< ಯೆಶಾಯನು 26 >
1 ೧ ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.
En ce jour, on chantera cet hymne dans le pays de Juda: "Nous avons une ville pour nous protéger, murs et remparts assurent notre salut.
2 ೨ ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!
Ouvrez les portes, pour que puisse entrer un peuple juste, gardien de la loyauté."
3 ೩ ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
Celui qui a le cœur ferme, tu le préserves; à lui la paix, la paix, car il se confie en toi.
4 ೪ ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.
Mettez votre confiance en Dieu toujours et toujours, car en l’Eternel vous avez un roc immuable.
5 ೫ ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.
Il a humilié ceux qui trônaient haut; la cité altière, il l’a abaissée, abaissée jusqu’à terre, couchée—dans la poussière.
6 ೬ ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ.
Les pieds la foulent, les pieds de l’humble, le talon des faibles.
7 ೭ ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.
La voie du juste est droiture; ô Dieu intègre, tu aplanis le sentier du juste.
8 ೮ ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.
Oui, Seigneur, sur la voie de tes jugements nous espérons en toi; le désir de notre âme va à ton nom et à ton souvenir.
9 ೯ ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.
De tout mon être, j’aspire à toi durant la nuit, de toute la puissance de l’esprit qui est en moi, je te recherche le matin; car lorsque tes jugements éclatent ici-bas, les habitants du globe apprennent la justice.
10 ೧೦ ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು.
Que le méchant soit traité avec bienveillance, il n’apprend pas, lui, la justice; au pays de la droiture il poursuit ses méfaits et ne considère pas la majesté de l’Eternel.
11 ೧೧ ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.
Ta main s’est dressée, ô Seigneur, ils ne l’ont pas aperçue. Puissent-ils, pour leur confusion, voir ton zèle pour ce peuple! Puisse le feu dévorer tes adversaires!
12 ೧೨ ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.
Fonde la paix parmi nous, Eternel, puisque aussi bien tous les fruits de notre action sont ton œuvre,
13 ೧೩ ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ ನಾಮವನ್ನೇ ಹೊಗಳುವೆವು, ಸ್ತುತಿಸುವೆವು.
Dieu éternel, des maîtres autres que toi ont dominé sur nous, mais grâce à toi, c’est ton nom seul que nous invoquons,
14 ೧೪ ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.
Les morts ne revivent point, les ombres ne se relèvent pas; voilà pourquoi tu as sévi contre eux, tu les as détruits et effacé d’eux tout souvenir.
15 ೧೫ ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.
Mais tu as grandi, ô Seigneur, ce peuple, tu as grandi ce peuple, dont tu es honoré, et élargi toutes les limites de son pays.
16 ೧೬ ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.
Eternel, dans la détresse ils pensaient à toi et se répandaient en prières silencieuses, quand ton châtiment les atteignait.
17 ೧೭ ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ, ನಾವು ನಿನ್ನ ಮುಂದೆ ಸಹಾಯಕ್ಕಾಗಿ ಕೂಗಿ ದುಃಖಿಸಿದ್ದೇವೆ.
Comme une femme enceinte, sur le point d’accoucher, se tord, jette des cris dans ses douleurs, ainsi nous étions à cause de toi.
18 ೧೮ ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ, ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ.
Nous avons conçu, nous avons été en travail, mais nous n’avons enfanté que du vent. Nul secours n’a été apporté au pays, nul homme n’a été mis au monde.
19 ೧೯ ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.
Puissent donc tes morts revenir à la vie et les cadavres des miens ressusciter! Réveillez-vous et entonnez des cantiques, vous qui dormez dans la poussière! Oui, pareille à la rosée du matin est ta rosée: grâce à elle, la terre laisse échapper ses ombres.
20 ೨೦ ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.
Va, mon peuple, retire-toi dans tes demeures, et ferme les portes derrière toi; cache-toi un court instant, jusqu’à ce que la bourrasque ait passé.
21 ೨೧ ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”
Car, voici l’Eternel qui sort de sa résidence, pour faire expier leurs méfaits aux habitants du pays: la terre va mettre au jour le sang qui l’a baignée, et elle ne dérobera plus aux regards les victimes qu’elle a reçues.