< ಯೆಶಾಯನು 15 >
1 ೧ ಮೋವಾಬಿನ ಬಗ್ಗೆ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತು; ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.
Raajii waaʼee Moʼaab: Aari isheen Moʼaab keessaa diigamteerti; halkanuma tokkottis baddeerti! Qiir isheen Moʼaab keessaa diigamteerti; halkanuma tokkottis baddeerti!
2 ೨ ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.
Diiboon gara mana qulqullummaatti, iddoowwan ol kaʼaatti booʼuuf ol baʼa; Moʼaabis Neboo fi Meedebaaf ni booʼa. Mataan hundinuu haadamaa dha; areedni hundinuus cicciramaa dha.
3 ೩ ಬೀದಿಗಳಲ್ಲಿ ತಿರುಗುವವರು ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ ಮತ್ತು ತಮ್ಮ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ಎಲ್ಲರು ಅರಚುತ್ತಾ ಕಣ್ಣೀರನ್ನು ಸುರಿಸಿ ಸುರಿಸಿ ಗೋಳಾಡುತ್ತಾ ಇಳಿದು ಹೋಗಿದ್ದಾರೆ.
Isaan daandii irratti wayyaa gaddaa uffatu; bantii manaatii fi waltajjii sabaa irratti hundi isaanii ni booʼu; imimmaan isaaniis ni dhangalaasu.
4 ೪ ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ. ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ.
Heshboonii fi Eleʼaaleen ni iyyu; sagaleen isaaniis hamma Yaahaziitti fagaatee dhagaʼame. Kanaafuu loltoonni Moʼaab ni iyyu; lubbuun isaaniis ni romʼite.
5 ೫ ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.
Garaan koo Moʼaabiif iyya; kooluu galtoonni ishee hamma Zoʼaariitti, hamma Eglaati Sheelishiyaatti baqatu. Isaan booʼaa, gara Luuhiititti ol baʼu; karaa Hooronaayim irrattis, waaʼee badii isaanii faarsanii booʼu.
6 ೬ ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸಿರೂ ಇಲ್ಲ.
Bishaanonni Niimriim goganiiru; margis coollageera; biqiltuuwwan lafaa badaniiru; wanni magariisni tokko iyyuu hin hafne.
7 ೭ ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ, ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.
Kanaafuu isaan qabeenya argatanii kuufatan sana Laga Alaltuu irraan baatanii dabarfatu.
8 ೮ ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿಮಿನವರೆಗೂ, ಬೆಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ.
Iyyi isaanii hamma daarii Moʼaabitti dhagaʼame; wawwaachuun isaanii hamma Eglayiimitti faaruun booʼicha isaaniis hamma Beʼeer Eeliimiinitti dhagaʼame.
9 ೯ ದೀಮೋನಿನ ನೀರೆಲ್ಲಾ ರಕ್ತವಾಯಿತು. ಆದರೆ ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ, ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
Bishaanonni Diimon dhiigaan guutamaniiru; ani immoo waan kana caalu iyyuu Diimonitti nan fida; warra Moʼaab keessaa baqatan kanneen biyya sanatti hafanitti leenca nan erga.