< ಯೆಶಾಯನು 32 >

1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
הֵ֥ן לְצֶ֖דֶק יִמְלָךְ־מֶ֑לֶךְ וּלְשָׂרִ֖ים לְמִשְׁפָּ֥ט יָשֹֽׂרוּ׃
2 ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.
וְהָיָה־אִ֥ישׁ כְּמַֽחֲבֵא־ר֖וּחַ וְסֵ֣תֶר זָ֑רֶם כְּפַלְגֵי־מַ֣יִם בְּצָי֔וֹן כְּצֵ֥ל סֶֽלַע־כָּבֵ֖ד בְּאֶ֥רֶץ עֲיֵפָֽה׃
3 ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.
וְלֹ֥א תִשְׁעֶ֖ינָה עֵינֵ֣י רֹאִ֑ים וְאָזְנֵ֥י שֹׁמְעִ֖ים תִּקְשַֽׁבְנָה׃
4 ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು.
וּלְבַ֥ב נִמְהָרִ֖ים יָבִ֣ין לָדָ֑עַת וּלְשׁ֣וֹן עִלְּגִ֔ים תְּמַהֵ֖ר לְדַבֵּ֥ר צָחֽוֹת׃
5 ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸಿಕೊಳ್ಳನು.
לֹֽא־יִקָּרֵ֥א ע֛וֹד לְנָבָ֖ל נָדִ֑יב וּלְכִילַ֕י לֹ֥א יֵֽאָמֵ֖ר שֽׁוֹעַ׃
6 ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
כִּ֤י נָבָל֙ נְבָלָ֣ה יְדַבֵּ֔ר וְלִבּ֖וֹ יַעֲשֶׂה־אָ֑וֶן לַעֲשׂ֣וֹת חֹ֗נֶף וּלְדַבֵּ֤ר אֶל־יְהוָה֙ תּוֹעָ֔ה לְהָרִיק֙ נֶ֣פֶשׁ רָעֵ֔ב וּמַשְׁקֶ֥ה צָמֵ֖א יַחְסִֽיר׃
7 ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
וְכֵלַ֖י כֵּלָ֣יו רָעִ֑ים ה֚וּא זִמּ֣וֹת יָעָ֔ץ לְחַבֵּ֤ל ענוים בְּאִמְרֵי־שֶׁ֔קֶר וּבְדַבֵּ֥ר אֶבְי֖וֹן מִשְׁפָּֽט׃
8 ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.
וְנָדִ֖יב נְדִיב֣וֹת יָעָ֑ץ וְה֖וּא עַל־נְדִיב֥וֹת יָקֽוּם׃ פ
9 ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ!
נָשִׁים֙ שַֽׁאֲנַנּ֔וֹת קֹ֖מְנָה שְׁמַ֣עְנָה קוֹלִ֑י בָּנוֹת֙ בֹּֽטח֔וֹת הַאְזֵ֖נָּה אִמְרָתִֽי׃
10 ೧೦ ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.
יָמִים֙ עַל־שָׁנָ֔ה תִּרְגַּ֖זְנָה בֹּֽטְח֑וֹת כִּ֚י כָּלָ֣ה בָצִ֔יר אֹ֖סֶף בְּלִ֥י יָבֽוֹא׃
11 ೧೧ ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
חִרְדוּ֙ שַֽׁאֲנַנּ֔וֹת רְגָ֖זָה בֹּֽטְח֑וֹת פְּשֹׁ֣טָֽה וְעֹ֔רָה וַחֲג֖וֹרָה עַל־חֲלָצָֽיִם׃
12 ೧೨ ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಾಗಿ ಎದುರುನೋಡಿರಿ.
עַל־שָׁדַ֖יִם סֹֽפְדִ֑ים עַל־שְׂדֵי־חֶ֕מֶד עַל־גֶּ֖פֶן פֹּרִיָּֽה׃
13 ೧೩ ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.
עַ֚ל אַדְמַ֣ת עַמִּ֔י ק֥וֹץ שָׁמִ֖יר תַּֽעֲלֶ֑ה כִּ֚י עַל־כָּל־בָּתֵּ֣י מָשׂ֔וֹשׂ קִרְיָ֖ה עַלִּיזָֽה׃
14 ೧೪ ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.
כִּֽי־אַרְמ֣וֹן נֻטָּ֔שׁ הֲמ֥וֹן עִ֖יר עֻזָּ֑ב עֹ֣פֶל וָבַ֜חַן הָיָ֨ה בְעַ֤ד מְעָרוֹת֙ עַד־עוֹלָ֔ם מְשׂ֥וֹשׂ פְּרָאִ֖ים מִרְעֵ֥ה עֲדָרִֽים׃
15 ೧೫ ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.
עַד־יֵ֨עָרֶ֥ה עָלֵ֛ינוּ ר֖וּחַ מִמָּר֑וֹם וְהָיָ֤ה מִדְבָּר֙ לַכַּרְמֶ֔ל וכרמל לַיַּ֥עַר יֵחָשֵֽׁב׃
16 ೧೬ ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.
וְשָׁכַ֥ן בַּמִּדְבָּ֖ר מִשְׁפָּ֑ט וּצְדָקָ֖ה בַּכַּרְמֶ֥ל תֵּשֵֽׁב׃
17 ೧೭ ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.
וְהָיָ֛ה מַעֲשֵׂ֥ה הַצְּדָקָ֖ה שָׁל֑וֹם וַֽעֲבֹדַת֙ הַצְּדָקָ֔ה הַשְׁקֵ֥ט וָבֶ֖טַח עַד־עוֹלָֽם׃
18 ೧೮ ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
וְיָשַׁ֥ב עַמִּ֖י בִּנְוֵ֣ה שָׁל֑וֹם וּֽבְמִשְׁכְּנוֹת֙ מִבְטַחִ֔ים וּבִמְנוּחֹ֖ת שַׁאֲנַנּֽוֹת׃
19 ೧೯ ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.
וּבָרַ֖ד בְּרֶ֣דֶת הַיָּ֑עַר וּבַשִּׁפְלָ֖ה תִּשְׁפַּ֥ל הָעִֽיר׃
20 ೨೦ ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ!
אַשְׁרֵיכֶ֕ם זֹרְעֵ֖י עַל־כָּל־מָ֑יִם מְשַׁלְּחֵ֥י רֶֽגֶל־הַשּׁ֖וֹר וְהַחֲמֽוֹר׃ ס

< ಯೆಶಾಯನು 32 >