< ಯೆಶಾಯನು 14 >

1 ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
क्यूँकि ख़ुदावन्द या'क़ूब पर रहम फ़रमाएगा, बल्कि वह इस्राईल को भी बरगुज़ीदा करेगा और उनको उनके मुल्क में फिर क़ाईम करेगा और परदेसी उनके साथ मेल करेंगे और या'क़ूब के घराने से मिल जाएँगे।
2 ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.
और लोग उनको लाकर उनके मुल्क में पहुंचाएगे और इस्राईल का घराना ख़ुदावन्द की सरज़मीन में उनका मालिक होकर उनको गु़लाम और लौंडियाँ बनाएगा क्यूँकि वह अपने ग़ुलाम करने वालों को ग़ुलाम करेंगे, और अपने ज़ुल्म करने वालों पर हुकूमत करेंगे।
3 ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ,
और यूँ होगा कि जब ख़ुदावन्द तुझे तेरी मेहनत — ओ — मशक़्क़त से, और सख़्त ख़िदमत से जो उन्होंने तुझ से कराई, राहत बख़्शेगा,
4 ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!
तब तू शाह — ए — बाबुल के ख़िलाफ़ यह मसल लाएगा और कहेगा, कि 'ज़ालिम कैसा हलाक हो गया, और ग़ासिब कैसा हलाक हुआ।
5 ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.
ख़ुदावन्द ने शरीरों का लठ, या'नी बेइन्साफ़ हाकिमों का 'असा तोड़ डाला;
6 ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.
वही जो लोगों को क़हर से मारता रहा और क़ौमों पर ग़ज़ब के साथ हुक्मरानी करता रहा, और कोई रोक न सका।
7 ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಅವರು ಹರ್ಷಧ್ವನಿಗೈಯುತ್ತಾರೆ.
सारी ज़मीन पर आराम — ओ — आसाइश है, वह अचानक गीत गाने लगते हैं।
8 ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
हाँ, सनोबर के दरख़्त और लुबनान के देवदार तुझ पर यह कहते हुए ख़ुशी करते हैं, कि 'जब से तू गिराया गया, तब से कोई काटनेवाला हमारी तरफ़ नहीं आया।
9 ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ. ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ, ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ. (Sheol h7585)
पाताल नीचे से तेरी वजह से जुम्बिश खाता है कि तेरे आते वक़्त तेरा इस्तक़बाल करे; वह तेरे लिए मुर्दों को या'नी ज़मीन के सब सरदारों को जगाता है; वह क़ौमों के सब बादशाहों को उनके तख़्तों पर से उठा खड़ा करता है। (Sheol h7585)
10 ೧೦ ಅವರೆಲ್ಲರು ನಿನ್ನನ್ನು ಕುರಿತು, ‘ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?’ ಎಂದು ಮಾತನಾಡಿಕೊಳ್ಳುವರು.
वह सब तुझ से कहेंगे, क्या तू भी हमारी तरह 'आजिज़ हो गया; तू ऐसा हो गया जैसे हम हैं?'
11 ೧೧ ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು. (Sheol h7585)
तेरी शान — ओ — शौकत और तेरे साज़ों की ख़ुश आवाज़ी पाताल में उतारी गई; तेरे नीचे कीड़ों का फ़र्श हुआ, और कीड़े ही तेरा बालापोश बने। (Sheol h7585)
12 ೧೨ ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!
ऐ सुबह के सितारे, तू क्यूँकर आसमान से गिर पड़ा। ऐ क़ौमों को पस्त करनेवाले, तू क्यूँकर ज़मीन पर पटका गया!
13 ೧೩ ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.
तू तो अपने दिल में कहता था, मैं आसमान पर चढ़ जाऊँगा; मैं अपने तख़्त को ख़ुदा के सितारों से भी ऊँचा करूँगा, और मैं उत्तरी अतराफ़ में जमा'अत के पहाड़ पर बैठूँगा;
14 ೧೪ ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ!
मैं बादलों से भी ऊपर चढ़ जाऊँगा, मैं ख़ुदा त'आला की तरह हूँगा।
15 ೧೫ ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ. (Sheol h7585)
लेकिन तू पाताल में गढ़े की तह में उतारा जाएगा। (Sheol h7585)
16 ೧೬ ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ,
और जिनकी नज़र तुझ पर पड़ेगी, तुझे ग़ौर से देखकर कहेंगे, 'क्या यह वही शख़्स है जिसने ज़मीन को लरज़ाया और ममलुकतों को हिला दिया;
17 ೧೭ ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.
जिसने जहान को वीरान किया और उसकी बस्तियाँ उजाड़ दीं, जिसने अपने ग़ुलामों को आज़ाद न किया कि घर की तरफ़ जाएँ?
18 ೧೮ ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ.
क़ौमों के तमाम बादशाह सब के सब अपने अपने घर में शौकत के साथ आराम करते हैं,
19 ೧೯ ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,
लेकिन तू अपनी क़ब्र से बाहर, निकम्मी शाख़ की तरह निकाल फेंका गया; तू उन मक़तूलों के नीचे दबा है जो तलवार से छेदे गए और गढ़े के पत्थरों पर गिरे हैं, उस लाश की तरह जो पाँवों से लताड़ी गई हो।
20 ೨೦ ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.”
तू उनके साथ कभी क़ब्र में दफ़न न किया जाएगा, क्यूँकि तूने अपनी ममलुकत को वीरान किया और अपनी र'अय्यत को क़त्ल किया, “बदकिरदारों की नस्ल का नाम बाक़ी न रहेगा।
21 ೨೧ ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ, ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ.
उसके फ़र्ज़न्दों के लिए उनके बाप दादा के गुनाहों की वजह से क़त्ल का सामान तैयार करो, ताकि वह फिर उठ कर मुल्क के मालिक न हो जाएँ और इस ज़मीन को शहरों से मा'मूर न करें।”
22 ೨೨ “ನಾನು ಅವರ ವಿರುದ್ಧವಾಗಿ ಏಳುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
क्यूँकि रब्ब — उल — अफ़्वाज फ़रमाता है, मैं उनकी मुख़ालिफ़त को उठूँगा, और मैं बाबुल का नाम मिटाऊँगा और उनको जो बाक़ी हैं, बेटों और पोतों के साथ काट डालूँगा; यह ख़ुदावन्द का फ़रमान है।
23 ೨೩ “ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
रब्ब — उल — अफ़्वाज फरमाता है “मैं उसे ख़ार पुश्त की मीरास और तालाब बना दूँगा और उसे फ़ना के झाड़ू से साफ़ कर दूँगा।”
24 ೨೪ ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.
रब्ब — उल — अफ़्वाज क़सम खाकर फ़रमाता है, कि यक़ीनन जैसा मैंने चाहा वैसा ही हो जाएगा; और जैसा मैंने इरादा किया है, वही वजूद में आयेगा।
25 ೨೫ ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.
मैं अपने ही मुल्क में असूरी को शिकस्त दूँगा, और अपने पहाड़ों पर उसे पाँव तले लताड़ूँगा; तब उसका जूआ उन पर से उतरेगा, और उसका बोझ उनके कंधों पर से टलेगा।
26 ೨೬ ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
सारी दुनिया के ज़रिए' यही है, और सब क़ौमों पर यही हाथ बढ़ाया गया है।
27 ೨೭ ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ.
क्यूँकि रब्ब — उल — अफ़्वाज ने इरादा किया है, कौन उसे बातिल करेगा? और उसका हाथ बढ़ाया गया है, उसे कौन रोकेगा?
28 ೨೮ ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು:
जिस साल आख़ज़ बादशाह ने वफ़ात पाई उसी साल यह बार — ए — नबुव्वत आया:
29 ೨೯ ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.
“ऐ कुल फ़िलिस्तीन, तू इस पर ख़ुश न हो कि तुझे मारने वाला लठ टूट गया; क्यूँकि साँप की अस्ल से एक नाग निकलेगा, और उसका फल एक उड़नेवाला आग का साँप होगा।
30 ೩೦ ಬಡವರಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು.
तब ग़रीबों के पहलौठे खाएँगे, और मोहताज आराम से सोएँगे; लेकिन मैं तेरी जड़ काल से बर्बाद कर दूँगा, और तेरे बाक़ी लोग क़त्ल किए जाएँगे।
31 ೩೧ ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.
ऐ फाटक, तू वावैला कर; ऐ शहर, तू चिल्ला; ऐ फ़िलिस्तीन, तू बिल्कुल गुदाज़ हो गई! क्यूँकि उत्तर से एक धुंवा उठेगा और उसके लश्करों में से कोई पीछे न रह जाएगा।”
32 ೩೨ ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.
उस वक़्त क़ौम के क़ासिदों को कोई क्या जवाब देगा? कि 'ख़ुदावन्द ने सिय्यून को ता'मीर किया है, और उसमें उसके ग़रीब बन्दे पनाह लेंगे।

< ಯೆಶಾಯನು 14 >