< ಯೆಶಾಯನು 13 >
1 ೧ ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.
Revelação sobre a Babilônia, vista por Isaías, filho de Amoz.
2 ೨ ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ.
Levantai uma bandeira sobre um alto monte, levantai a voz a eles; movei a mão ao alto, para que entrem pelas portas dos príncipes.
3 ೩ ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ.
Eu dei ordens aos meus santificados; também chamei aos meus guerreiros para minha ira, aos que se alegram com minha glória.
4 ೪ ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ.
Há um ruído de tumulto sobre os montes, como o de um imenso povo; ruído de multidões de reinos de nações reunidas; o SENHOR dos exércitos está revistando um exército para a guerra.
5 ೫ ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ.
Eles vêm de uma terra distante, desde a extremidade do céu; o SENHOR e os instrumentos de seu furor, para destruir toda [aquela] terra.
6 ೬ ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.
Gritai lamentando, pois o dia do SENHOR está perto; vem como assolação pelo Todo-Poderoso.
7 ೭ ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು.
Por isso todas as mãos ficarão fracas, e o coração de todos os homens se derreterá.
8 ೮ ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು.
E ficarão aterrorizados; serão tomados por dores e angústias; sofrerão como mulher com dores de parto; cada um terá medo de seu próximo, seus rostos serão rostos em chamas.
9 ೯ ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.
Eis que o dia do SENHOR vem horrendo, com furor e ira ardente, para pôr a terra em assolação, e destruir os pecadores nela.
10 ೧೦ ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.
Porque as estrelas dos céus e suas constelações não darão sua luz; o sol se escurecerá ao nascer, e a lua não brilhará com sua luz.
11 ೧೧ ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
Porque visitarei para punir sobre o mundo a maldade, e sobre os maus sua perversidade; e porei fim à arrogância dos soberbos, e abaterei o orgulho dos tiranos.
12 ೧೨ ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತು ಓಫೀರಿನ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು.
Farei com que um varão seja mais raro que o ouro maciço, e um homem mais que o ouro fino de Ofir.
13 ೧೩ ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.
Por isso farei estremecer aos céus, e a terra se moverá de seu lugar, por causa do furor do SENHOR dos exércitos, e por causa de sua ardente ira.
14 ೧೪ ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
E será que, como uma corça em fuga, e como uma ovelha que ninguém recolhe, cada um se voltará para seu povo, e cada um fugirá para sua terra.
15 ೧೫ ಸಿಕ್ಕಿದವರೆಲ್ಲರು ಇರಿಯಲ್ಪಡುವರು. ಹಿಂಬಾಲಿಸಿ ಹಿಡಿಯಲ್ಪಟ್ಟ ಸಕಲ ಜನರು ಕತ್ತಿಗೆ ತುತ್ತಾಗುವರು.
Qualquer um que for achado, será traspassado; e qualquer um que se juntar a ele cairá pela espada.
16 ೧೬ ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು. ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು.
E suas crianças serão despedaçadas perante seus olhos; suas casas serão saqueadas, e suas mulheres estupradas.
17 ೧೭ ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು.
Eis que despertarei contra eles aos medos, que não se importarão com a prata, nem desejarão ouro.
18 ೧೮ ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು. ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ.
E [com seus] arcos despedaçarão aos rapazes, e não terão piedade do fruto do ventre; o olho deles não terá compaixão das crianças.
19 ೧೯ ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.
Assim será Babilônia, a joia dos reinos, a beleza e o orgulho dos caldeus, semelhante a Sodoma e Gomorra, quando Deus [as] arruinou.
20 ೨೦ ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.
Nunca mais será habitada, nem [nela] se morará, de geração em geração; nem o árabe armará ali sua tenda, nem os pastores farão descansar ali [seus] rebanhos.
21 ೨೧ ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು. ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಟಗರುಗಳು ಅಲ್ಲಿ ಕುಣಿದಾಡುವವು.
Mas os animais selvagens do deserto ali descansarão, e suas casas se encherão de animais medonhos; e ali habitarão corujas, e bodes selvagens saltarão ali.
22 ೨೨ ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.
E as hienas uivarão em suas fortalezas, e chacais em seus confortáveis palácios. Pois está chegando bem perto o seu tempo, e os dias dela não se prolongarão.