< ಯೆಶಾಯನು 3 >
1 ೧ ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.
Budur, Sahibimiz, Ordular Rəbbi Yerusəlimdən və Yəhudadan hər bir yardımı, köməyi, Bütün çörək, su yardımını kəsəcək.
2 ೨ ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,
İgidlərlə cəngavərləri, Hakimlərlə peyğəmbərləri, Falçılarla ağsaqqalları,
3 ೩ ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು.
Əllibaşılarla adlı-sanlı adamları, məsləhətçiləri, Mahir sehrbazlarla cadugərləri aradan qaldıracaq.
4 ೪ ನಾನು, “ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇಮಿಸುವೆನು, ಬಾಲಕರು ಅದನ್ನು ಆಳುವರು.
Uşaqları onların üzərinə başçı qoyacağam, Qoy körpələr onlara hökm etsin.
5 ೫ ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು, ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು.
İnsan insanla, qonşu qonşusu ilə, Cavan yaşlı ilə, adi adam nüfuzlu insanla Həyasızcasına rəftar edəcək.
6 ೬ ಆ ದಿನದಲ್ಲಿ ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು, ‘ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು. ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು ಅಣ್ಣನು ದೇಶದ ನಿರರ್ಥಕ ವ್ರಣವೈದ್ಯನಾಗುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ನಿರಾಕರಿಸುವನು.
Ailədə qardaş qardaşa sarılıb deyəcək: «Sənin heç olmasa əyninə geyməyə paltarın var. Sən başçımız ol, Qoy bu xarabalıqlar sənin əlinin altında olsun!»
7 ೭ ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ, ‘ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ: ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ’” ಎಂದು ಹೇಳುವನು.
O vaxt bu adam uca səslə söyləyəcək: «Mən yaralarınızı sarımağı bacarmaram, Çünki evimdə nə yemək, nə də paltar var, Məni xalqın başçısı qoymayın».
8 ೮ ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?
Yerusəlim sarsıldı, Yəhuda dağıldı, Çünki sözləri və əməlləri Rəbbə qarşı oldu, Onun əzəmətli hüzuru kimsə tərəfindən sayılmadı.
9 ೯ ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.
Sifətlərinin ifadəsi onlara qarşı şəhadət edir, Günahları haqda Sodomdakı kimi açıq danışırlar, Bunu gizlətmirlər. Vay onların halına! Axı bu bəlanı başlarına özləri gətirdi.
10 ೧೦ ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.
Saleh adamlara söyləyin ki, Onlara yaxşılıq ediləcək, Çünki onlar xeyirxahlıqlarının bəhrəsini yeyəcək.
11 ೧೧ ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.
Pis adamların vay halına! Çünki onlara pislik olunacaq, Elədikləri əməlləri qarşılarına çıxacaq.
12 ೧೨ ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.
Uşaqlar xalqıma zülm edir, Qadınlar üzərimizdə hökm sürür! Ey xalqım, sənə yol göstərənlər Səni azdırır, yolunu dolaşdırırlar!
13 ೧೩ ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ.
Rəbb məhkəməsini qurmaq üçün qalxır, Xalqları mühakimə etmək üçün durur.
14 ೧೪ ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
Rəbb xalqının rəhbərlərini, Başçılarını məhkəməyə gətirir: «Sizsiniz üzüm bağını yeyib-dağıdan, Kasıbların malı ilə evlərinizi dolduran.
15 ೧೫ ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.
Nə haqla xalqıma zülm edib Yoxsullara əzab verirsiniz?» Bunu Ordular Rəbbi Xudavənd bəyan edir.
16 ೧೬ ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ,
Rəbb deyir: Madam ki Sion qızları çox təkəbbürlüdür, Boylana-boylana gəzir, göz-qaş oynadır, Addımlarını asta-asta atırlar, Ayaqlarındakı xalxalları cingildədib yeriyirlər,
17 ೧೭ ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.
Buna görə də Xudavənd Sion qızlarının başlarına qotur salacaq. Ayıb yerlərini açıb göstərəcək.
18 ೧೮ ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,
O gün Xudavənd onların bəzəklərini – Topuqlara taxılan bilərziklərini, Araqçınlarını, aypara şəkilli boyunbağılarını,
19 ೧೯ ಜುಮುಕಿ, ಬಳೆ, ಶಿರವಸ್ತ್ರ,
Sırğalarını, qolbaqlarını, örpəklərini,
20 ೨೦ ಮುಂಡಾಸು, ಕಾಲಗೆಜ್ಜೆ, ಡಾಬು, ಗಂಧದ ಭರಣಿ, ತೋಳಬಂಧಿ,
Tac şəkilli başlıqlarını, Bazubəndlərini, qurşaqlarını, Ətirlə dolu mücrülərini, Tilsimlənmiş bəzək əşyalarını,
21 ೨೧ ಮುದ್ರೆ ಉಂಗುರ, ಮೂಗುತಿ,
Üzüklərini, burun halqalarını,
22 ೨೨ ಹಬ್ಬದ ಉಡುಗೆ-ತೊಡುಗೆ, ಮೇಲಂಗಿ, ಶಾಲು, ಕೈಚೀಲ,
Bayram libaslarını, paltarlarını, Örtüklərini, əl çantalarını,
23 ೨೩ ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ಹೊದಿಕೆ ಈ ಸೊಗಸಾದ ಭೂಷಣಗಳನ್ನೆಲ್ಲಾ ತೆಗೆದುಹಾಕುವನು.
Güzgülərini, nəfis toxunmuş kətan libaslarını, Çalmalarını, duvaqlarını əllərindən alacaq;
24 ೨೪ ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ, ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.
O vaxt gözəl ətir yerinə üfunət, Kəmər əvəzinə ip, Lülə-lülə saç əvəzinə keçəl baş, Bəzəkli paltar əvəzinə çul bürüncək, Gözəllik əvəzinə dağlanma olacaq.
25 ೨೫ ಚೀಯೋನ್ ನಗರಿಯೇ, ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು. ನಿನ್ನ ಶೌರ್ಯವು ಯುದ್ಧದಲ್ಲಿ ಅಡಗಿ ಹೋಗುವುದು.
Kişiləriniz qılıncla, İgidləriniz döyüşdə məhv olacaq.
26 ೨೬ ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.
Yerusəlimin darvazaları Nalə çəkib yas tutacaq, Bu şəhərsə kimsəsiz qadın tək Quru yerdə oturacaq.