< ಯೆಶಾಯನು 25 >
1 ೧ ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.
여호와여 주는 나의 하나님이시라 내가 주를 높이고 주의 이름을 찬송하오리니 주는 기사를 옛적의 정하신 뜻대로 성실함과 진실함으로 행하셨음이라
2 ೨ ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ.
주께서 성읍으로 무더기를 이루시며 견고한 성읍으로 황무케 하시며 외인의 궁정으로 성읍이 되지 못하게 하사 영영히 건설되지 못하게 하셨으므로
3 ೩ ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು.
강한 민족이 주를 영화롭게 하며 포학한 나라들의 성읍이 주를 경외하리이다
4 ೪ ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.
주는 포학자의 기세가 성벽을 충돌하는 폭풍과 같을 때에 빈궁한 자의 보장이시며 환난 당한 빈핍한 자의 보장이시며 폭풍 중에 피난처시며 폭양을 피하는 그늘이 되셨사오니
5 ೫ ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು.
마른 땅에 폭양을 제함 같이 주께서 외인의 훤화를 그치게 하시며 폭양을 구름으로 가리움 같이 포학한 자의 노래를 낮추시리이다
6 ೬ ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.
만군의 여호와께서 이 산에서 만민을 위하여 기름진 것과 오래 저장하였던 포도주로 연회를 베푸시리니 곧 골수가 가득한 기름진 것과 오래 저장하였던 맑은 포도주로 하실 것이며
7 ೭ ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು.
또 이 산에서 모든 민족의 그 가리워진 면박과 열방의 그 덮인 휘장을 제하시며
8 ೮ ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.
사망을 영원히 멸하실 것이라 주 여호와께서 모든 얼굴에서 눈물을 씻기시며 그 백성의 수치를 온 천하에서 제하시리라 여호와께서 이같이 말씀하셨느니라
9 ೯ ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.
그 날에 말하기를 이는 우리의 하나님이시라 우리가 그를 기다렸으니 그가 우리를 구원하시리로다 이는 여호와시라 우리가 그를 기다렸으니 우리는 그 구원을 기뻐하며 즐거워하리라 할 것이며
10 ೧೦ ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.
여호와의 손이 이 산에 나타나시리니 모압이 거름물 속의 초개의 밟힘 같이 자기 처소에서 밟힐 것인즉
11 ೧೧ ಈಜುವವನು ಕೈಯಾಡಿಸುವಂತೆ ಅವರು ಅದರಲ್ಲಿಯೇ ಕೈಯಾಡಿಸುವರು; ಆದರೆ ಯೆಹೋವನು ಅವರ ಗರ್ವವನ್ನೂ, ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು.
그가 헤엄치는 자의 헤엄치려고 손을 폄 같이 그 속에서 그 손을 펼 것이나 여호와께서 그 교만과 그 손의 교활을 누르실 것이라
12 ೧೨ ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು.
너의 성벽의 높은 보장을 헐어 땅에 내리시되 진토에 미치게 하시리라