< ಯೆಶಾಯನು 34 >
1 ೧ ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.
১জাতিরা, তোমরা কাছে এস, শোন; লোকেরা, তোমরা শোন। পৃথিবী ও তার মধ্যেকার সবাই শুনুক; জগৎ এবং তার থেকে আসা সব জিনিস শুনুক।
2 ೨ ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ.
২কারণ সদাপ্রভু সব জাতির ওপরে ক্রুদ্ধ হয়েছেন এবং তাদের সব সৈন্যদলের বিরুদ্ধে ক্রোধান্বিত হয়ে আছেন। তিনি তাদেরকে সম্পূর্ণ ধ্বংস করেছেন, তিনি তাদেরকে হত্যার হাতে তুলে দিয়েছেন।
3 ೩ ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು.
৩তাদের নিহত লোকেরা বাইরে নিক্ষিপ্ত হবে। তাদের মৃতদেহের দুর্গন্ধ সব জায়গায় থাকবে এবং তাদের রক্তে পাহাড়-পর্বত ভিজে যাবে।
4 ೪ ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.
৪আকাশের সব তারাগুলো ফ্যাকাশে হয়ে যাবে এবং আকাশ গোটানো কাগজের মত জড়িয়ে যাবে। যেমন আঙ্গুর লতার পাতা ফ্যাকাশে হয় এবং ডুমুর গাছের ডুমুর পেকে যায়।
5 ೫ ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.
৫কারণ আমার তরোয়াল স্বর্গে পরিতৃপ্ত হয়েছে; দেখ, এটা ইদোমের ওপরে নেমে আসবে, তার লোকদের ওপরে যাকে আমি বিনষ্ট করেছি।
6 ೬ ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.
৬সদাপ্রভুর তরোয়াল রক্তে স্নান করেছে এবং চর্বিতে ঢাকা পড়েছে, মেষশাবকের ও ছাগলের রক্তে স্নান করেছে, ভেড়ার বৃক্কের মেদে ঢাকা পড়েছে। কারণ সদাপ্রভু বস্রা শহরে বলিদান এবং ইদোমে এক বিশাল হত্যা করেছেন।
7 ೭ ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಮತ್ತು ಹೋರಿಗೂಳಿಗಳೂ ಹತವಾಗುವವು. ಆ ದೇಶವು ರಕ್ತದಿಂದ ತೊಯಿದಿರುವುದು, ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.
৭তাদের সঙ্গে বুনো ষাঁড়, যুব ষাঁড় ও বড় বড় ষাঁড় হত্যা করা হবে। তাদের দেশ রক্তে পরিতৃপ্ত এবং তাদের ধূলো মেদে তৈরী হবে।
8 ೮ ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.
৮কারণ সদাপ্রভুর জন্য প্রতিহিংসার এক দিন হবে এবং এ সিয়োনের কারণে প্রতিফলদানের বছর।
9 ೯ ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು.
৯ইদোমের জলের স্রোতগুলো আলকাতরায় পরিণত হবে, তার ধূলো গন্ধকে পরিণত হবে এবং তার দেশ জ্বলন্ত আলকাতরার হবে।
10 ೧೦ ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.
১০দিনের রাতে এটা জ্বলবে; তার ধোঁয়া চিরকাল উঠতে থাকবে; বংশের পর বংশ ধরে এটা পতিত জমি হবে; কেউ তার মধ্য দিয়ে চিরকাল যাবে না।
11 ೧೧ ಆದರೆ ಕಾಡಿನ ಪಕ್ಷಿಗಳು, ಪ್ರಾಣಿಗಳು ಅಲ್ಲಿ ವಾಸಿಸುವವು. ಗೂಬೆ ಮತ್ತು ಕಾಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ನಾಶ ಎಂಬ ನೂಲನ್ನೂ ಪಾಳು ಎಂಬ ಮಟ್ಟಗೋಲನ್ನೂ ಎಳೆಯುವನು.
১১কিন্তু বন্য পাখি এবং প্রাণী থাকবে; পেঁচা ও দাঁড়কাক তাঁর মধ্যে বাসা করবে। তিনি তা ধ্বংস করে ফেলবেন এবং ধ্বংসের পতন ঘটাবেন।
12 ೧೨ ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕುವುದಿಲ್ಲ; ದೇಶದಲ್ಲಿ ಪ್ರಧಾನರೇ ಇಲ್ಲದಂತಾಗುವರು.
১২তার উচ্চপদস্থ লোকেরা রাজত্ব ঘোষণা কেউই থাকবে না; তার সব নেতারা কিছুই না।
13 ೧೩ ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.
১৩কাটাগাছ তার প্রাসাদগুলোর থেকে অত্যন্ত বেড়ে যাবে, দুর্গগুলো বিছুটি আর কাঁটাঝোপে বেড়ে যাবে। সেই দেশ শিয়ালের ও উটপাখীর বসবাসের জায়গা হবে।
14 ೧೪ ಕಾಡುಮೃಗಗಳು ಮತ್ತು ನರಿಗಳು ಅಲ್ಲಿ ಸಂಧಿಸುವವು, ಕಾಡಿನ ಆಡುಗಳು ತನ್ನ ಜೊತೆಯನ್ನು ಕೂಗುವುದು, ಭೂತ ಪ್ರೇತಗಳು ಅಲ್ಲಿ ಹಾಯಾಗಿ ವಿಶ್ರಮಿಸಿಕೊಂಡು, ಆಸರೆಯನ್ನು ಕಂಡುಕೊಳ್ಳುವುದು.
১৪বন্য পশুরা হায়নাদের সঙ্গে মিলবে এবং বন্য ছাগল একে অপরকে আহ্বান করবে; নিশাচর প্রাণী সেখানে থাকবে এবং তাদের জন্য এক বাসা খুঁজে পাবে।
15 ೧೫ ಅಲ್ಲಿ ಗೂಬೆಯೂ ಗೂಡನ್ನು ಮಾಡಿಕೊಂಡು ಮೊಟ್ಟೆಯಿಟ್ಟು, ಮರಿಮಾಡಿ ಮರೆಯಲ್ಲಿ ಕೂಡಿಸಿಕೊಳ್ಳುವುದು. ಹೌದು, ಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವವು.
১৫পেঁচা বাসা বানাবে সেখানে ডিম রাখবে, ডিম পারবে ও তার তরুণদের রক্ষা করবে। হ্যাঁ, সেখানে চিলগুলো প্রত্যেকে সঙ্গিনীর সঙ্গে জড়ো হবে।
16 ೧೬ ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು.
১৬সদাপ্রভুর বইয়ে খুঁজে দেখ; তাদের একটাও হারিয়ে যাবে না। তাদের একজনেরও সঙ্গিনীর অভাব হবে না; কারণ তাঁর মুখ এটা আদেশ দিয়েছে এবং তাঁর আত্মা তাদের জড়ো করেছেন।
17 ೧೭ ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
১৭তিনি তাদের জায়গাগুলোর জন্য গুলিবাঁট করেছেন এবং তাঁর হাত তা দড়ি দিয়ে তাদের জন্য পরিমাপ করেছে। তারা চিরকালের জন্য তা অধিকার করবে; বংশের পর বংশ ধরে তারা সেখানে বাস করবে।