< ಯೆಶಾಯನು 32 >
1 ೧ ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
ଦେଖ, ଏକ ରାଜା ଧର୍ମାନୁସାରେ ରାଜତ୍ୱ କରିବେ ଓ ଅଧିପତିମାନେ ନ୍ୟାୟାନୁସାରେ ଶାସନ କରିବେ।
2 ೨ ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.
ପୁଣି, ପ୍ରତ୍ୟେକେ ବତାସରୁ ଆଶ୍ରୟ ସ୍ଥାନ ଓ ଝଡ଼ରୁ ଆଶ୍ରୟ, ଶୁଷ୍କ ସ୍ଥାନରେ ଜଳସ୍ରୋତ, ଶ୍ରାନ୍ତିଜନକ ଭୂମିରେ ବୃହତ ଶୈଳର ଛାୟା ସ୍ୱରୂପ ହେବେ।
3 ೩ ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.
ପୁଣି, ଦର୍ଶକମାନଙ୍କ ଚକ୍ଷୁ ଧନ୍ଦଳା ହେବ ନାହିଁ ଓ ଶ୍ରୋତାମାନଙ୍କର କର୍ଣ୍ଣ ମନୋଯୋଗ କରିବ।
4 ೪ ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು.
ଆହୁରି, ଅବିବେଚକର ଚିତ୍ତ ଜ୍ଞାନ ପାଇବ ଓ ତୋତଲାମାନଙ୍କର ଜିହ୍ୱା ସହଜରେ ସ୍ପଷ୍ଟ କଥା କହିବ।
5 ೫ ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸಿಕೊಳ್ಳನು.
ମୂଢ଼ ଲୋକ ମହାତ୍ମା ବୋଲି ଓ ଖଳ ଲୋକ ଉଦାର ବୋଲି ଆଉ ବିଖ୍ୟାତ ହେବ ନାହିଁ।
6 ೬ ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
କାରଣ ପାଷାଣ୍ଡତା ବ୍ୟବହାର କରିବା ପାଇଁ ଓ ସଦାପ୍ରଭୁଙ୍କ ପ୍ରତିକୂଳରେ ଭ୍ରାନ୍ତିର କଥା କହିବା ପାଇଁ, କ୍ଷୁଧିତର ପ୍ରାଣ ଶୂନ୍ୟ କରିବା ପାଇଁ ଓ ତୃଷିତର ଜଳ ବାରଣ କରିବା ପାଇଁ ମୂଢ଼ ଲୋକ ଦୁଷ୍ଟତାର କଥା କହିବ ଓ ତାହାର ହୃଦୟ ଅଧର୍ମ କଳ୍ପନା କରିବ।
7 ೭ ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
ଆହୁରି, ଖଳ ଲୋକର ଉପାୟସବୁ ମନ୍ଦ; ସେ ନମ୍ର ଲୋକକୁ, ଅର୍ଥାତ୍, ଯଥାର୍ଥ କଥା କହିବା ବେଳେ ଦୀନହୀନକୁ ମିଥ୍ୟା କଥା ଦ୍ୱାରା ନାଶ କରିବା ପାଇଁ କୁସଂକଳ୍ପ କଳ୍ପନା କରେ।
8 ೮ ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.
ମାତ୍ର ମହାତ୍ମା ମାହାତ୍ମ୍ୟର ମନ୍ତ୍ରଣା କରେ ଓ ସେ ମାହାତ୍ମ୍ୟର ଚେଷ୍ଟାରେ ସ୍ଥିର ରହିବ।
9 ೯ ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ!
ହେ ସୁଖିନୀ ନାରୀଗଣ, ତୁମ୍ଭେମାନେ ଉଠି ମୋହର ରବ ଶୁଣ, ହେ ନିଶ୍ଚିନ୍ତା କନ୍ୟାଗଣ, ମୋʼ ବାକ୍ୟରେ କର୍ଣ୍ଣପାତ କର।
10 ೧೦ ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.
ହେ ନିଶ୍ଚିନ୍ତା ନାରୀଗଣ, ତୁମ୍ଭେମାନେ ଏକ ବର୍ଷର ଉପରେ କେତେକ ଦିନ ଉଦ୍ବିଗ୍ନା ହେବ; କାରଣ ଦ୍ରାକ୍ଷାଫଳର ଅଭାବ ହେବ, ଫଳ ଅମଳର ସମୟ ଆସିବ ନାହିଁ।
11 ೧೧ ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
ହେ ସୁଖିନୀ ନାରୀଗଣ, ତୁମ୍ଭେମାନେ କମ୍ପିତା ହୁଅ; ହେ ନିଶ୍ଚିନ୍ତାମାନେ, ଉଦ୍ବିଗ୍ନା ହୁଅ; ବସ୍ତ୍ର କାଢ଼ି ବିବସ୍ତ୍ରା ହୁଅ ଓ ତୁମ୍ଭମାନଙ୍କ କଟିଦେଶରେ ଚଟ ବାନ୍ଧ।
12 ೧೨ ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಾಗಿ ಎದುರುನೋಡಿರಿ.
ସେମାନେ ମନୋରମ କ୍ଷେତ୍ର ଓ ଫଳବତୀ ଦ୍ରାକ୍ଷାଲତା ନିମନ୍ତେ ଛାତିରେ ମାରି ହେବେ।
13 ೧೩ ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.
ମୋʼ ଲୋକମାନଙ୍କ ଭୂମି କଣ୍ଟକ ଓ କାନକୋଳି ବୃକ୍ଷମୟ ହେବ; ହଁ, ଉଲ୍ଲାସପ୍ରିୟ ନଗରର ଯାବତୀୟ ଆନନ୍ଦ-ଗୃହ ତାହା ହିଁ ହେବ;
14 ೧೪ ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.
କାରଣ, ରାଜପୁରୀ ପରିତ୍ୟକ୍ତ ହେବ ଓ ଜନପୂର୍ଣ୍ଣ ନଗର ଜନଶୂନ୍ୟ ହେବ; ଗିରି ଓ ପ୍ରହରୀ-ଦୁର୍ଗ ଚିରକାଳ ଗୁହାମୟ, ବନଗର୍ଦ୍ଦଭମାନଙ୍କର ଉଲ୍ଲାସ ଭୂମି ଓ ପଶୁପଲର ଚରାସ୍ଥାନ ହେବ;
15 ೧೫ ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.
ଶେଷରେ ଊର୍ଦ୍ଧ୍ୱରୁ ଆମ୍ଭମାନଙ୍କ ଉପରେ ଆତ୍ମା ଢଳା ଗଲେ ପ୍ରାନ୍ତର ଉର୍ବରା କ୍ଷେତ୍ର ହେବ ଓ ଉର୍ବରା କ୍ଷେତ୍ର ଅରଣ୍ୟ ବୋଲି ଗଣାଯିବ।
16 ೧೬ ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.
ସେତେବେଳେ ପ୍ରାନ୍ତରରେ ନ୍ୟାୟବିଚାର ବାସ କରିବ ଓ ଉର୍ବରା କ୍ଷେତ୍ରରେ ଧାର୍ମିକତା ବସତି କରିବ।
17 ೧೭ ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.
ପୁଣି, ଧାର୍ମିକତାର କାର୍ଯ୍ୟ ଶାନ୍ତିମୟ ହେବ; ଆଉ, ଧାର୍ମିକତାର ଫଳ ନିତ୍ୟ ସୁସ୍ଥିରତା ଓ ନିର୍ଭୟତା ହେବ।
18 ೧೮ ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
ପୁଣି, ମୋହର ଲୋକମାନେ ଶାନ୍ତିମୟ ବସତି ସ୍ଥାନରେ, ଦୃଢ଼ ଆବାସରେ ଓ ସୁସ୍ଥିର ବିଶ୍ରାମ ସ୍ଥାନରେ ବାସ କରିବେ।
19 ೧೯ ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.
ମାତ୍ର ଅରଣ୍ୟର ପତନରେ ଶିଳାବୃଷ୍ଟି ହେବ ଓ ନଗର ସମ୍ପୂର୍ଣ୍ଣ ରୂପେ ନିପାତିତ ହେବ।
20 ೨೦ ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ!
ସଜଳ ସ୍ଥାନସବୁରେ ବୀଜ ବୁଣୁଅଛ ଓ ଗୋରୁ ଗର୍ଦ୍ଦଭକୁ ବାହାରେ ପଠାଉଅଛ ଯେ ତୁମ୍ଭେମାନେ, ତୁମ୍ଭେମାନେ ଧନ୍ୟ।