< ಯೆಶಾಯನು 31 >
1 ೧ ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.
Warra gargaarsa barbaacha gara Gibxitti gad buʼaniif, warra fardeen abdataniif warra gaariiwwan isaaniitii fi jabina abbootii fardeen isaanii amanatanii garuu gara Qulqullicha Israaʼel hin ilaalle yookaan gargaarsa Waaqayyoo hin barbaanneef wayyoo.
2 ೨ ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
Taʼus inni ogeessa; balaas fiduu dandaʼa; inni waan jedhe irraa duubatti hin deebiʼu. Inni mana hamootaatti, warra namoota hammina hojjetan gargaaraniitti ni kaʼa.
3 ೩ ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
Warri Gibxi namootuma malee Waaqa miti; fardeen isaaniis foonuma malee hafuura miti. Yeroo Waaqayyo harka isaa diriirfatutti, inni gargaaru ni gufata; inni gargaaramus ni kufa; isaan lachuu walii wajjin badu.
4 ೪ ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.
Waaqayyo akkana naan jedha: “Akkuma leenci, leenci guddaan tokko waan qabate irratti aadu sana, tuunni tiksootaa guutuun isatti wal waammatan iyyuu, inni iyya isaanii hin sodaatu; yookaan waca isaaniitiin hin raafamu; akkasuma Waaqayyoon Waan Hunda Dandaʼu Tulluu Xiyoon irratti waraana banuuf gad buʼa.
5 ೫ ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು. ಅದನ್ನು ರಕ್ಷಿಸಿ ಕಾಯುವನು ಮತ್ತು ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
Akkuma simbirroon mataa namaa irra naannoftu sana Waaqayyoon Waan Hunda Dandaʼu Yerusaalemiif gaachana taʼa; inni gaachana taʼeefii ishee baraara; ishee bira darba; ishee oolchas.”
6 ೬ “ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.
Yaa saba Israaʼel, gara Isa akka malee itti finciltan sanaatti deebiʼaa.
7 ೭ ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.
Bara sana tokkoon tokkoon keessan waaqota tolfamoo harki keessan cubbamaan sun meetii fi warqee irraa hojjetee ture sana ni gattuutii.
8 ೮ ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.
“Asoor goraadee kan namaa hin taʼiniin kufti; goraadeen nama duʼa hin oollees isaan fixa. Isaan goraadee duraa baqatu; dargaggoonni isaaniis dirqamaan hojii humnaa hojjetu.
9 ೯ ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.
Daʼoon isaanii sababii sodaatiif ni jiga; ajajjoonni isaaniis faajjii waraanaa arganii hollatu” jedha Waaqayyo, inni ibiddi isaa Xiyoon keessa, kan boolli ibidda isaa immoo Yerusaalem keessa jiru sun.