< ಯೆಶಾಯನು 26 >

1 ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.
בַּיּ֣וֹם הַה֔וּא יוּשַׁ֥ר הַשִּׁיר־הַזֶּ֖ה בְּאֶ֣רֶץ יְהוּדָ֑ה עִ֣יר עָז־לָ֔נוּ יְשׁוּעָ֥ה יָשִׁ֖ית חוֹמ֥וֹת וָחֵֽל׃
2 ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!
פִּתְח֖וּ שְׁעָרִ֑ים וְיָבֹ֥א גוֹי־צַדִּ֖יק שֹׁמֵ֥ר אֱמֻנִֽים׃
3 ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
יֵ֣צֶר סָמ֔וּךְ תִּצֹּ֖ר שָׁל֣וֹם ׀ שָׁל֑וֹם כִּ֥י בְךָ֖ בָּטֽוּחַ׃
4 ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.
בִּטְח֥וּ בַֽיהוָ֖ה עֲדֵי־עַ֑ד כִּ֚י בְּיָ֣הּ יְהוָ֔ה צ֖וּר עוֹלָמִֽים׃
5 ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.
כִּ֤י הֵשַׁח֙ יֹשְׁבֵ֣י מָר֔וֹם קִרְיָ֖ה נִשְׂגָּבָ֑ה יַשְׁפִּילֶ֤נָּה יַשְׁפִּילָהּ֙ עַד־אֶ֔רֶץ יַגִּיעֶ֖נָּה עַד־עָפָֽר׃
6 ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ.
תִּרְמְסֶ֖נָּה רָ֑גֶל רַגְלֵ֥י עָנִ֖י פַּעֲמֵ֥י דַלִּֽים׃
7 ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.
אֹ֥רַח לַצַּדִּ֖יק מֵֽישָׁרִ֑ים יָשָׁ֕ר מַעְגַּ֥ל צַדִּ֖יק תְּפַלֵּֽס׃
8 ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.
אַ֣ף אֹ֧רַח מִשְׁפָּטֶ֛יךָ יְהוָ֖ה קִוִּינ֑וּךָ לְשִׁמְךָ֥ וּֽלְזִכְרְךָ֖ תַּאֲוַת־נָֽפֶשׁ׃
9 ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.
נַפְשִׁ֤י אִוִּיתִ֙יךָ֙ בַּלַּ֔יְלָה אַף־רוּחִ֥י בְקִרְבִּ֖י אֲשַֽׁחֲרֶ֑ךָּ כִּ֞י כַּאֲשֶׁ֤ר מִשְׁפָּטֶ֙יךָ֙ לָאָ֔רֶץ צֶ֥דֶק לָמְד֖וּ יֹשְׁבֵ֥י תֵבֵֽל׃
10 ೧೦ ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು.
יֻחַ֤ן רָשָׁע֙ בַּל־לָמַ֣ד צֶ֔דֶק בְּאֶ֥רֶץ נְכֹח֖וֹת יְעַוֵּ֑ל וּבַל־יִרְאֶ֖ה גֵּא֥וּת יְהוָֽה׃ ס
11 ೧೧ ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.
יְהוָ֛ה רָ֥מָה יָדְךָ֖ בַּל־יֶחֱזָי֑וּן יֶחֱז֤וּ וְיֵבֹ֙שׁוּ֙ קִנְאַת־עָ֔ם אַף־אֵ֖שׁ צָרֶ֥יךָ תֹאכְלֵֽם׃ ס
12 ೧೨ ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.
יְהוָ֕ה תִּשְׁפֹּ֥ת שָׁל֖וֹם לָ֑נוּ כִּ֛י גַּ֥ם כָּֽל־מַעֲשֵׂ֖ינוּ פָּעַ֥לְתָּ לָּֽנוּ׃
13 ೧೩ ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ ನಾಮವನ್ನೇ ಹೊಗಳುವೆವು, ಸ್ತುತಿಸುವೆವು.
יְהוָ֣ה אֱלֹהֵ֔ינוּ בְּעָל֥וּנוּ אֲדֹנִ֖ים זֽוּלָתֶ֑ךָ לְבַד־בְּךָ֖ נַזְכִּ֥יר שְׁמֶֽךָ׃
14 ೧೪ ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.
מֵתִים֙ בַּל־יִחְי֔וּ רְפָאִ֖ים בַּל־יָקֻ֑מוּ לָכֵ֤ן פָּקַ֙דְתָּ֙ וַתַּשְׁמִידֵ֔ם וַתְּאַבֵּ֥ד כָּל־זֵ֖כֶר לָֽמוֹ׃
15 ೧೫ ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.
יָסַ֤פְתָּ לַגּוֹי֙ יְהוָ֔ה יָסַ֥פְתָּ לַגּ֖וֹי נִכְבָּ֑דְתָּ רִחַ֖קְתָּ כָּל־קַצְוֵי־אָֽרֶץ׃
16 ೧೬ ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.
יְהוָ֖ה בַּצַּ֣ר פְּקָד֑וּךָ צָק֣וּן לַ֔חַשׁ מוּסָרְךָ֖ לָֽמוֹ׃
17 ೧೭ ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ, ನಾವು ನಿನ್ನ ಮುಂದೆ ಸಹಾಯಕ್ಕಾಗಿ ಕೂಗಿ ದುಃಖಿಸಿದ್ದೇವೆ.
כְּמ֤וֹ הָרָה֙ תַּקְרִ֣יב לָלֶ֔דֶת תָּחִ֥יל תִּזְעַ֖ק בַּחֲבָלֶ֑יהָ כֵּ֛ן הָיִ֥ינוּ מִפָּנֶ֖יךָ יְהוָֽה׃
18 ೧೮ ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ, ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ.
הָרִ֣ינוּ חַ֔לְנוּ כְּמ֖וֹ יָלַ֣דְנוּ ר֑וּחַ יְשׁוּעֹת֙ בַּל־נַ֣עֲשֶׂה אֶ֔רֶץ וּבַֽל־יִפְּל֖וּ יֹשְׁבֵ֥י תֵבֵֽל׃
19 ೧೯ ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.
יִֽחְי֣וּ מֵתֶ֔יךָ נְבֵלָתִ֖י יְקוּמ֑וּן הָקִ֨יצוּ וְרַנְּנ֜וּ שֹׁכְנֵ֣י עָפָ֗ר כִּ֣י טַ֤ל אוֹרֹת֙ טַלֶּ֔ךָ וָאָ֖רֶץ רְפָאִ֥ים תַּפִּֽיל׃ ס
20 ೨೦ ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.
לֵ֤ךְ עַמִּי֙ בֹּ֣א בַחֲדָרֶ֔יךָ וּֽסְגֹ֥ר דְּלָתְךָ֖ בַּעֲדֶ֑ךָ חֲבִ֥י כִמְעַט־רֶ֖גַע עַד־יַעֲבָר זָֽעַם׃
21 ೨೧ ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”
כִּֽי־הִנֵּ֤ה יְהוָה֙ יֹצֵ֣א מִמְּקוֹמ֔וֹ לִפְקֹ֛ד עֲוֹ֥ן יֹֽשֵׁב־הָאָ֖רֶץ עָלָ֑יו וְגִלְּתָ֤ה הָאָ֙רֶץ֙ אֶת־דָּמֶ֔יהָ וְלֹֽא־תְכַסֶּ֥ה ע֖וֹד עַל־הֲרוּגֶֽיהָ׃ ס

< ಯೆಶಾಯನು 26 >