< ಯೆಶಾಯನು 29 >

1 ಅಯ್ಯೋ, ಅರೀಯೇಲೇ, ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ.
Woe to you, O Ariel, the city of Ariel where David camped! Year upon year let your festivals recur.
2 ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು; ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.
And I will constrain Ariel, and there will be mourning and lamentation; she will be like an altar hearth before Me.
3 ನಾನು ನಿನ್ನ ಸುತ್ತಲೂ ದಂಡಿಳಿಸಿ, ನಿನಗೆ ವಿರುದ್ಧವಾಗಿ ಕೋಟೆಗಳನ್ನು ಕಟ್ಟಿ, ದಿಬ್ಬಹಾಕಿ ನಿನ್ನನ್ನು ಮುತ್ತುವೆನು.
I will camp in a circle around you; I will besiege you with towers and set up siege works against you.
4 ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು, ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವುದು, ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.
You will be brought low, you will speak from the ground, and out of the dust your words will be muffled. Your voice will be like a spirit from the ground; your speech will whisper out of the dust.
5 ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.
But your many foes will be like fine dust, the multitude of the ruthless like blowing chaff. Then suddenly, in an instant,
6 ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.
you will be visited by the LORD of Hosts with thunder and earthquake and loud noise, with windstorm and tempest and consuming flame of fire.
7 ಅರೀಯೇಲಿನ ಮೇಲೆ ಹೋರಾಡಿ, ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ, ಬಾಧಿಸುವ ಸಕಲ ಜನಾಂಗಗಳ ಗುಂಪು, ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ ಮಾಯವಾಗುವುದು.
All the many nations going out to battle against Ariel— even all who war against her, laying siege and attacking her— will be like a dream, like a vision in the night,
8 ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತಾಗ ಅವನ ಹೊಟ್ಟೆ ಬರಿದಾಗಿಯೇ ಇರುವುದು. ಬಾಯಾರಿದವನು ಸ್ವಪ್ನದಲ್ಲಿ ಇಗೋ ನೀರು ಕುಡಿಯುತ್ತಿದ್ದೇನೆ ಎಂದುಕೊಂಡಂತಾಗುವುದು; ನಿದ್ರೆಯಿಂದ ಎಚ್ಚೆತ್ತಾಗ ಬಲಹೀನನಾಗಿದ್ದು, ಬಳಲಿ ನೀರನ್ನು ಬಯಸುತ್ತಾ ಬಾಯಾರಿಕೆಯಿಂದ ಇರುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ಜನಾಂಗಗಳಿಗೂ ಇದೇ ಗತಿಯಾಗುವುದು.
as when a hungry man dreams he is eating, then awakens still hungry; as when a thirsty man dreams he is drinking, then awakens faint and parched. So will it be for all the many nations who go to battle against Mount Zion.
9 ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.
Stop and be astonished; blind yourselves and be sightless; be drunk, but not with wine; stagger, but not from strong drink.
10 ೧೦ ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
For the LORD has poured out on you a spirit of deep sleep. He has shut your eyes, O prophets; He has covered your heads, O seers.
11 ೧೧ ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಲ್ಲವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ಮುದ್ರೆ ಹಾಕಿದೆಯಲ್ಲಾ, ಆಗುವುದಿಲ್ಲ” ಎಂದು ಹೇಳುವನು.
And the entire vision will be to you like the words sealed in a scroll. If it is handed to someone to read, he will say, “I cannot, because it is sealed.”
12 ೧೨ ಅಕ್ಷರವಿಲ್ಲದವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ನನಗೆ ಓದಲು ಬರುವುದಿಲ್ಲ” ಎಂದು ಹೇಳುವನು.
Or if the scroll is handed to one unable to read, he will say, “I cannot read.”
13 ೧೩ ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
Therefore the Lord said: “These people draw near to Me with their mouths and honor Me with their lips, but their hearts are far from Me. Their worship of Me is but rules taught by men.
14 ೧೪ ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.
Therefore I will again confound these people with wonder upon wonder. The wisdom of the wise will vanish, and the intelligence of the intelligent will be hidden.”
15 ೧೫ ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!
Woe to those who dig deep to hide their plans from the LORD. In darkness they do their works and say, “Who sees us, and who will know?”
16 ೧೬ ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು. ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, “ಆತನು ಕೆಲಸ ಮಾಡಲಿಲ್ಲ” ಎಂದು ಹೇಳುವುದೋ? ಇಲ್ಲವೇ, ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, “ಆತನಿಗೆ ವಿವೇಕವಿಲ್ಲ” ಎಂದು ಹೇಳುವುದೋ?
You have turned things upside down, as if the potter were regarded as clay. Shall what is formed say to him who formed it, “He did not make me”? Can the pottery say of the potter, “He has no understanding”?
17 ೧೭ ಇನ್ನು ಸ್ವಲ್ಪ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು.
In a very short time, will not Lebanon become an orchard, and the orchard seem like a forest?
18 ೧೮ ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.
On that day the deaf will hear the words of the scroll, and out of the deep darkness the eyes of the blind will see.
19 ೧೯ ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.
The humble will increase their joy in the LORD, and the poor among men will rejoice in the Holy One of Israel.
20 ೨೦ ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.
For the ruthless will vanish, the mockers will disappear, and all who look for evil will be cut down—
21 ೨೧ ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.
those who indict a man with a word, who ensnare the mediator at the gate, and who with false charges deprive the innocent of justice.
22 ೨೨ ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ.
Therefore the LORD who redeemed Abraham says of the house of Jacob: “No longer will Jacob be ashamed and no more will his face grow pale.
23 ೨೩ ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.
For when he sees his children around him, the work of My hands, they will honor My name, they will sanctify the Holy One of Jacob, and they will stand in awe of the God of Israel.
24 ೨೪ ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು” ಎಂದು ಹೇಳುತ್ತಾನೆ.
Then the wayward in spirit will come to understanding, and those who grumble will accept instruction.”

< ಯೆಶಾಯನು 29 >