< ಯೆಶಾಯನು 30 >

1 ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
הוֹי בָּנִים סֽוֹרְרִים נְאֻם־יְהֹוָה לַעֲשׂוֹת עֵצָה וְלֹא מִנִּי וְלִנְסֹךְ מַסֵּכָה וְלֹא רוּחִי לְמַעַן סְפוֹת חַטָּאת עַל־חַטָּֽאת׃
2 ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.
הַהֹֽלְכִים לָרֶדֶת מִצְרַיִם וּפִי לֹא שָׁאָלוּ לָעוֹז בְּמָעוֹז פַּרְעֹה וְלַחְסוֹת בְּצֵל מִצְרָֽיִם׃
3 ಆದುದರಿಂದ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯು, ಐಗುಪ್ತವನ್ನು ಆಶ್ರಯಿಸುವುದರಿಂದ ಅವಮಾನವು ಉಂಟಾಗುವುದು.
וְהָיָה לָכֶם מָעוֹז פַּרְעֹה לְבֹשֶׁת וְהֶחָסוּת בְּצֵל־מִצְרַיִם לִכְלִמָּֽה׃
4 ಆ ಫರೋಹನ ಪ್ರಧಾನರು ಚೋವನಿನಲ್ಲಿದ್ದರೂ, ಅವನ ದೂತರು ಹಾನೇಸಿಗೆ ಬಂದಿದ್ದಾರೆ.
כִּֽי־הָיוּ בְצֹעַן שָׂרָיו וּמַלְאָכָיו חָנֵס יַגִּֽיעוּ׃
5 ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ, ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.”
כֹּל הֹבִאישׁ עַל־עַם לֹא־יוֹעִילוּ לָמוֹ לֹא לְעֵזֶר וְלֹא לְהוֹעִיל כִּי לְבֹשֶׁת וְגַם־לְחֶרְפָּֽה׃
6 ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.
מַשָּׂא בַּהֲמוֹת נֶגֶב בְּאֶרֶץ צָרָה וְצוּקָה לָבִיא וָלַיִשׁ מֵהֶם אֶפְעֶה וְשָׂרָף מְעוֹפֵף יִשְׂאוּ עַל־כֶּתֶף עֲיָרִים חֵילֵהֶם וְעַל־דַּבֶּשֶׁת גְּמַלִּים אֽוֹצְרֹתָם עַל־עַם לֹא יוֹעִֽילוּ׃
7 ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ; ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.
וּמִצְרַיִם הֶבֶל וָרִיק יַעְזֹרוּ לָכֵן קָרָאתִי לָזֹאת רַהַב הֵם שָֽׁבֶת׃
8 ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು.
עַתָּה בּוֹא כׇתְבָהּ עַל־לוּחַ אִתָּם וְעַל־סֵפֶר חֻקָּהּ וּתְהִי לְיוֹם אַחֲרוֹן לָעַד עַד־עוֹלָֽם׃
9 ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.
כִּי עַם מְרִי הוּא בָּנִים כֶּחָשִׁים בָּנִים לֹא־אָבוּ שְׁמוֹעַ תּוֹרַת יְהֹוָֽה׃
10 ೧೦ ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.
אֲשֶׁר אָמְרוּ לָרֹאִים לֹא תִרְאוּ וְלַחֹזִים לֹא תֶחֱזוּ־לָנוּ נְכֹחוֹת דַּבְּרוּ־לָנוּ חֲלָקוֹת חֲזוּ מַהֲתַלּֽוֹת׃
11 ೧೧ ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.
סוּרוּ מִנֵּי־דֶרֶךְ הַטּוּ מִנֵּי־אֹרַח הַשְׁבִּיתוּ מִפָּנֵינוּ אֶת־קְדוֹשׁ יִשְׂרָאֵֽל׃
12 ೧೨ ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ,
לָכֵן כֹּה אָמַר קְדוֹשׁ יִשְׂרָאֵל יַעַן מׇאׇסְכֶם בַּדָּבָר הַזֶּה וַֽתִּבְטְחוּ בְּעֹשֶׁק וְנָלוֹז וַתִּֽשָּׁעֲנוּ עָלָֽיו׃
13 ೧೩ ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”
לָכֵן יִהְיֶה לָכֶם הֶעָוֺן הַזֶּה כְּפֶרֶץ נֹפֵל נִבְעֶה בְּחוֹמָה נִשְׂגָּבָה אֲשֶׁר־פִּתְאֹם לְפֶתַע יָבוֹא שִׁבְרָֽהּ׃
14 ೧೪ ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.
וּשְׁבָרָהּ כְּשֵׁבֶר נֵבֶל יוֹצְרִים כָּתוּת לֹא יַחְמֹל וְלֹֽא־יִמָּצֵא בִמְכִתָּתוֹ חֶרֶשׂ לַחְתּוֹת אֵשׁ מִיָּקוּד וְלַחְשֹׂף מַיִם מִגֶּֽבֶא׃
15 ೧೫ ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.
כִּי כֹֽה־אָמַר אֲדֹנָי יֱהֹוִה קְדוֹשׁ יִשְׂרָאֵל בְּשׁוּבָה וָנַחַת תִּוָּשֵׁעוּן בְּהַשְׁקֵט וּבְבִטְחָה תִּֽהְיֶה גְּבֽוּרַתְכֶם וְלֹא אֲבִיתֶֽם׃
16 ೧೬ ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.
וַתֹּאמְרוּ לֹא־כִי עַל־סוּס נָנוּס עַל־כֵּן תְּנוּסוּן וְעַל־קַל נִרְכָּב עַל־כֵּן יִקַּלּוּ רֹדְפֵיכֶֽם׃
17 ೧೭ ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”
אֶלֶף אֶחָד מִפְּנֵי גַּעֲרַת אֶחָד מִפְּנֵי גַּעֲרַת חֲמִשָּׁה תָּנֻסוּ עַד אִם־נוֹתַרְתֶּם כַּתֹּרֶן עַל־רֹאשׁ הָהָר וְכַנֵּס עַל־הַגִּבְעָֽה׃
18 ೧೮ ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
וְלָכֵן יְחַכֶּה יְהֹוָה לַחֲנַנְכֶם וְלָכֵן יָרוּם לְרַחֶמְכֶם כִּֽי־אֱלֹהֵי מִשְׁפָּט יְהֹוָה אַשְׁרֵי כׇּל־חוֹכֵי לֽוֹ׃
19 ೧೯ ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.
כִּי־עַם בְּצִיּוֹן יֵשֵׁב בִּירוּשָׁלָ͏ִם בָּכוֹ לֹֽא־תִבְכֶּה חָנוֹן יׇחְנְךָ לְקוֹל זַעֲקֶךָ כְּשׇׁמְעָתוֹ עָנָֽךְ׃
20 ೨೦ ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ.
וְנָתַן לָכֶם אֲדֹנָי לֶחֶם צָר וּמַיִם לָחַץ וְלֹא־יִכָּנֵף עוֹד מוֹרֶיךָ וְהָיוּ עֵינֶיךָ רֹאוֹת אֶת־מוֹרֶֽיךָ׃
21 ೨೧ ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.
וְאׇזְנֶיךָ תִּשְׁמַעְנָה דָבָר מֵאַחֲרֶיךָ לֵאמֹר זֶה הַדֶּרֶךְ לְכוּ בוֹ כִּי תַאֲמִינוּ וְכִי תַשְׂמְאִֽילוּ׃
22 ೨೨ ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.
וְטִמֵּאתֶם אֶת־צִפּוּי פְּסִילֵי כַסְפֶּךָ וְאֶת־אֲפֻדַּת מַסֵּכַת זְהָבֶךָ תִּזְרֵם כְּמוֹ דָוָה צֵא תֹּאמַר לֽוֹ׃
23 ೨೩ ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.
וְנָתַן מְטַר זַרְעֲךָ אֲשֶׁר־תִּזְרַע אֶת־הָאֲדָמָה וְלֶחֶם תְּבוּאַת הָאֲדָמָה וְהָיָה דָשֵׁן וְשָׁמֵן יִרְעֶה מִקְנֶיךָ בַּיּוֹם הַהוּא כַּר נִרְחָֽב׃
24 ೨೪ ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು.
וְהָאֲלָפִים וְהָעֲיָרִים עֹֽבְדֵי הָאֲדָמָה בְּלִיל חָמִיץ יֹאכֵלוּ אֲשֶׁר־זֹרֶה בָרַחַת וּבַמִּזְרֶֽה׃
25 ೨೫ ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.
וְהָיָה ׀ עַל־כׇּל־הַר גָּבֹהַּ וְעַל כׇּל־גִּבְעָה נִשָּׂאָה פְּלָגִים יִבְלֵי־מָיִם בְּיוֹם הֶרֶג רָב בִּנְפֹל מִגְדָּלִֽים׃
26 ೨೬ ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.
וְהָיָה אוֹר־הַלְּבָנָה כְּאוֹר הַחַמָּה וְאוֹר הַֽחַמָּה יִֽהְיֶה שִׁבְעָתַיִם כְּאוֹר שִׁבְעַת הַיָּמִים בְּיוֹם חֲבֹשׁ יְהֹוָה אֶת־שֶׁבֶר עַמּוֹ וּמַחַץ מַכָּתוֹ יִרְפָּֽא׃
27 ೨೭ ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.
הִנֵּה שֵׁם־יְהֹוָה בָּא מִמֶּרְחָק בֹּעֵר אַפּוֹ וְכֹבֶד מַשָּׂאָהֿ שְׂפָתָיו מָלְאוּ זַעַם וּלְשׁוֹנוֹ כְּאֵשׁ אֹכָֽלֶת׃
28 ೨೮ ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.
וְרוּחוֹ כְּנַחַל שׁוֹטֵף עַד־צַוָּאר יֶחֱצֶה לַהֲנָפָה גוֹיִם בְּנָפַת שָׁוְא וְרֶסֶן מַתְעֶה עַל לְחָיֵי עַמִּֽים׃
29 ೨೯ ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.
הַשִּׁיר יִהְיֶה לָכֶם כְּלֵיל הִתְקַדֶּשׁ־חָג וְשִׂמְחַת לֵבָב כַּהוֹלֵךְ בֶּחָלִיל לָבוֹא בְהַר־יְהֹוָה אֶל־צוּר יִשְׂרָאֵֽל׃
30 ೩೦ ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.
וְהִשְׁמִיעַ יְהֹוָה אֶת־הוֹד קוֹלוֹ וְנַחַת זְרוֹעוֹ יַרְאֶה בְּזַעַף אַף וְלַהַב אֵשׁ אוֹכֵלָה נֶפֶץ וָזֶרֶם וְאֶבֶן בָּרָֽד׃
31 ೩೧ ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ನಾಶವಾಗುವರು.
כִּֽי־מִקּוֹל יְהֹוָה יֵחַת אַשּׁוּר בַּשֵּׁבֶט יַכֶּֽה׃
32 ೩೨ ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು.
וְהָיָה כֹּל מַֽעֲבַר מַטֵּה מֽוּסָדָהֿ אֲשֶׁר יָנִיחַ יְהֹוָה עָלָיו בְּתֻפִּים וּבְכִנֹּרוֹת וּבְמִלְחֲמוֹת תְּנוּפָה נִלְחַם־[בָּֽם] (בה)׃
33 ೩೩ ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.
כִּֽי־עָרוּךְ מֵֽאֶתְמוּל תׇּפְתֶּה גַּם־[הִיא] (הוא) לַמֶּלֶךְ הוּכָן הֶעְמִיק הִרְחִב מְדֻרָתָהּ אֵשׁ וְעֵצִים הַרְבֵּה נִשְׁמַת יְהֹוָה כְּנַחַל גׇּפְרִית בֹּעֲרָה בָּֽהּ׃

< ಯೆಶಾಯನು 30 >