< ಯೆಶಾಯನು 20 >
1 ೧ ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ದೋದಿಗೆ ಬಂದು ಅದರ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿಕೊಂಡನು.
앗수르 왕 사르곤이 군대장관을 아스돗으로 보내매 그가 와서 아스돗을 쳐서 취하던 해
2 ೨ ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.
곧 그 때에 여호와께서 아모스의 아들 이사야에게 일러 가라사대 갈지어다 네 허리에서 베를 끄르고 네 발에서 신을 벗을지니라 하시매 그가 그대로 하여 벗은 몸과 벗은 발로 행하니라
3 ೩ ಆಗ ಯೆಹೋವನು ಹೀಗೆ ಹೇಳಿದನು, “ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಆಶ್ಚರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ನಡೆದನು.”
여호와께서 가라사대 나의 종 이사야가 삼년동안 벗은 몸과 벗은 발로 행하여 애굽과 구스에 대하여 예표와 기적이 되게 되었느니라
4 ೪ ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.
이와 같이 애굽의 포로와 구스의 사로잡힌 자가 앗수르 왕에게 끌려 갈 때에 젊은 자나 늙은 자가 다 벗은 몸, 벗은 발로 볼기까지 드러내어 애굽의 수치를 뵈이리니
5 ೫ ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.
그들이 그 바라던 구스와 자랑하던 애굽을 인하여 놀라고 부끄러워할 것이라
6 ೬ ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.
그 날에 이 해변 거민이 말하기를 우리가 믿던 나라 곧 우리가 앗수르 왕에게서 벗어나기를 바라고 달려가서 도움을 구하던 나라가 이같이 되었은즉 우리가 어찌 능히 피하리요 하리라