< ಯೆಶಾಯನು 16 >
1 ೧ ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಗಳನ್ನು ಅರಣ್ಯದ ಕಡೆಯಿರುವ ಸೆಲದಿಂದ ಚೀಯೋನ್ ನಗರದ ಪರ್ವತಕ್ಕೆ ಕಳುಹಿಸಿರಿ.
Khohmuen aka hung tuca te Sela khosoek lamloh Zion nu kah tlang duela thak uh laeh.
2 ೨ ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ, ಗೂಡಿನಿಂದ ಚದುರಿರುವ ಮರಿಗಳಂತೆಯೂ ಆಗುವರು.
Anih tah a bu a hno tih aka poeng vaa bangla om tih Arnon lamkai kah Moab nu rhoek khaw te tlam te om uh.
3 ೩ ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ. ನಿಮ್ಮಲ್ಲಿರುವ ದೀನದಲಿತರನ್ನು ಸಂರಕ್ಷಿಸು, ತಪ್ಪಿಸಿಕೊಂಡು ಹೋಗುವ ಜನರ ವಿಷಯವನ್ನು ಬಯಲುಮಾಡಬೇಡಿ.
cilsuep khaw pae rhoela pae uh. Oltloeknah saii uh. Khothun lung kah na mueihlip te khoyin bangla khueh laeh. A yong vaengah a heh rhoek te thuh lamtah phoe boeh.
4 ೪ ನಿಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ. ಹಿಂಸಿಸುವವರು ನಿಮ್ಮ ದೇಶದಿಂದ ನಿರ್ಮುಲವಾಗುವರು, ನಾಶನವು ನಿಂತುಹೋಗುವುದು. ಪೀಡಿಸುವವರು ನಿಮ್ಮ ದೇಶದಿಂದ ನಿರ್ಮೂಲರಾಗುವರು.
Ka heh Moab te namah taengah bakuep saeh. Aka rhoelrhak kah mikhmuh lamloh amih hlipyingnah om saeh. Hlangphaep khaw khawk van ni. rhoelrhanah khaw khum bitni. Hlang aka taelh khaw diklai lamloh cing ni.
5 ೫ ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು.
Ngolkhoel te sitlohnah neh a cikngae sak vetih, a soah uepomnah neh ngol ni. David kah dap ah lai a tloek tih, tiktamnah a toem vaengah duengnah khaw a ming.
6 ೬ ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ. ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.
Moab kah hoemdamnah tah a poikuk la, a hoemnah te muep n'yaak uh coeng. A hoemdamnah neh a thinpom dongah anih te olsai tangkhuet boel saeh.
7 ೭ ಆದಕಾರಣ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವುದು. ಪ್ರತಿಯೊಬ್ಬನೂ ಪ್ರಲಾಪಿಸುವನು. ನೀವು ಕೀರ್ ಹರೆಷೆಥಿನ ಜನರ ದೀಪದ್ರಾಕ್ಷೆಯ ಕಡುಬು ಹಾಳಾಯಿತಲ್ಲಾ ಎಂದು ನರಳುವಿರಿ.
Te tangloeng ni Moab loh amah Moab pum ham a rhung te. Kirhareseth rhae te a rhung thil tih aka rhawp yungyi ham na caitawk thil.
8 ೮ ಹೆಷ್ಬೋನಿನ ಭೂಮಿಯು, ಸಿಬ್ಮದ ದ್ರಾಕ್ಷಾಲತೆಯು ಒಣಗಿ ಹೋಗಿದೆ. ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ, ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷಿಗಳನ್ನು, ಜನಾಂಗಗಳ ಒಡೆಯರನ್ನು ತುಳಿದುಬಿಟ್ಟಿದ್ದಾನೆ.
Heshbon lohmali kah Sibam misur tah huum coeng tih, namtom boei rhoek loh a dawn a oh uh. A pae loh Jazer la a pha. Khosoek ah yam hmaang tih tuipuei khaw a poeng uh.
9 ೯ ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು. ಹೆಷ್ಬೋನೇ, ಎಲ್ಲಾಲೇ ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು. ನಿಮ್ಮ ಹಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ.
Te dongah ni Jazer kah a rhah bangla Sibam misur te ka rhah tangkhuet. Heshbon neh Elealeh nang te ka mikphi neh kan hmilhmal sak. Nang kah khohal neh na cangah kah tamlung khaw paa coeng.
10 ೧೦ ಹರ್ಷಾನಂದಗಳು ತೋಟಗಳಿಂದ ತೊಲಗಿವೆ. ದ್ರಾಕ್ಷಿಯ ತೋಟಗಳಲ್ಲಿ ಉತ್ಸಾಹದ ಧ್ವನಿಯೂ, ಉಲ್ಲಾಸದ ಆರ್ಭಟವೂ ಇರುವುದಿಲ್ಲ. ತುಳಿಯುವವರು ದ್ರಾಕ್ಷಿಯ ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.
Cangthai dong lamkah kohoenah neh omngaihnah khaw khum coeng. Misurdum ah khaw tamhoe voel pawh. Misurtui te yuhui thil voel pawh. Va-am te a mael khaw a mael thil voel pawt dongah tamlung khaw ka bawt sak coeng.
11 ೧೧ ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.
Te dongah ka ko ah Moab ham rhotoeng bangla, ka kotak ah Kirhareseth ham hue a sak.
12 ೧೨ ಮೋವಾಬ್ಯರು ಸನ್ನಿಧಿಗೆ ಸೇರಿ, ದಿಣ್ಣೆಯಲ್ಲಿನ ಪೂಜೆಯಿಂದ ಬಹಳ ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಅವರ ಪ್ರಾರ್ಥನೆಯು ಸಫಲವಾಗುವುದಿಲ್ಲ.
Moab kah a ngak a phoe pah khaw om bitni. Thangthui hamla hmuensang kah a rhokso te a paan vaengah coeng thai mahpawh.
13 ೧೩ ಯೆಹೋವನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತುಗಳು ಇದೇ.
Hekah ol he BOEIPA loh hlamat ah ni Moab ham a thui coeng.
14 ೧೪ ಆಗ ಯೆಹೋವನು ತಿರುಗಿ ಹೇಳಿದ್ದೇನೆಂದರೆ, “ಮೂರು ವರ್ಷದೊಳಗೆ ಮೋವಾಬಿನ ವೈಭವವು ಕಣ್ಮರೆಯಾಗುವುದು. ಅವರ ದೊಡ್ಡ ಗುಂಪು ನಾಶವಾಗುವುದು ಅವರ ಜನರಲ್ಲಿ, ಉಳಿದವರು ಕೇವಲ ಚಿಕ್ಕ ಗುಂಪಾಗಿ ಬಲಹೀನರಾಗುವರು” ಎಂಬುದೇ.
Tahae BOEIPA loh koep a thui tih, “Kum thum khuiah kutloh kum kah bangla Moab kah thangpomnah neh hlangping boeih te rhaidaeng la muep om ni. A yolkai la aka sueng duen khaw khala pawh.