< ಯೆಶಾಯನು 30 >
1 ೧ ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
১সদাপ্রভু বলছেন, “ধিক সেই বিদ্রোহী সন্তানেরা।” “তারা পরিকল্পনা করে কিন্তু আমার থেকে না। তারা অন্য জাতির সঙ্গে বন্ধুত্ব স্থাপন করে কিন্তু তারা আমার আত্মার নির্দেশে চলে না। এই ভাবে তারা পাপের সঙ্গে পাপ যোগ করে।
2 ೨ ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.
২তারা আমার নির্দেশ না নিয়ে মিশরে যায়; তারা সাহায্যের জন্য ফরৌণের আশ্রয় খোঁজে আর মিশরের ছায়ায় আশ্রয় নিতে পারে।
3 ೩ ಆದುದರಿಂದ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯು, ಐಗುಪ್ತವನ್ನು ಆಶ್ರಯಿಸುವುದರಿಂದ ಅವಮಾನವು ಉಂಟಾಗುವುದು.
৩এই জন্য ফরৌণের পরাক্রমে তোমরা লজ্জা পাবে এবং মিশরের ছায়াতে আশ্রয় নেওয়া তোমার অপমান হবে।
4 ೪ ಆ ಫರೋಹನ ಪ್ರಧಾನರು ಚೋವನಿನಲ್ಲಿದ್ದರೂ, ಅವನ ದೂತರು ಹಾನೇಸಿಗೆ ಬಂದಿದ್ದಾರೆ.
৪যদিও সোয়নে তাদের নেতা আছে আর তাদের দূতেরা হানেষে পৌঁছেছে,
5 ೫ ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ, ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.”
৫তারা প্রত্যেকে লজ্জিত হবে, কারণ সেই জাতি তাদের কোনো উপকারে আসবে না। তারা সাহায্য বা সুবিধা কিছুই দিতে পারবে না; বরং লজ্জা ও অসম্মান।”
6 ೬ ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.
৬দক্ষিণের পশুদের বিষয়ে ভাববাণী। কষ্ট ও দুর্দশাপূর্ণ দেশের সিংহ ও সিংহী, বিষাক্ত সাপ ও উড়ন্ত বিষাক্ত সাপের দেশের মধ্যে দিয়ে যায়। তারা তাদের ধন-সম্পদ গাধার পিঠে করে আর তাদের দামী জিনিস উটের পিঠে করে সেই জাতির কাছে বয়ে নিয়ে যায় যারা কোনো উপকার করতে পারবে না।
7 ೭ ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ; ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.
৭মিশরের সাহায্য অসার, সেইজন্য আমি সেই জাতির নাম রেখেছি রহব, যে চুপ করে বসে থাকে।
8 ೮ ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು.
৮এখন যাও, এই কথা একটা ফলকে ও একটা বইয়ে লিখে রাখ, যেন যে দিন আসছে তার জন্য সাক্ষ্য হিসাবে সংরক্ষিত থাকে।
9 ೯ ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.
৯এই সন্তানরা বিদ্রোহী ও মিথ্যাবাদী; সেই সন্তানরা যারা সদাপ্রভুর শিক্ষা শুনতে রাজি নয়।
10 ೧೦ ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.
১০তারা দর্শকদের বলে, “তোমরা দেখো না,” আর ভাববাদীদের বলে, “তোমরা যা সত্যি তা আমাদের আর বোলো না। আমাদের কাছে সুখের কথা বল; ছলনার বিষয়ে ভবিষ্যৎবাণী বল।
11 ೧೧ ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.
১১পথ ছাড়, রাস্তা থেকে সরে যাও। আমাদের কাছ থেকে ইস্রায়েলের সেই পবিত্রজনকে দূর কর।”
12 ೧೨ ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ,
১২সেইজন্য ইস্রায়েলের সেই পবিত্রজন এই কথা বলছেন, “কারণ তোমরা আমার বাক্য অগ্রাহ্য করেছ, আর মিথ্যা ও অত্যাচার করবার উপর নির্ভর করছ।
13 ೧೩ ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”
১৩সেইজন্য এই পাপ তোমাদের জন্য একটা উঁচু, ফাটল ধরা ও ফুলা দেয়ালের মত হয়ে দাঁড়াবে, যা হঠাৎ এক মুহূর্তের মধ্যে ভেঙে পড়বে।
14 ೧೪ ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.
১৪তা মাটির পাত্রের মত টুকরো টুকরো হয়ে ভেঙে যাবে যে, সেগুলোর মধ্যে একটা টুকরোও পাওয়া যাবে না যা দিয়ে চুলা থেকে কয়লা বা কুয়ো থেকে জল তোলা যায়।”
15 ೧೫ ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.
১৫কারণ প্রভু সদাপ্রভু, ইস্রায়েলের সেই পবিত্রজন এই কথা বলছেন, “পাপ থেকে ফিরে আমাতে শান্ত হলে তোমরা উদ্ধার পাবে, আর স্থির হয়ে বিশ্বাস করলে শক্তি পাবে।” কিন্তু তোমরা তাতে রাজি হলে না।
16 ೧೬ ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.
১৬তোমরা বললে, “না, আমরা ঘোড়ায় চড়ে পালিয়ে যাব।” তাই তোমাদের পালাতে হবে এবং, “যে ঘোড়া খুব দ্রুত যায় তাতে চড়ে আমরা চলে যাব।” কাজেই যারা তোমাদের তাড়া করবে তারা দ্রুত আসবে।
17 ೧೭ ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”
১৭এক জনের ভয়ে তোমাদের হাজার জন পালাবে আর পাঁচজনের ভয়ে তোমরা সবাই পালিয়ে যাবে; তাতে তোমাদের সৈন্যদলে পাহাড়ের ওপরের পতাকার খুঁটি ছাড়া আর কিছুই অবশিষ্ট থাকবে না।
18 ೧೮ ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
১৮তবুও সদাপ্রভু তোমাদের উপর দয়া করবার জন্য অপেক্ষা করছেন; তোমাদের দয়া করার জন্য তিনি উন্নত থাকবেন। কারণ সদাপ্রভু ন্যায়বিচারের ঈশ্বর; যারা তাঁর জন্য অপেক্ষা করে তারা ধন্য।
19 ೧೯ ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.
১৯কারণ হে সিয়োনের লোকেরা, তোমরা যারা যিরূশালেমে বাস কর, তোমাদের আর কাঁদতে হবে না। সাহায্যের জন্য কাঁদলে তিনি নিশ্চয়ই তোমাদের দয়া করবেন। যখন তিনি শুনবেন, তিনি উত্তর দেবেন।
20 ೨೦ ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ.
২০যদিও প্রভু তোমাদের সংকটের খাবার আর কষ্টের জল দেন, তবুও তোমাদের শিক্ষক প্রভু আর লুকিয়ে থাকবেন না; কিন্তু তোমরা নিজেদের চোখেই তাঁকে দেখতে পাবে।
21 ೨೧ ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.
২১যখন তোমরা ডানে বা বাঁয়ে ফের, তোমার কান তোমার পিছন থেকে একটা কথা শুনতে পাবে, “এটাই পথ; তোমরা এই পথেই চল।”
22 ೨೨ ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.
২২তোমরা তোমাদের রূপা ও সোনা দিয়ে মুড়ানো মুর্ত্তিগুলো অশুচি করবে; তুমি সেগুলো অশুচি জিনিসের মত ফেলে দেবে। তুমি তাদের বলবে, “এখান থেকে বেরিয়ে যাও।”
23 ೨೩ ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.
২৩তিনি তোমাদের বৃষ্টি দেবেন যাতে তোমরা মাটিতে বীজ বুনতে পার এবং ভূমি থেকে প্রচুর পরিমাণে রুটি দেবেন এবং ফসল প্রচুর পরিমাণে হবে। সেই দিন তোমাদের পশুপালগুলো অনেক বড় মাঠে চরবে।
24 ೨೪ ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು.
২৪তোমাদের চাষের গরু ও গাধা কুলা ও চালুনিতে ঝাড়া ভালো খাবার খাবে।
25 ೨೫ ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.
২৫সেই মহাহত্যার দিনের দুর্গগুলো পড়ে যাবে তখন সমস্ত পাহাড়-পর্বতের গা বেয়ে জলের স্রোত বয়ে যাবে।
26 ೨೬ ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.
২৬যেদিন সদাপ্রভু তাঁর লোকদের আঘাত-পাওয়া জায়গা বেঁধে দেবেন ও তাঁর করা ক্ষত ভাল করবেন সেই দিন চাঁদের আলো সূর্য্যের মত হবে এবং সূর্য্যের আলো সাতগুণ উজ্জ্বল হবে, সাত দিনের সূর্যোলোকের মত।
27 ೨೭ ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.
২৭দেখ, সদাপ্রভু জ্বলন্ত ক্রোধ ও গাঢ় ধোঁয়ার মেঘের সঙ্গে দূর থেকে আসছেন; তাঁর মুখ ভীষণ ক্রোধে পূর্ণ আর তাঁর জিভ্ গ্রাসকারী আগুনের মত।
28 ೨೮ ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.
২৮তাঁর নিঃশ্বাস যেন বেগে আসা ভীষণ জলের স্রোত যা মানুষের গলা পর্যন্ত ওঠে। তিনি সব জাতিকে ধ্বংসের চালুনিতে চালবেন এবং সব জাতির লোকদের মুখে এমন বল্গা দেবেন যা তাদের ধ্বংসের দিকে টেনে নিয়ে যাবে।
29 ೨೯ ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.
২৯পবিত্র উৎসব পালনের রাতের মত তোমরা গান করবে। তোমাদের হৃদয়ের আনন্দ তার মত হবে যেমন একজন লোক বাঁশী বাজিয়ে সদাপ্রভুর পর্বতে ইস্রায়েলের পাহাড়ে যায় তেমনি হবে।
30 ೩೦ ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.
৩০সদাপ্রভু ভীষণ ক্রোধ, গ্রাসকারী আগুন, ভীষণ ঝড়-বৃষ্টি আর শিল পড়বার মধ্যে দিয়ে তাঁর ক্ষমতাপূর্ণ রব লোকদের শোনাবেন আর তাঁর শাস্তির হাত দেখাবেন।
31 ೩೧ ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ನಾಶವಾಗುವರು.
৩১সদাপ্রভুর রবে অশূর ভেঙে পড়বে; তাঁর লাঠি দিয়ে তিনি তাদের আঘাত করবেন।
32 ೩೨ ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು.
৩২সদাপ্রভু তাদের সঙ্গে যুদ্ধ করার দিন যখন তাঁর নিযুক্ত লাঠি তাদের উপর আঘাত করবে তখন খঞ্জনি আর বীণা বাজবে, তিনি ওই জাতির সঙ্গে ভীষণ যুদ্ধ করবেন।
33 ೩೩ ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.
৩৩কারণ জ্বলন্ত জায়গা অনেক আগে থেকেই সাজিয়ে রাখা হয়েছে; প্রকৃত পক্ষে তা রাজার জন্য তৈরী করা হয়েছে এবং ঈশ্বর তা গভীর ও চওড়া করেছেন, চিতা আগুন ও প্রচুর কাঠ দিয়ে প্রস্তুত করে রাখা আছে। সদাপ্রভুর নিঃশ্বাস জ্বলন্ত গন্ধকের স্রোতের মত হয়ে তাতে আগুন ধরিয়ে দেবে।