< ಯೆಶಾಯನು 24 >
1 ೧ ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.
Iată, Domnul goleşte pământul şi îl risipeşte şi îl răstoarnă şi împrăştie departe pe locuitorii acestuia.
2 ೨ ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ, ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ಡಿ ಪಡೆಯುವವನು ಬಡ್ಡಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು.
Şi va fi, precum poporului, aşa şi preotului; precum servitorului, aşa şi stăpânului său; precum servitoarei, aşa şi stăpânei ei; precum cumpărătorului, aşa şi vânzătorului; precum creditorului, aşa şi debitorului; precum celui ce ia camătă, aşa şi celui ce îi dă cu camătă.
3 ೩ ಭೂಮಿಯು ಬಟ್ಟಬರಿದಾಗುವುದು, ಅದು ಸಂಪೂರ್ಣ ಸುಲಿಗೆಯಾಗುವುದು, ಯೆಹೋವನೇ ಇದನ್ನು ನುಡಿದಿದ್ದಾನೆ.
Ţara va fi golită de tot şi prădată în întregime, căci DOMNUL a vorbit acest cuvânt.
4 ೪ ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ.
Pământul jeleşte şi se veştejeşte, lumea tânjeşte şi se veştejeşte, trufaşii pământului tânjesc.
5 ೫ ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
Pământul este de asemenea întinat sub locuitorii acestuia, fiindcă au încălcat legile, au schimbat rânduiala, au rupt legământul veşnic.
6 ೬ ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
De aceea blestemul a mâncat pământul şi cei ce locuiesc pe el sunt pustiiţi; de aceea locuitorii pământului sunt arşi şi puţini oameni rămaşi.
7 ೭ ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ.
Vinul nou jeleşte, via tânjeşte, toţi cei cu inimă veselă oftează.
8 ೮ ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ, ಕಿನ್ನರಿಯ ಆನಂದವು ಅಡಗಿದೆ.
Bucuria tamburinelor încetează, zgomotul celor care se bucură se sfârşeşte, bucuria harpei încetează.
9 ೯ ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವುದು.
Ei nu vor bea vin cu o cântare; băutura tare va fi amară celor ce o beau.
10 ೧೦ ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.
Cetatea pustiirii este zdrobită; fiecare casă este închisă, încât nimeni să nu intre.
11 ೧೧ ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.
Se strigă pe străzi pentru vin; toată bucuria este întunecată, veselia ţării s-a dus.
12 ೧೨ ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ.
În cetate a rămas pustiire şi poarta este lovită cu distrugere.
13 ೧೩ ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.
Când va fi astfel în mijlocul ţării printre oameni, va fi ca scuturarea unui măslin [şi] precum strugurii culeşi după ce recoltarea este gata.
14 ೧೪ ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು. ಸಮುದ್ರದ ಕಡೆಯಿಂದ ಆರ್ಭಟಿಸುವರು.
Îşi vor înălţa vocea, vor cânta pentru maiestatea DOMNULUI, vor striga tare dinspre mare.
15 ೧೫ ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು.
De aceea glorificaţi pe DOMNUL în focuri, numele DOMNULUI Dumnezeul lui Israel în insulele mării.
16 ೧೬ ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.
Din partea cea mai îndepărtată a pământului noi am auzit cântece, glorie celui drept. Dar eu am spus: Slăbiciunea mea, slăbiciunea mea, vai mie! Cei perfizi s-au purtat perfid; da, cei perfizi s-au purtat foarte perfid.
17 ೧೭ ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ.
Frica şi groapa şi cursa sunt asupra ta, locuitor al pământului.
18 ೧೮ ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.
Şi se va întâmpla, că cel ce fuge de zgomotul fricii va cădea în groapă; şi cel ce iese din mijlocul gropii va fi prins în cursă, căci ferestrele de sus sunt deschise şi fundaţiile pământului se clatină.
19 ೧೯ ಭೂಮಿಯು ಒಡೆದೇ ಇದೆ, ಬಿರಿದಿದೆ, ಕದಲಿಯೇ ಹೋಗಿದೆ.
Pământul este zdrobit de tot, pământul este dizolvat în întregime, pământul este mişcat peste măsură.
20 ೨೦ ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ.
Pământul se va clătina încoace şi încolo ca un beţiv şi va fi îndepărtat ca o colibă; şi fărădelegea acestuia va fi grea asupra lui; şi va cădea şi nu se va mai ridica.
21 ೨೧ ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ, ಭೂಮಂಡಲದ ಒಡೆಯರನ್ನೂ ದಂಡಿಸುವನು.
Şi se va întâmpla, în acea zi, că DOMNUL va pedepsi oştirea celor înalţi din înalt şi pe împăraţii pământului peste pământ.
22 ೨೨ ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು. ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು.
Şi vor fi adunaţi precum prizonierii sunt adunaţi în groapă şi vor fi închişi în închisoare şi după multe zile vor fi cercetaţi.
23 ೨೩ ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.
Atunci luna va fi încurcată şi soarele ruşinat, când DOMNUL oştirilor va domni în muntele Sion şi în Ierusalim şi glorios înaintea bătrânilor lui.