< ಯೆಶಾಯನು 2 >

1 ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ.
Слово бывшее от Господа ко Исаии сыну Амосову о Иудеи и о Иерусалиме.
2 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
Яко будет в последния дни явлена гора Господня, и дом Божий на версе гор, и возвысится превыше холмов: и приидут к ней вси языцы.
3 ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.
И пойдут языцы мнози и рекут: приидите, и взыдем на гору Господню и в дом Бога Иаковля, и возвестит нам путь Свой, и пойдем по нему. От Сиона бо изыдет закон, и слово Господне из Иерусалима:
4 ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
и судити будет посреде язык и изобличит люди многи: и раскуют мечы своя на орала и копия своя на серпы, и не возмет язык на язык меча, и не навыкнут ктому ратоватися.
5 ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.
И ныне, доме Иаковль, приидите, пойдем светом Господним.
6 ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.
Остави бо люди Своя, дом Иаковль: зане якоже из начала наполнися страна их волхвований, якоже иноплеменников, и чада многа иноплеменнича родишася им.
7 ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ. ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ.
Наполнися бо страна их сребра и злата, и не бяше числа сокровищ их: и наполнися земля их коней, и не бяше числа колесниц их:
8 ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.
и наполнися земля мерзостей дел рук их, и поклонишася тем, яже сотвориша персты их:
9 ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.
и преклонися человек и смирися муж, и не претерплю им.
10 ೧೦ ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.
И ныне внидите в камение и скрыйтеся в землю от лица страха Господня и от славы крепости Его, егда востанет сокрушити землю.
11 ೧೧ ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
Очи бо Господни высоцы, человек же смирен: и смирится высота человеческая, и возиесется Господь един в день оный.
12 ೧೨ ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.
День бо Господа Саваофа на всякаго досадителя и горделиваго, и на всякаго высокаго и величаваго, и смирятся:
13 ೧೩ ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ,
и на всяк кедр Ливанский высоких и превознесенных и на всяко древо желудя Васанска,
14 ೧೪ ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳ ಮೇಲೆಯೂ,
и на всякую гору высокую и на всякий холм высокий,
15 ೧೫ ಎತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ,
и на всякий столп высок и на всякую стену высокую,
16 ೧೬ ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು.
и на всякий корабль морский и на всяко видение доброты кораблей.
17 ೧೭ ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
И смирится всякий человек, и падется высота человеча, и вознесется Господь един в день оный.
18 ೧೮ ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು.
И рукотвореная вся скрыют,
19 ೧೯ ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.
внесше в пещеры и в разселины камений и в вертепы земныя, от лица страха Господня и от славы крепости Его, егда востанет сокрушити землю.
20 ೨೦ ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.
В день бо оный изринет человек мерзости своя златыя и сребряныя, яже сотвориша, да покланяются суетным и нетопырем,
21 ೨೧ ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.
еже внити в вертепы твердаго камене и в разселины камений, от лица страха Господня и от славы крепости Его, егда востанет сокрушити землю.
22 ೨೨ ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ.
Оставите (убо) вам человека, емуже есть дыхание в ноздрех его: яко в чем вменися сей?

< ಯೆಶಾಯನು 2 >