< ಯೆಶಾಯನು 12 >

1 ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.
וְאָֽמַרְתָּ֙ בַּיּ֣וֹם הַה֔וּא אוֹדְךָ֣ יְהוָ֔ה כִּ֥י אָנַ֖פְתָּ בִּ֑י יָשֹׁ֥ב אַפְּךָ֖ וּֽתְנַחֲמֵֽנִי׃
2 ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”
הִנֵּ֨ה אֵ֧ל יְשׁוּעָתִ֛י אֶבְטַ֖ח וְלֹ֣א אֶפְחָ֑ד כִּֽי־עָזִּ֤י וְזִמְרָת֙ יָ֣הּ יְהוָ֔ה וַֽיְהִי־לִ֖י לִֽישׁוּעָֽה׃
3 ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.
וּשְׁאַבְתֶּם־מַ֖יִם בְּשָׂשׂ֑וֹן מִמַּעַיְנֵ֖י הַיְשׁוּעָֽה׃
4 ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.
וַאֲמַרְתֶּ֞ם בַּיּ֣וֹם הַה֗וּא הוֹד֤וּ לַֽיהוָה֙ קִרְא֣וּ בִשְׁמ֔וֹ הוֹדִ֥יעוּ בָֽעַמִּ֖ים עֲלִֽילֹתָ֑יו הַזְכִּ֕ירוּ כִּ֥י נִשְׂגָּ֖ב שְׁמֽוֹ׃
5 ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.
זַמְּר֣וּ יְהוָ֔ה כִּ֥י גֵא֖וּת עָשָׂ֑ה מידעת זֹ֖את בְּכָל־הָאָֽרֶץ׃
6 ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
צַהֲלִ֥י וָרֹ֖נִּי יוֹשֶׁ֣בֶת צִיּ֑וֹן כִּֽי־גָד֥וֹל בְּקִרְבֵּ֖ךְ קְד֥וֹשׁ יִשְׂרָאֵֽל׃ פ

< ಯೆಶಾಯನು 12 >