< ಯೆಶಾಯನು 12 >
1 ೧ ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.
Le ɣe ma ɣi la, àgblɔ be, “Makafu wò, O! Yehowa, togbɔ be èdo dɔmedzoe ɖe ŋunye tsã hã la, wò dɔmedzoe nu yi, eye nèfa akɔ nam.
2 ೨ ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”
Nyateƒe, Mawu nye nye xɔname. Maɖo dzi ɖe eŋu, eye nyemavɔ̃ o. Ɛ̃, Yehowae nye nye ŋusẽ kple nye hadzidzi, eye eyae zu nye xɔname
3 ೩ ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.
Miadu tsi le xɔname ƒe vudowo me kple dzidzɔ.”
4 ೪ ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.
Le ŋkeke ma dzi la, àgblɔ be, “Mida akpe na Yehowa! Miyɔ eƒe ŋkɔ, miɖe gbeƒã eƒe ŋkɔ le xexemedukɔwo dome.
5 ೫ ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.
Miɖe gbeƒã Yehowa, elabena ewɔ nu dzɔatsuwo, miɖe gbeƒã eƒe kafukafu le xexea me katã.
6 ೬ ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
Mido ɣli, eye mitso aseye, mi ame siwo le Zion, elabena gãe nye Israel ƒe Kɔkɔetɔ si le mia dome.”