< ಯೆಶಾಯನು 33 >

1 ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.
Due, ɔdesɛefo, wo a wɔnsɛee wo! Due, ɔfatwafo, wo a wonnii wo huammɔ! sɛ wugyae adesɛe a, wɔbɛsɛe wo; sɛ wuwie huammɔdi a, wobedi wo huammɔ.
2 ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ. ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.
Ao Awurade, hu yɛn mmɔbɔ; yɛn ani da wo so. Yɛ yɛn ahoɔden anɔpa biara, ne yɛn nkwagye wɔ ahohia mu.
3 ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.
Aman no te wo nne mmubomu a, woguan; sɛ woma wo ho so a amanaman no bɔ ahwete.
4 ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.
Wɔtase mo asade, Ao amanaman, sɛnea mmoadabimma yɛ; nnipa tow hyɛ so te sɛ mmoadabi dɔm.
5 ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.
Wɔama Awurade so, na ɔte ɔsorosoro; ɔde trenee ne adetreneeyɛ bɛhyɛ Sion ma.
6 ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು.
Ɔbɛyɛ fapem a atim yiye wɔ mo mmere so, nkwagye, nyansa ne nhumu mmoroso akorae; Awurade suro ne ademude yi akorae ano safe.
7 ಇಗೋ, ಅವರ ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ, ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.
Monhwɛ, wɔn mmarima akokodurufo su teɛteɛɛ mu wɔ mmɔnten so; asomdwoe ho abɔfo su yayaayaw.
8 ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ; ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು.
Atempɔn no so da hɔ kwa, akwantufo biara nni akwan no so. Wɔabu apam no so, wobu nʼadansefo animtiaa wommu obiara.
9 ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.
Asase no wo kesee na ɛsɛe, Lebanon agyigya na nʼanim agu ase; Saron ayɛ sɛ Araba, Basan ne Karmel porow wɔn nhaban.
10 ೧೦ ಯೆಹೋವನು ಹೀಗೆನ್ನುತ್ತಾನೆ, “ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
“Afei na mɛsɔre,” sɛɛ na Awurade se. “Afei na wɔbɛpagyaw me ɛ; afei na wɔbɛma me so.
11 ೧೧ ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ. ನಿಮ್ಮ ಉಸಿರೇ ನಿಮ್ಮನ್ನು ನುಂಗುವ ಜ್ವಾಲೆಯಾಗುವುದು.
Munyinsɛn ntɛtɛ, na mowo sare; mo home yɛ ogya a ɛhyew mo.
12 ೧೨ ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು.
Wɔbɛhyew aman no ama wɔatɔ nso; wɔbɛto wɔn mu gya te sɛ nsɔe a wɔatwa.”
13 ೧೩ ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸಮೀಪದಲ್ಲಿರುವವರೇ, ನನ್ನ ಪರಾಕ್ರಮವನ್ನು ತಿಳಿದುಕೊಳ್ಳಿರಿ.
Mo a mowɔ akyirikyiri no, muntie nea mayɛ; mo a mobɛn no, monkamfo me kɛseyɛ!
14 ೧೪ “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.
Nnebɔneyɛfo a wɔwɔ Sion abɔ huboa; ahopopo aka wɔn a wonnim Onyame: “Yɛn mu hena na obetumi ne ogya a ɛhyew ade atena? Yɛn mu hena na obetumi ne daa ogyatannaa atena?”
15 ೧೫ ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.
Nea ɔnantew trenee mu na odi nokware nea ɔpo mfaso a asisi de ba na onnye adanmude, nea ontie awudi ho pɔwbɔ nea ɔmpɛ sɛ ohu bɔneyɛ ho agyinatu,
16 ೧೬ ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.
saa onipa yi na ɔbɛtena ɔsorosoro hɔ, ne guankɔbea bɛyɛ bepɔw aban no. Wɔde nʼaduan bɛma no na ne nsu remmɔ no.
17 ೧೭ ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ.
Mo ani behu ɔhene no wɔ nʼanuonyam mu na ahwɛ asase a ɛtrɛw kɔ akyirikyiri no.
18 ೧೮ ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.
Mo adwennwen mu, mobɛbooboo nea na ohunahuna mo no ho: “Odwumayɛni panyin no wɔ he? Nea na ogyigye tow no wɔ he? Nea na ɔhwɛ abantenten so no wɔ he?”
19 ೧೯ ನಿಮಗೆ ತಿಳಿಯದ ಅನ್ಯಭಾಷೆಯನ್ನೂ, ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಆಡುವ ಆ ಕ್ರೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ.
Morenhu saa ahantanfo no bio, wɔn a wɔn kasa mu nna hɔ, na monte nea wɔka no ase no.
20 ೨೦ ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ, ಗೂಟಕೀಳದ, ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.
Monhwɛ Sion, yɛn afahyɛ kuropɔn no; mo ani behu Yerusalem, asomdwoe tenabea, ntamadan a wontutu; wɔrentutu ne nnyinaso da, na wɔrentetew ne ntampehama mu nso.
21 ೨೧ ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.
Ɛhɔ na Awurade bɛyɛ yɛn Tumfo. Ɛbɛyɛ sɛ faako a nsu akɛse ne nsuwansuwa wɔ. Akorow a wɔhare remfa so ahyɛn akɛse rennantew so.
22 ೨೨ ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.
Na Awurade ne yɛn temmufo, Awurade ne yɛn mmarahyɛfo, Awurade ne yɛn hene; na ɔno na obegye yɛn nkwa.
23 ೨೩ ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.
Wo ntampehama mu agow enti hyɛn dua no nni nnyinaso, na wɔntrɛw hyɛn so ntama no mu. Afei wɔbɛkyɛ asade bebree no mu na mpakye mpo bɛsoa asade akɔ.
24 ೨೪ ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.
Obiara nni Sion a ɔbɛka se, “Meyare;” na wɔde wɔn a wɔte hɔ no bɔne bɛkyɛ wɔn.

< ಯೆಶಾಯನು 33 >