< ಯೆಶಾಯನು 22 >
1 ೧ ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?
Revelação sobre o vale da visão: O que há contigo, agora, para que tenhas subido toda aos terraços?
2 ೨ ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ.
Tu cheia de barulhos, cidade tumultuada, cidade alegre! Teus mortos não morreram pela espada, nem morreram na guerra.
3 ೩ ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ; ದೂರದಿಂದ ಓಡುತ್ತಾ ಶತ್ರುವಿಗೆ ಸಿಕ್ಕಿದ ನಿನ್ನ ಜನರೆಲ್ಲರೊಂದಿಗೆ ಕಟ್ಟುಬಿದ್ದಿದ್ದಾರೆ.
Todos os teus líderes juntamente fugiram; foram presos sem [nem usarem] o arco; todos os teus que foram achados juntamente foram amarrados, [ainda que] tenham fugido para longe.
4 ೪ ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.
Por isso eu disse: Desviai vossa vista de mim, [pois] chorarei amargamente; não insistais em me consolar pela destruição da filha do meu povo.
5 ೫ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.
Pois foi dia de alvoroço, de atropelamento, e de confusão, proveniente do Senhor DEUS dos exércitos, no vale da visão; [dia] de muros serem derrubados, e de gritarem ao monte.
6 ೬ ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆಗೆದರು.
E Elão tomou a aljava, [e] houve homens em carruagens, e cavaleiros. Quir descobriu os escudos.
7 ೭ ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿದವು, ರಾಹುತರು ಬಾಗಿಲಿನ ಹತ್ತಿರ ವ್ಯೂಹಕಟ್ಟಿದರು.”
E foi que teus melhores vales se encheram de carruagens de guerra; e cavaleiros se puseram em posição de ataque junto ao portão.
8 ೮ ಅವನು ಯೆಹೂದದ ರಕ್ಷಣೆಯ ಮುಸುಕನ್ನು ತೆಗೆದಿದ್ದಾನೆ. ಆ ದಿನದಲ್ಲಿ (ಲೆಬನೋನಿನ) ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ.
E tiraram a cobertura de Judá; e naquele dia olhastes para as armas da casa do bosque.
9 ೯ ದಾವೀದನ ಪಟ್ಟಣದ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.
E vistes as brechas [dos muros] da cidade de Davi, que eram muitas; e ajuntastes águas no tanque de baixo.
10 ೧೦ ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ.
Também contastes as casas de Jerusalém; e derrubastes casas para fortalecer os muros.
11 ೧೧ ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ; ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.
Fizestes também um reservatório entre os dois muros para as águas do tanque velho; porém não destes atenção para aquele que fez estas coisas, nem olhastes para aquele que as formou desde a antiguidade.
12 ೧೨ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.
E naquele dia o Senhor DEUS dos exércitos chamou ao choro, ao lamento, ao raspar de cabelos, e ao vestir de saco.
13 ೧೩ ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.
E eis aqui alegria e festejo, matando vacas e degolando ovelhas, comendo carne, bebendo vinho, [e dizendo]: Comamos e bebamos, porque amanhã morreremos!
14 ೧೪ ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ.
Mas o SENHOR dos exércitos se revelou a meus ouvidos, [dizendo]: Certamente esta maldade não vos será perdoada até que morrais, diz o Senhor DEUS dos exércitos.
15 ೧೫ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, “ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ,
Assim disse o Senhor DEUS dos exércitos: Vai, visita este mordomo, Sebna, que administra a casa [real],
16 ೧೬ ‘ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು? ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿದಿ ಅಲ್ಲವೇ?’”
[E dize-lhe]: O que é que tens aqui? Ou quem tu tens aqui, [que te dá direito] a cavares aqui tua sepultura, [como] quem cava em lugar alto sua sepultura, e talha na rocha morada para si?
17 ೧೭ ಇಗೋ, ಬಲಿಷ್ಠ ಮನುಷ್ಯನಾದ ನಿನ್ನನ್ನು ಯೆಹೋವನು ಎಸೆಯುವನು, ನಿನ್ನನ್ನು ಕೆಳಗೆ ಎಸೆಯುವನು, ನಿನ್ನನ್ನು ಗಟ್ಟಿಯಾಗಿ ಹಿಡಿಯುವನು.
Eis que o SENHOR te lançará fora, ó homem, e te agarrará!
18 ೧೮ ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು; ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು.
Certamente ele te lançará rodando, como uma bola numa terra larga e espaçosa. Ali morrerás, e ali [estarão] tuas gloriosas carruagens, [para] desonra da casa do teu senhor.
19 ೧೯ ಯೆಹೋವನಾದ ನಾನು, “ನಿನ್ನನ್ನು ಉದ್ಯೋಗದಿಂದ ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು.
E te removerei de tua posição, e te arrancarei de teu assento.
20 ೨೦ ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆಯುವೆನು.
E será naquele dia, que chamarei a meu servo Eliaquim, filho de Hilquias.
21 ೨೧ ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.
E eu o vestirei com tua túnica, e porei nele o teu cinto, e entregarei teu governo nas mãos dele, e ele será como um pai aos moradores de Jerusalém e à casa de Judá.
22 ೨೨ ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.
E porei a chave da casa de Davi sobre seu ombro; quando ele abrir, e ninguém fechará; e quando ele fechar, ninguém abrirá.
23 ೨೩ ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ವಂಶದವರಿಗೆ ವೈಭವವುಳ್ಳ ಸಿಂಹಾಸನವಾಗಿರುವನು.
E eu o fincarei [como] a um prego em um lugar firme; e ele será um trono de honra à casa de seu pai.
24 ೨೪ ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ವೈಭವವನ್ನು ಅವರು ಆ ದಿನದಲ್ಲಿ ಅವನಿಗೆ ವಹಿಸುವರು” ಎಂಬುದೇ.
E nele pendurarão toda a honra da casa de seu pai, dos renovos e dos descendentes, todos as vasilhas menores; desde as vasilhas de taças, até todas as vasilhas de jarros.
25 ೨೫ ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ.
Naquele dia, - diz o SENHOR dos exércitos, - o prego fincado em lugar firme será tirado; e será cortado, e cairá; e a carga que nele está será cortada; porque [assim] o SENHOR disse.