< ಯೆಶಾಯನು 27 >
1 ೧ ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.
その日、主は堅く大いなる強いつるぎで逃げるへびレビヤタン、曲りくねるへびレビヤタンを罰し、また海におる龍を殺される。
2 ೨ ಆ ದಿನದಲ್ಲಿ ಫಲಭರಿತ ದ್ರಾಕ್ಷಿಯ ತೋಟದ ವಿಷಯವಾಗಿ ಹಾಡಿರಿ,
その日「麗しきぶどう畑よ、このことを歌え。
3 ೩ “ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ.
主なるわたしはこれを守り、常に水をそそぎ、夜も昼も守って、そこなう者のないようにする。
4 ೪ ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.
わたしは憤らない。いばら、おどろがわたしと戦うなら、わたしは進んでこれを攻め、皆もろともに焼きつくす。
5 ೫ ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ.
それを望まないなら、わたしの保護にたよって、わたしと和らぎをなせ、わたしと和らぎをなせ」。
6 ೬ ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”
後になれば、ヤコブは根をはり、イスラエルは芽を出して花咲き、その実を全世界に満たす。
7 ೭ ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?
主は彼らを撃った者を撃たれたように彼らを撃たれたか。あるいは彼らを殺した者が殺されたように彼らは殺されたか。
8 ೮ ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.
あなたは彼らと争って、彼らを追放された。主は東風の日に、その激しい風をもって彼らを移しやられた。
9 ೯ ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.
それゆえ、ヤコブの不義はこれによって、あがなわれる。これによって結ぶ実は彼の罪を除く。すなわち彼が祭壇のすべての石を砕けた白堊のようにし、アシラ像と香の祭壇とを再び建てないことである。
10 ೧೦ ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು.
堅固な町は荒れてさびしく、捨て去られたすまいは荒野のようだ。子牛はそこに草を食い、そこに伏して、その木の枝を裸にする。
11 ೧೧ ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.
その枝が枯れると、折り取られ、女が来てそれを燃やす。これは無知の民だからである。それゆえ、彼らを造られた主は彼らをあわれまれない。彼らを形造られた主は、彼らを恵まれない。
12 ೧೨ ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.
イスラエルの人々よ、その日、主はユフラテ川からエジプトの川にいたるまで穀物の穂を打ち落される。そしてあなたがたは、ひとりびとり集められる。
13 ೧೩ ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.
その日大いなるラッパが鳴りひびき、アッスリヤの地にある失われた者と、エジプトの地に追いやられた者とがきて、エルサレムの聖山で主を拝む。