಾಗಿ ಮಲಗುವವು. ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು.
Cow ac bear fah tukeni mongo, Ac cow fusr ac bear fusr natulos fah tukenina oan. Lion ac fah mongo mah, oana cow.
8 ೮ ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು; ಮೊಲೆಬಿಟ್ಟ ಮಗುವು ಹಾವಿನ ಬಿಲದ ಒಳಗೆ ಕೈಹಾಕುವುದು.
Finne tulik fusr se, ac fah tia sensen In srital apkuran nu yurin wet pwasin.
9 ೯ ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.
Fin acn Zion, inging mutal lun God, Ac fah wangin mwe sensen ku ma koluk. Acn we ac fah sessesla ke mwet su arulana etu ke LEUM GOD Oana ke meoa uh nwanala ke kof.
10 ೧೦ ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
Len se ac fah tuku ke tokosra sasu, su sie sin fwilin tulik natul David, ac fah sie mwe akul nu sin mutunfacl puspis. Elos ac toeni in siti fulat sel ac akfulatyal.
11 ೧೧ ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
In len sac, Leum El ac sifilpa orekmakin ku lal in folokonma mwet lal su lula in acn Assyria ac Egypt, in acn Pathros, Ethiopia, Elam, Babylonia, Hamath, ac liki acn ma oan sisken meoa.
12 ೧೨ ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.
Leum El ac fah kolak sie flag tuh in sie mwe akul nu sin mutunfacl uh lah El sifilpa eisani mwet lisyukla lun Israel ac Judah, ac folokunulosme liki eng akosr lun faclu.
13 ೧೩ ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.
Tokosrai lun Israel fah tia sifil kwase Judah, ac Judah fah tia sifilpa mwet lokoalok lun Israel.
14 ೧೪ ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.
Elos ac tukeni mweuni acn Philistia layen nu roto, ac wapi mwet su muta layen nu kutulap. Elos ac kutangla mwet Edom ac mwet Moab, ac mwet Ammon fah aksolos.
15 ೧೫ ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.
LEUM GOD El ac akmihnyela inalok ke Meoa Srusra, ac El ac use sie eng fol in akpaoyela Infacl Euphrates, ac filiya infacl srisrik itkosr na tuh mwet uh fah ku in tupalla.
16 ೧೬ ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ, ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು.
Ac fah oasr soko inkanek lulap tuku liki acn Assyria nu sin mwet lal mwet Israel, su srakna moul oasr we, oana ke tuh orek nu sin mwet matu lalos ke elos tuku liki facl Egypt.