< ಯೆಶಾಯನು 20 >

1 ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ದೋದಿಗೆ ಬಂದು ಅದರ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿಕೊಂಡನು.
U godini kad je vrhovni vojskovođa, koga bijaše poslao Sargon, kralj asirski, došao u Ašdod, napao ga i zauzeo,
2 ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.
u to vrijeme reče Jahve po Izaiji, sinu Amosovu: “Hajde, skini kostrijet s bokova i obuću izuj s nogu.” On to učini te iđaše gol i bos.
3 ಆಗ ಯೆಹೋವನು ಹೀಗೆ ಹೇಳಿದನು, “ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಆಶ್ಚರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ನಡೆದನು.”
Tada reče Jahve: “Kao što je sluga moj Izaija tri godine išao gol i bos kao znak i znamenje Egiptu i Kušu,
4 ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.
tako će kralj asirski odvesti sužnje iz Egipta i izgnanike iz Kuša, mlade i stare, gole i bose, otkrivenih zadnjica, sramote Egipta.
5 ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.
Zbunit će se tad i posramiti zbog Kuša, svoje uzdanice, i Egipta, svojega ponosa.
6 ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.
I reći će u onaj dan stanovnici ovog primorja: 'Eto, to je uzdanica naša kojoj se utjecasmo da nam pomogne i spasi nas od kralja asirskoga. A kako da se mi spasimo?'”

< ಯೆಶಾಯನು 20 >