< ಯೆಶಾಯನು 28 >

1 ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!
अफ़सोस इफ़्राईम के मतवालों के घमण्ड के ताज पर और उसकी शानदार शौकत के मुरझाये हुए फूल पर जो उन लोगों की शादाब वादी के सिरे पर है जो मय के मग़लूब हैं।
2 ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.
देखो ख़ुदावन्द के पास एक ज़बरदस्त और ताक़तवर शख़्स है, जो उस आँधी की तरह जिसके साथ ओले हों और बाद समूम की तरह और सैलाब — ए — शदीद की तरह ज़मीन पर हाथ से पटक देगा।
3 ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.
इफ़्राईम के मतवालों के घमण्ड का ताज पामाल किया जाएगा;
4 ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ, ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು.
और उस शानदार शौकत का मुरझाया हुआ फूल जो उस शादाब वादी के सिरे पर है, पहले पक्के अंजीर की तरह होगा जो गर्मी के दिनों से पहले लगे; जिस पर किसी की निगाह पड़े और वह उसे देखते ही और हाथ में लेते ही निगल जाए।
5 ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.
उस वक़्त रब्ब — उल — अफ़वाज अपने लोगों के बक़िये के लिए शौकत का अफ़सर और हुस्न का ताज होगा।
6 ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.
और 'अदालत की कुर्सी पर बैठने वाले के लिए इन्साफ़ की रूह, और फाटकों से लड़ाई को दूर करने वालों के लिए ताक़त होगा।
7 ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.
लेकिन यह भी मयख़्वारी से डगमगाते और नशे में लड़खड़ाते हैं; काहिन और नबी भी नशे में चूर और मय में ग़र्क़ हैं, वह नशे में झूमते हैं; वह रोया में ख़ता करते और 'अदालत में लगज़िश खाते हैं।
8 ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ.
क्यूँकि सब दस्तरख़्वान क़य और गन्दगी से भरे हैं कोई जगह बाक़ी नहीं।
9 ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ?
वह किसको अक़्ल सिखाएगा? किसको तक़रीर करके समझाएगा? क्या उनको जिनका दूध छुड़ाया गया, जो छातियों से जुदा किए गए?
10 ೧೦ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ.
क्यूँकि हुक्म पर हुक्म, हुक्म पर हुक्म; क़ानून पर क़ानून, क़ानून पर क़ानून है; थोड़ा यहाँ थोड़ा वहाँ।
11 ೧೧ ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು.
लेकिन वह बेगाना लबों और अजनबी ज़बान से इन लोगों से कलाम करेगा।
12 ೧೨ ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.
जिनको उसने फ़रमाया, “यह आराम है, तुम थके मान्दों को आराम दो, और यह ताज़गी है;” लेकिन वह सुनने वाले न हुए।
13 ೧೩ ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.
तब ख़ुदावन्द का कलाम उनके लिए हुक्म पर हुक्म, हुक्म पर हुक्म, क़ानून पर क़ानून, क़ानून पर क़ानून, थोड़ा यहाँ, थोड़ा वहाँ होगा; ताकि वह चले जाएँ और पीछे गिरें और सिकश्त खाएँ और दाम में फसें और गिरफ़्तार हों।
14 ೧೪ ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,
इसलिए ऐ ठट्ठा करने वालो, जो येरूशलेम के इन बाशिन्दों पर हुक्मरानी करते हो; ख़ुदावन्द का कलाम सुनो:
15 ೧೫ ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ. (Sheol h7585)
चूँकि तुम कहा करते हो, कि “हम ने मौत से 'अहद बाँधा, और पाताल से पैमान कर लिया है; जब सज़ा का सैलाब आएगा तो हम तक नहीं पहुँचेगा, क्यूँकि हम ने झूठ को अपनी पनाहगाह बनाया है और दरोग़गोई की आड़ में छिप गए हैं;” (Sheol h7585)
16 ೧೬ ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
इसलिए ख़ुदावन्द ख़ुदा यूँ फ़रमाता है देखो मैं सिय्यून में बुनियाद के लिए एक पत्थर रख्खूँगा, आज़मूदा पत्थर मुहकम बुनियाद के लिए कोने के सिरे का क़ीमती पत्थर: जो कोई ईमान लाता है क़ाईम रहेगा।
17 ೧೭ ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.
और मैं 'अदालत को सूत, सदाक़त को साहूल बनाऊँगा; और ओले झूठ की पनाहगाह को साफ़ कर देंगे, और पानी छिपने के मकान पर फैल जायेगा।
18 ೧೮ ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು. (Sheol h7585)
और तुम्हारा 'अहद जो मौत से हुआ मन्सूख़ हो जाएगा और तुम्हारा पैमान जो पाताल से हुआ क़ाईम न रहेगा; जब सज़ा का सैलाब आएगा, तो तुम को पामाल करेगा। (Sheol h7585)
19 ೧೯ ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು.
और गुज़रते वक़्त तुम को बहा ले जाएगा सुबह और शब — ओ — रोज़ आएगा बल्कि उसका ज़िक्र सुनना भी ख़ौफ़नाक होगा।
20 ೨೦ ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.”
क्यूँकि पलंग ऐसा छोटा है कि आदमी उस पर दराज़ नहीं हो सकता; और लिहाफ़ ऐसा तंग है कि वह अपने आपको उसमें लपेट नहीं सकता।
21 ೨೧ ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.
क्यूँकि ख़ुदावन्द उठेगा जैसा कोह — ए — पराज़ीम में, और वह ग़ज़बनाक होगा जैसा जिबा'ऊन की वादी में; ताकि अपना काम बल्कि अपना 'अजीब काम करे और अपना काम, हाँ अपना अनोखा, काम पूरा करे।
22 ೨೨ ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.
इसलिए अब तुम ठठ्ठा न करो, ऐसा न हो कि तुम्हारे बंद सख़्त हो जाएं क्यूँकि मैंने ख़ुदावन्द रब्ब — उल — अफ़्वाज से सुना है कि उसने कामिल और मुसमम्म इरादा किया है कि सारी सर ज़मीन को तबाह करे।
23 ೨೩ ನನ್ನ ಧ್ವನಿಯನ್ನು ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
कान लगा कर मेरी आवाज़ सुनो, सुनने वाले होकर मेरी बात पर दिल लगाओ।
24 ೨೪ ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ?
क्या किसान बोने के लिए हर रोज़ हल चलाया करता है? क्या वह हर वक़्त अपनी ज़मीन को खोदता और उसके ढेले फोड़ा करता है?
25 ೨೫ ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ, ಗೋದಿಯನ್ನು ಸಾಲು ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ?
जब उसको हमवार कर चुका, तो क्या वह अजवाइन को नहीं छांटता, और ज़ीरे को डाल नहीं देता, और गेहूँ को कतारों में नहीं बोता, और जौ को उसके मु'अय्यन मकान में, और कठिया गेहूँ को उसकी ख़ास क्यारी में नहीं बोता?
26 ೨೬ ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.
क्यूँकि उसका ख़ुदा उसको तरबियत करके उसे सिखाता है।
27 ೨೭ ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ.
कि अजवाइन को दावने के हेंगे से नहीं दावते, और ज़ीरे के ऊपर गाड़ी के पहिये नहीं घुमाते; बल्कि अजवाइन को लाठी से झाड़ते है और ज़ीरे को छड़ी से।
28 ೨೮ ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.
रोटी के ग़ल्ले पर दाँय चलाता है, लेकिन वह हमेशा उसे कूटता नहीं रहता; और अपनी गाड़ी के पहिये और घोड़ों को उस पर हमेशा फिराता नहीं उसे सरासर नहीं कुचलेगा।
29 ೨೯ ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.
यह भी रब्ब — उल — अफ़वाज से मुक़र्रर हुआ है, जिसकी मसलहत 'अजीब और दानाई 'अज़ीम है।

< ಯೆಶಾಯನು 28 >